tamanvi
ಶಿಕ್ಷಣ

ವಿವೇಕಾನಂದ ಪಾಲಿಟೆಕ್ನಿಕ್‌ನಲ್ಲಿ ಬಹುಬೇಡಿಕೆಯ 3 ಹೊಸ ಕೋರ್ಸ್‌ ಆರಂಭ

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಪುತ್ತೂರಿನ ವಿವೇಕಾನಂದ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಇದೀಗ 3 ಹೊಸ ಕೋರ್ಸ್’ಗಳನ್ನು ಆರಂಭಿಸಲಾಗಿದೆ ಎಂದು ಆಡಳಿತ ಮಂಡಳಿ ಅಧ್ಯಕ್ಷ ವಿಶ್ವೇಶ್ವರ ಭಟ್ ಬಂಗಾರಡ್ಕ ಹೇಳಿದರು.

ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಿವೇಕಾನಂದ ಪಾಲಿಟೆಕ್ನಿಕ್ ಕಾಲೇಜು 4 ದಶಕಗಳ ಶೈಕ್ಷಣಿಕ ವರ್ಷಗಳನ್ನು ಪೂರೈಸಿದ್ದು ಸಂಸ್ಥೆಯಲ್ಲಿ ಇದೀಗ 2026-27ನೇ ಶೈಕ್ಷಣಿಕ ಸಾಲಿನಿಂದ ಆಟೋಮೇಷನ್ ಆಂಡ್ ರೊಬೋಟಿಕ್, ಆರ್ಟಿಫೀಶಿಯಲ್ ಇಂಟಲೆಜನ್ಸಿ ಆಂಡ್ ಮೆಷಿನ್ ಲರ್ನಿಂಗ್(ಕೃತಕ ಬುದ್ದಿಮತ್ತೆ), ಇಲೆಕ್ಟ್ರಿಕಲ್ ಇಂಜಿನಿಯರಿಂಗ್ ಆಂಡ್ ಇಲೆಕ್ಟ್ರಿಕಲ್ ವೆಹಿಕಲ್ ಟೆಕ್ನೋಲಜಿಗಳನ್ನು ಸೇರ್ಪಡೆಗೊಳಿಸಲಾಗಿದೆ ಎಂದರು.

ಆಧುನಿಕ ವಿದ್ಯಾಮಾನಕ್ಕೆ ಸರಿಯಾದ ಬೇಡಿಕೆಯಲ್ಲಿರುವ ಈ ಮೂರು ಹೊಸ ಕೋರ್ಸ್‌ಗಳಿಗೆ ನವದೆಹಲಿಯ ಎಐಸಿಟಿಇಯಿಂದ ಮಾನ್ಯತೆ ನೀಡಿದೆ. ವಿವೇಕಾನಂದ ಪಾಲಿಟೆಕ್ನಿಕ್ ಸಂಸ್ಥೆಯು ತಾಂತ್ರಿಕ ಪರೀಕ್ಷಾ ಮಂಡಳಿ ಬೆಂಗಳೂರು ಇವರೊಂದಿಗೆ ಸಂಯೋಜನೆಗೊಂಡಿದೆ ಎಂದರು.

ಈಗಾಗಲೇ ಸಂಸ್ಥೆಯಲ್ಲಿ ಸಿವಿಲ್ ಇಂಇನಿಯರಿಂಗ್, ಮೆಕ್ಯಾನಿಕಲ್ ಇಂಜಿನಿಯರಿಂಗ್, ಇಲೆಕ್ಟ್ರಾನಿಕ್ಸ್ ಮತ್ತು ಕಮ್ಯೂನಿಕೇಶನ್ ಇಂಜಿನಿಯರಿಂಗ್, ಆಟೋಮೊಬೈಲ್ ಇಂಜಿನಿಯರಿಂಗ್ ಮತ್ತು ಕಂಪ್ಯೂಟರ್ ಸೈನ್ಸ್ ಮತ್ತು ಇಂಜಿನಿಯರಿಂಗ್ ಡಿಪ್ಲೋಮಾ ಕೋರ್ಸ್ ಗಳು ಇವೆ. ಇದರ ಜೊತೆಗೆ ಇದೀಗ ಮೂರು ಹೊಸ ಕೋರ್ಸ್ ಗಳು ಸೇರ್ಪಡೆಗೊಂಡಿವೆ. ನೂತನ ಮೂರು ಕೋರ್ಸ್‌ಗಳ ಸೇರ್ಪಡೆಗೆ ಸಂಬಂಧಿಸಿ ಇಲಾಖೆಗಳಿಂದ ಅನುಮತಿ ಕೊಡಿಸುವಲ್ಲಿ ಶಾಸಕ ಅಶೋಕ್ ಕುಮಾರ್ ರೈ ಅವರು ಉತ್ತಮ ಸಹಕಾರ ನೀಡಿದ್ದಾರೆ. ಅವರಿಗೆ ನಾವು ಅಭಿನಂದನೆ ಸಲ್ಲಿಸುತ್ತೇವೆ ಎಂದರು.

ಸೇರ್ಪಡೆಗೊಂಡ ಮೂರು ಹೊಸ ಕೋರ್ಸ್‌ಗಳಲ್ಲಿ ತಲಾ 30 ಸೀಟುಗಳು ಲಭ್ಯವಿದೆ. ಡಿಪ್ಲೋಮಾ ಶಿಕ್ಷಣ ಪಡೆಯಲು ಕನಿಷ್ಠ ವಿದ್ಯಾರ್ಹತೆ ಎಸ್‌ಎಸ್‌ಎಲ್‌ಸಿ ಆಗಿರಬೇಕು. ಡಿಪ್ಲೊಮಾ ಪದವಿ ಪಡೆದವರು 3 ವರ್ಷಗಳ ಪಾಲಿಟೆಕ್ನಿಕ್ ಕೋರ್ಸ್‌ಗಳ ಬಳಿಕ ನೇರವಾಗಿ ಇಂಜಿನಿಯರಿಂಗ್ 2 ನೇ ವರ್ಷಕ್ಕೆ ಪ್ರವೇಶ, ಪಿಯುಸಿ ವಿಜ್ಞಾನ ವಿಭಾಗ ಮತ್ತು ಐಟಿಐ ಪಾಸಾದ ವಿದ್ಯಾರ್ಥಿಗಳಿಗೆ ಡಿಪ್ಲೋಮಾದ 2ನೇ ವರ್ಷಕ್ಕೆ ನೇರ ದಾಖಲಾತಿ, ಕಂಪೆನಿಗಳಲ್ಲಿ ಇಂಟರ್‌ಶಿಪ್ ಟ್ರೈನಿಂಗ್, ಕಂಪೆನಿಗಳಿಗೆ ಕಾಲೇಜಿನಿಂದ ನೇರ ನೇಮಕಾತಿ, ಸುಸಜ್ಜಿತ ಕೊಠಡಿಗಳು, ಗ್ರಂಥಾಲಯ, ಪ್ರಯೋಗಾಲಯ, ವಿಶಾಲವಾದ ಆಟದ ಮೈದಾನವಿದೆ. ಸರಕಾರದಿಂದ ಕೊಡಮಾಡುವ ಎಲ್ಲಾ ವಿದ್ಯಾರ್ಥಿ ವೇತನಗಳು, ಆಡಳಿತ ಮಂಡಳಿಯ ವತಿಯಿಂದ ನೀಡುವ ದತ್ತಿನಿಧಿ ವಿದ್ಯಾರ್ಥಿವೇತನಗಳು ಲಭ್ಯ. ವಸತಿ ನಿಲಯಗಳಿವೆ. ಆರ್ಥಿಕವಾಗಿ ಹಿಂದುಗಳಿದಿರುವ ಅರ್ಹ ಬಡ ವಿದ್ಯಾರ್ಥಿಗಳಗೆ ವಿವೇಕಾನಂದ ವಿದ್ಯಾವರ್ಧಕ ಸಂಘದಿಂದ ಶುಲ್ಕ ರಿಯಾಯಿತಿ ನೀಡಲಾಗುತ್ತದೆ ಎಂದು ವಿವರಿಸಿದರು.

ಪತ್ರಿಕಾಗೋಷ್ಟಿಯಲ್ಲಿ ಸಂಸ್ಥೆಯ ಸಂಚಾಲಕ ಮಣಿಲ ಮಹಾದೇವ ಶಾಸ್ತ್ರೀ, ಆಡಳಿತ ಮಂಡಳಿ ಸದಸ್ಯರಾದ ರವಿಮುಂಗ್ಲಿಮನೆ, ಈಶ್ವರಚಂದ್ರ, ಪ್ರಶಾಂತ್, ಪ್ರಾಂಶುಪಾಲ ಮುರಳಿಧರ, ಸಿವಿಲ್ ವಿಭಾಗದ ಮುಖ್ಯಸ್ಥ ರವಿರಾಮ ಸಿದ್ಧಮೂಲೆ, ಕಂಪ್ಯೂಟರ್ ವಿಭಾಗದ ಮುಖ್ಯಸ್ಥೆ ಪುಷ್ಪಾ ಉಪಸ್ಥಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರಿನಲ್ಲಿ ಸಂಭ್ರಮದ 28ನೇ ವರ್ಷದ ‘ಶ್ರೀಕೃಷ್ಣಲೋಕ’ ;1,250ಕ್ಕೂ ಅಧಿಕ ಪುಟಾಣಿ ಕೃಷ್ಣ-ರಾಧೆಯರಿಂದ ವೈಭವದ ಶೋಭಾಯಾತ್ರೆ

ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧೀನದಲ್ಲಿರುವ ಪರ್ಲಡ್ಕ ಶಿವಪೇಟೆಯ ವಿವೇಕಾನಂದ…

ಬೆಳಾಲು ಧ.ಮಂ. ಪ್ರೌಢಶಾಲೆಯಲ್ಲಿ ತಾಲೂಕು ಮಟ್ಟದ ನೆಟ್‌ಬಾಲ್ ಪಂದ್ಯಾಟ: ಆತಿಥೇಯ ಶಾಲೆಗೆ ಬಾಲಕಿಯರ ವಿಭಾಗದಲ್ಲಿ ಪ್ರಥಮ

ಬೆಳಾಲು: ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ಸೆ. 9ರಂದು ತಾಲೂಕು ಮಟ್ಟದ…

ಜ್ಞಾನ, ಪ್ರೀತಿಯ ಬೆಸುಗೆಯೇ ವಿವೇಕ | ಸಂತ ಫಿಲೋಮಿನಾ ಕಾಲೇಜಿನ ಪ್ರಥಮ ಪದವೀಧರರ ಸಮಾರಂಭದಲ್ಲಿ ಡಾ| ಪೀಟರ್ ಪಾವ್ಲ್ ಸಲ್ದಾನ

ಪುತ್ತೂರು: ಪದವಿ ಪಡೆಯುವುದರೊಂದಿಗೆ ಜ್ಞಾನಾರ್ಜನೆ ಮುಗಿಯುವುದಿಲ್ಲ; ಬದಲಾಗಿ ನಿಮ್ಮ ಜ್ಞಾನದ…

ತಾಲ್ಲೂಕು ಮಟ್ಟದ ಶಟಲ್ ಬ್ಯಾಡ್ಮಿಟನ್ ಪಂದ್ಯಾಟ | ವಿದ್ಯಾರ್ಥಿಗಳು ಸೋಲು ಗೆಲುವನ್ನು ಸಮಾನವಾಗಿ ಕಾಣಬೇಕು : ಸುರೇಶ್ ಶೆಟ್ಟಿ

ಪುತ್ತೂರು: ವಿದ್ಯಾರ್ಥಿಗಳು ಗೆಲುವನ್ನು ಮಾತ್ರ ನಿರೀಕ್ಷಿಸುತ್ತಿರಬಾರದ್ಲು. ಸೋತಾಗಲೂ ಅನುಭವ…