tamanvi
ಶಿಕ್ಷಣ

ದ್ವಿತೀಯ ಪಿಯು ಫಲಿತಾಂಶ – ವಿವೇಕಾನಂದ ವಸತಿನಿಲಯಕ್ಕೆ ಶೇ. 100 ಫಲಿತಾಂಶ: ಅಭಿನಂದನೆ

ಈ ಸುದ್ದಿಯನ್ನು ಶೇರ್ ಮಾಡಿ

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ 2025-26ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ 1ರಲ್ಲಿ ವಿವೇಕಾನಂದ ವಸತಿನಿಲಯದಲ್ಲಿ ವಾಸ್ತವ್ಯ ಹೊಂದಿ, ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ಅಧ್ಯಯನ ನಡೆಸಿದ ವಸತಿ ನಿಲಯದ 102 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ.

ಅದೇ ರೀತಿ 73 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿರುತ್ತಾರೆ. ವಸತಿ ನಿಲಯದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಅಂಕಗಳೊಂದಿಗೆ ಉತ್ತೀರ್ಣರಾಗಿದ್ದು 100% ಫಲಿತಾಂಶವನ್ನು ನೀಡಿರುತ್ತಾರೆ. ಈ ಪೈಕಿ 590 ಕ್ಕಿಂತ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಾದ ಮನ್ಮಿತಾ – ವಾಣಿಜ್ಯ ವಿಭಾಗ (596 – 99%), ಬಿಂದು ಎಚ್‌ ಆರ್‌ – ವಾಣಿಜ್ಯ ವಿಭಾಗ (596 – 99%), ತೀರ್ಥಾ ಶೆಟ್ಟಿ – ವಿಜ್ಞಾನ ವಿಭಾಗ (595 – 99%), ಪ್ರಾಪ್ತಿ ಆಳ್ವ – ವಿಜ್ಞಾನ ವಿಭಾಗ (593 – 98%), ಗೌರವ್‌ ಎಂ ಕಶ್ಯಪ್‌ – ವಾಣಿಜ್ಯ ವಿಭಾಗ (590 – 98%), ಅದಿತಿ ಯು – ವಿಜ್ಞಾನ ವಿಭಾಗ (590 – 98%), ಅಪೂರ್ವ ಎ ಆರ್‌ – ವಾಣಿಜ್ಯ ವಿಭಾಗ (590 – 98%) ಅವರನ್ನು ಸನ್ಮಾನಿಸಲಾಯಿತು.

ವಿವೇಕಾನಂದ ವಿದ್ಯಾವರ್ಧಕ ಸಂಘದ ಆಶ್ರಯದಲ್ಲಿ ಆರಂಭವಾದ ವಿವೇಕಾನಂದ ವಸತಿನಿಲಯಗಳು ವಿದ್ಯಾರ್ಥಿಗಳಲ್ಲಿ ಕಲಿಕಾ ಉತ್ಸಾಹವನ್ನು ತುಂಬಿ ಸಮಾಜಮುಖಿ ಜೀವನ ಪದ್ಧತಿಯನ್ನು ತುಂಬುವ ಧ್ಯೇಯವನ್ನು ಹೊಂದಿದೆ.

ಪ್ರೌಢ ಶಿಕ್ಷಣದಿಂದ ಇಂಜಿನಿಯರಿಂಗ್ ಅಥವಾ ವೃತ್ತಿಪರ ಶಿಕ್ಷಣ ವಿಭಾಗದ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ 5 ವಿವಿಧ ವಸತಿನಿಲಯಗಳಿರುತ್ತದೆ. ನಮ್ಮ ವಸತಿನಿಲಯದಲ್ಲಿ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ವಿಶಾಲವಾದ ಕೊಠಡಿಗಳು, ಸಭಾಂಗಣ, ಶುಚಿ-ರುಚಿಯಾದ ಊಟೋಪಚಾರ ಮತ್ತು ಭೋಜನದ ವ್ಯವಸ್ಥೆಯ ಜೊತೆಗೆ ಎಲ್ಲಾ ರೀತಿಯ ಮೂಲಭೂತ ಸೌಕರ್ಯಗಳನ್ನು ಹೊಂದಿರುತ್ತದೆ. 2026-27 ನೇ ಸಾಲಿನ ದಾಖಲಾತಿ ಈಗಾಗಲೇ ಪ್ರಾರಂಭಗೊಂಡಿದ್ದು ವಿದ್ಯಾರ್ಥಿಗಳು ಇದರ ಸದುಪಯೋಗ ಮಾಡಿಕೊಳ್ಳಬಹುದು.

ಅಭಿನಂದನಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಹೆತ್ತವರು, ಆಡಳಿತ ಮಂಡಳಿ ಅಧ್ಯಕ್ಷರು, ಸದಸ್ಯರು, ಪ್ರಾಂಶುಪಾಲರು, ಉಪನ್ಯಾಸಕರು, ವಸತಿ ನಿಲಯದ ಆಡಳಿತಾಧಿಕಾರಿ, ಮುಖ್ಯ ನಿಲಯ ಪಾಲಕರು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಬೆಳಾಲು ಧ.ಮಂ. ಪ್ರೌಢಶಾಲೆಯಲ್ಲಿ ತಾಲೂಕು ಮಟ್ಟದ ನೆಟ್‌ಬಾಲ್ ಪಂದ್ಯಾಟ: ಆತಿಥೇಯ ಶಾಲೆಗೆ ಬಾಲಕಿಯರ ವಿಭಾಗದಲ್ಲಿ ಪ್ರಥಮ

ಬೆಳಾಲು: ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ಸೆ. 9ರಂದು ತಾಲೂಕು ಮಟ್ಟದ…

ಪುತ್ತೂರಿನಲ್ಲಿ ಸಂಭ್ರಮದ 28ನೇ ವರ್ಷದ ‘ಶ್ರೀಕೃಷ್ಣಲೋಕ’ ;1,250ಕ್ಕೂ ಅಧಿಕ ಪುಟಾಣಿ ಕೃಷ್ಣ-ರಾಧೆಯರಿಂದ ವೈಭವದ ಶೋಭಾಯಾತ್ರೆ

ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧೀನದಲ್ಲಿರುವ ಪರ್ಲಡ್ಕ ಶಿವಪೇಟೆಯ ವಿವೇಕಾನಂದ…

ಜ್ಞಾನ, ಪ್ರೀತಿಯ ಬೆಸುಗೆಯೇ ವಿವೇಕ | ಸಂತ ಫಿಲೋಮಿನಾ ಕಾಲೇಜಿನ ಪ್ರಥಮ ಪದವೀಧರರ ಸಮಾರಂಭದಲ್ಲಿ ಡಾ| ಪೀಟರ್ ಪಾವ್ಲ್ ಸಲ್ದಾನ

ಪುತ್ತೂರು: ಪದವಿ ಪಡೆಯುವುದರೊಂದಿಗೆ ಜ್ಞಾನಾರ್ಜನೆ ಮುಗಿಯುವುದಿಲ್ಲ; ಬದಲಾಗಿ ನಿಮ್ಮ ಜ್ಞಾನದ…

ತಾಲ್ಲೂಕು ಮಟ್ಟದ ಶಟಲ್ ಬ್ಯಾಡ್ಮಿಟನ್ ಪಂದ್ಯಾಟ | ವಿದ್ಯಾರ್ಥಿಗಳು ಸೋಲು ಗೆಲುವನ್ನು ಸಮಾನವಾಗಿ ಕಾಣಬೇಕು : ಸುರೇಶ್ ಶೆಟ್ಟಿ

ಪುತ್ತೂರು: ವಿದ್ಯಾರ್ಥಿಗಳು ಗೆಲುವನ್ನು ಮಾತ್ರ ನಿರೀಕ್ಷಿಸುತ್ತಿರಬಾರದ್ಲು. ಸೋತಾಗಲೂ ಅನುಭವ…