tamanvi
ಶಿಕ್ಷಣ

ಅಂಬಿಕಾ ಮಹಾವಿದ್ಯಾಲಯದ ಹಿರಿಯ ವಿದ್ಯಾರ್ಥಿನಿಯರಿಗೆ ರ್ಯಾಂಕ್

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಬಪ್ಪಳಿಗೆಯಲ್ಲಿನ ಅಂಬಿಕಾ ಪದವಿ ಮಹಾವಿದ್ಯಾಲಯದ ಮೂವರು ಹಿರಿಯ ವಿದ್ಯಾರ್ಥಿನಿಯರು ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳ ಸ್ನಾತಕೋತ್ತರ ಪದವಿಗಳಲ್ಲಿ ರ್ಯಾಂಕ್ ಗಳಿಸಿದ್ದಾರೆ.

ಮಂಗಳೂರು ವಿಶ್ವವಿದ್ಯಾಲಯದಲ್ಲಿ ಗಣಿತ ಶಾಸ್ತ್ರ ಎಂ.ಎಸ್ಸಿ. ಪದವಿ ಅಧ್ಯಯನ ನಡೆಸಿರುವ ವರೇಣ್ಯಾ ಬಿ. ಮೊದಲ ರ್ಯಾಂಕ್ ಗಳಿಸಿದರೆ, ಬೆಂಗಳೂರಿನ ರಾಜೀವ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಸ್ನಾತಕೋತ್ತರ ಕ್ಲಿನಿಕಲ್ ಸೈಕಾಲಜಿ ವಿದ್ಯಾರ್ಥಿನಿ ನಯನಾ ದ್ವಿತೀಯ ರ್ಯಾಂಕ್ ಗಳಿಸಿರುತ್ತಾರೆ. ಅಂತೆಯೇ ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಸ್ನಾತಕೋತ್ತರ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ಅಧ್ಯಯನ ನಡೆಸಿರುವ ಮೇಘಾ ಡಿ. ಅವರು ನಾಲ್ಕನೇ ರ್ಯಾಂಕಿಗೆ ಭಾಜನರಾಗಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರಿನಲ್ಲಿ ಸಂಭ್ರಮದ 28ನೇ ವರ್ಷದ ‘ಶ್ರೀಕೃಷ್ಣಲೋಕ’ ;1,250ಕ್ಕೂ ಅಧಿಕ ಪುಟಾಣಿ ಕೃಷ್ಣ-ರಾಧೆಯರಿಂದ ವೈಭವದ ಶೋಭಾಯಾತ್ರೆ

ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧೀನದಲ್ಲಿರುವ ಪರ್ಲಡ್ಕ ಶಿವಪೇಟೆಯ ವಿವೇಕಾನಂದ…