tamanvi
ಶಿಕ್ಷಣ

ಇಂದು ಮಧ್ಯಾಹ್ನ 12ಕ್ಕೆ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ!

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳು ಮತ್ತು ಪೋಷಕರು ಕಾಯುತ್ತಿದ್ದ ಕ್ಷಣ ಇಂದು ಸಾಕಾರಗೊಳ್ಳುತ್ತಿದೆ. ಎಸ್‌ಎಸ್‌ಎಲ್‌ಸಿ (SSLC) ಪರೀಕ್ಷೆಯ ಫಲಿತಾಂಶವನ್ನು ಇಂದು (ಏಪ್ರಿಲ್ 23, 2026) ಮಧ್ಯಾಹ್ನ 12 ಗಂಟೆಗೆ ಅಧಿಕೃತವಾಗಿ ಪ್ರಕಟಿಸಲಾಗುತ್ತಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಬಿಡುಗಡೆ ಮಾಡುವರು.

maithri

ಈ ಬಾರಿ ರಾಜ್ಯದಾದ್ಯಂತ 2,870 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆದಿದ್ದು, ಒಟ್ಟು 8,65,988 ವಿದ್ಯಾರ್ಥಿಗಳು ಹಾಜರಾಗಿದ್ದರು. ಇವರ ಶೈಕ್ಷಣಿಕ ಬದುಕಿನ ಪ್ರಮುಖ ಹಂತವಾದ ಈ ಫಲಿತಾಂಶ ಇಂದು ನಿರ್ಧಾರವಾಗಲಿದೆ. ಫಲಿತಾಂಶ ಪ್ರಕಟವಾದ ನಂತರ ವಿದ್ಯಾರ್ಥಿಗಳು ಅಧಿಕೃತ ವೆಬ್‌ಸೈಟ್‌ಗಳಲ್ಲಿ ತಮ್ಮ ಅಂಕಪಟ್ಟಿಯನ್ನು ಪರಿಶೀಲಿಸಬಹುದು.

ತೃತೀಯ ಭಾಷೆ ಹಿಂದಿಗೆ ಅಂಕಗಳ ಬದಲು ಗ್ರೇಡ್ ನೀಡುವ ಬಗ್ಗೆ ಸರ್ಕಾರ ಹಿಂದೆ ಚಿಂತನೆ ನಡೆಸಿತ್ತು. ಆದರೆ ನ್ಯಾಯಾಲಯದ ನಿರ್ದೇಶನದ ಹಿನ್ನೆಲೆಯಲ್ಲಿ, ಈ ಬಾರಿ ಹಿಂದಿಗೂ ಅಂಕಗಳನ್ನು ನೀಡಲು ಶಿಕ್ಷಣ ಇಲಾಖೆ ನಿರ್ಧರಿಸಿದೆ. ಈ ವಿಷಯವಾಗಿ ಸಚಿವ ಮಧು ಬಂಗಾರಪ್ಪ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದರು.

ಎಸ್‌ಎಸ್‌ಎಲ್‌ಸಿ ಫಲಿತಾಂಶದ ಜೊತೆಗೆ ಇಂದಿನಿಂದ ರಾಜ್ಯಾದ್ಯಂತ ಸಿಇಟಿ (CET) ಪರೀಕ್ಷೆಗಳೂ ಆರಂಭವಾಗುತ್ತಿವೆ. ಈ ಬಾರಿ ಸುಮಾರು 3.3 ಲಕ್ಷ ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. ಬೆಂಗಳೂರಿನಲ್ಲಿ ಮಾತ್ರ 163 ಕೇಂದ್ರಗಳಲ್ಲಿ 77,604 ಅಭ್ಯರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ.

ಪರೀಕ್ಷಾ ಅಕ್ರಮಗಳನ್ನು ತಡೆಯಲು ಎಲ್ಲಾ ಕೇಂದ್ರಗಳಲ್ಲಿ ಜಾಮರ್‌ಗಳನ್ನು ಅಳವಡಿಸಲಾಗಿದೆ. ಕೇಂದ್ರಗಳ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರು ಈ ಕುರಿತು ಆದೇಶ ನೀಡಿದ್ದಾರೆ. ಕೆಇಎ (KEA) ಕಚೇರಿಯಲ್ಲಿ ವಿಶೇಷ ನಿಯಂತ್ರಣ ಕೇಂದ್ರವನ್ನು ಸ್ಥಾಪಿಸಿ ಪರೀಕ್ಷೆಗಳ ಮೇಲೆ ಕಣ್ಣಿಟ್ಟಲಾಗಿದೆ.

ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಸರಳವಾಗಿ ಮತ್ತು ವೇಗವಾಗಿ ಪರಿಶೀಲಿಸಲು ಅಧಿಕೃತ ವೆಬ್‌ಸೈಟ್‌ಗಳನ್ನು ಬಳಸುವಂತೆ ಸೂಚಿಸಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ವಿವೇಕಾನಂದ ವಿದ್ಯಾವರ್ಧಕ ಸಂಘಕ್ಕೆ ನೂತನ ಸಾರಥ್ಯ! | ಪುತ್ತೂರು ಎಪಿಎಂಸಿ ಮಾಜಿ ಅಧ್ಯಕ್ಷ ಕೃಷ್ಣ ಶೆಟ್ಟಿ ಕಡಬ ಸಾರಥಿ!

ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾಗಿ, ಪುತ್ತೂರು ಎಪಿಎಂಸಿ ಮಾಜಿ ಅಧ್ಯಕ್ಷ…

ಪುತ್ತೂರು: ಸೈಂಟ್ ಪಿಲೋಮಿನಾ ಕಾಲೇಜಿನಲ್ಲಿ ‘ಮಾಸ್ಟರ್ ಮಿಕ್ಸ್ ಶೆಫ್ಟ್’ ಅಗ್ನಿಯಿಲ್ಲದೆ ಅಡುಗೆ ಸ್ಪರ್ಧೆ

ಪುತ್ತೂರು:ಇಲ್ಲಿನ ಸೈಂಟ್ ಪಿಲೋಮಿನಾ ಕಾಲೇಜಿನ ಸ್ನಾತಕೋತ್ತರ ಸಮಾಜಕಾರ್ಯ ವಿಭಾಗದ ವತಿಯಿಂದ…