tamanvi
ಶಿಕ್ಷಣ

ಅಕ್ಷಯ ಕಾಲೇಜು ಇಂಟೀರಿಯರ್ ಡಿಸೈನ್ ಅಂಡ್ ಡೆಕೋರೇಷನ್ ವಿಭಾಗದ ಬಿತ್ತಿ ಪತ್ರಿಕೆ ಉದ್ಘಾಟನೆ

ಈ ಸುದ್ದಿಯನ್ನು ಶೇರ್ ಮಾಡಿ

ಅಕ್ಷಯ ಎಜುಕೇಶನಲ್ ಅಂಡ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿರುವ ಅಕ್ಷಯ ಕಾಲೇಜಿನ ಇಂಟೀರಿಯರ್ ಡಿಸೈನ್ ಅಂಡ್ ಡೆಕೋರೇಷನ್ ವಿಭಾಗದ ಬಿತ್ತಿ ಪತ್ರಿಕೆ ಉದ್ಘಾಟನೆ ಎಲೈಟ್ ಅಸೋಸಿಯೇಷನ್ ಹಾಗೂ ಐಕ್ಯೂ ಎಸಿ ಎಸೋಸಿಯೇಷನ್ ವತಿಯಿಂದ ನಡೆಯಿತು.

‘ಆಟಿಲಿಯರ್’ ಬಿತ್ತಿ ಪತ್ರಿಕೆ ಉದ್ಘಾಟನೆ ಮಾಡಿದ ಆರ್ಕಿಟೆಕ್ಟ್ ರಾಮ್ ಪ್ರಕಾಶ್ ಅವರು ಒಳಾಂಗಣ ವಿನ್ಯಾಸವು ಕೇವಲ ತಾಂತ್ರಿಕ ಕೌಶಲ್ಯವಲ್ಲ. ಅದು ಬಹುಮುಖಿ ಕಲೆಯ ಮಿಶ್ರಣವೂ ಆಗಿದೆ. ಈ ಕಲೆಯನ್ನು ವಿದ್ಯಾರ್ಥಿಗಳು ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ ಕಾಲೇಜಿನ ಪ್ರಾಂಶುಪಾಲ ಸಂಪತ್ ಕೆ ಪಕ್ಕಳ ಅವರು ಅನೇಕ ಉತ್ತಮ ರೀತಿಯ ಲೇಖನಗಳು ಬರುತ್ತಿರಲಿ ಎಂದು ಹಾರೈಸಿದರು.

ಕಾಲೇಜಿನ ಆಡಳಿತಾಧಿಕಾರಿ ಅರ್ಪಿತ್ ಟಿ.ಎ., ಎಲೈಟ್ ಎಸೋಸಿಯೇಷನ್ ಸಂಯೋಜಕಿ ಹಾಗೂ ವಿದ್ಯಾರ್ಥಿ ಪದಾಧಿಕಾರಿಗಳು ಹಾಜರಿದ್ದರು. ಇಂಟೀರಿಯರ್ ಡಿಸೈನ್ ವಿಭಾಗದ ವಿದ್ಯಾರ್ಥಿಗಳು ಕಾರ್ಯಕ್ರಮ ನಡೆಸಿಕೊಟ್ಟರು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಬೆಳಾಲು ಧ.ಮಂ. ಪ್ರೌಢಶಾಲೆಯಲ್ಲಿ ತಾಲೂಕು ಮಟ್ಟದ ನೆಟ್‌ಬಾಲ್ ಪಂದ್ಯಾಟ: ಆತಿಥೇಯ ಶಾಲೆಗೆ ಬಾಲಕಿಯರ ವಿಭಾಗದಲ್ಲಿ ಪ್ರಥಮ

ಬೆಳಾಲು: ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ಸೆ. 9ರಂದು ತಾಲೂಕು ಮಟ್ಟದ…

ಪುತ್ತೂರಿನಲ್ಲಿ ಸಂಭ್ರಮದ 28ನೇ ವರ್ಷದ ‘ಶ್ರೀಕೃಷ್ಣಲೋಕ’ ;1,250ಕ್ಕೂ ಅಧಿಕ ಪುಟಾಣಿ ಕೃಷ್ಣ-ರಾಧೆಯರಿಂದ ವೈಭವದ ಶೋಭಾಯಾತ್ರೆ

ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧೀನದಲ್ಲಿರುವ ಪರ್ಲಡ್ಕ ಶಿವಪೇಟೆಯ ವಿವೇಕಾನಂದ…

ತಾಲ್ಲೂಕು ಮಟ್ಟದ ಶಟಲ್ ಬ್ಯಾಡ್ಮಿಟನ್ ಪಂದ್ಯಾಟ | ವಿದ್ಯಾರ್ಥಿಗಳು ಸೋಲು ಗೆಲುವನ್ನು ಸಮಾನವಾಗಿ ಕಾಣಬೇಕು : ಸುರೇಶ್ ಶೆಟ್ಟಿ

ಪುತ್ತೂರು: ವಿದ್ಯಾರ್ಥಿಗಳು ಗೆಲುವನ್ನು ಮಾತ್ರ ನಿರೀಕ್ಷಿಸುತ್ತಿರಬಾರದ್ಲು. ಸೋತಾಗಲೂ ಅನುಭವ…

ಸೆ. 10 ಮತ್ತು 11ರಂದು ಎಸ್‌ಡಿಎಂ ಸ್ವಾಯತ್ತ ಕಾಲೇಜಿನಲ್ಲಿ ರಾಷ್ಟ್ರಮಟ್ಟದ ‘ಆರೋಹಂ’ ಶೈಕ್ಷಣಿಕ–ಸಾಂಸ್ಕೃತಿಕ ಉತ್ಸವ

ಉಜಿರೆ: ಸ್ಥಳೀಯ ಎಸ್‌ಡಿಎಂ ಸ್ವಾಯತ್ತ ಕಾಲೇಜಿನಲ್ಲಿ ಸೆ. 10 ಮತ್ತು 11ರಂದು ರಾಷ್ಟ್ರಮಟ್ಟದ…