ಶಿಕ್ಷಣ

ಅಕ್ಷಯ ಪದವಿ ಪೂರ್ವ ಕಾಲೇಜಿನಲ್ಲಿ “ಆರೋರಾ” ಡೈನಮಿಕ್ ಬಿಗಿನಿಂಗ್ 2026-27 ಶೈಕ್ಷಣಿಕ ವರ್ಷ ಆರಂಭ

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಅಕ್ಷಯ ಎಜುಕೇಶನಲ್ ಮತ್ತು ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಪದವಿ ಪೂರ್ವ ಕಾಲೇಜು ಹಾಗೂ ಅಕ್ಷಯ ಕೆರಿಯರ್ ಅಕಾಡೆಮಿ ವಿದ್ಯಾರ್ಥಿಗಳ ಶೈಕ್ಷಣಿಕ ವರ್ಷದ ಆರಂಭಆರೋರಕಾರ್ಯಕ್ರಮ ನಡೆಯಿತು.

maithri

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಅಕ್ಷಯ ಶಿಕ್ಷಣ ಸಮೂಹ ಸಂಸ್ಥೆಗಳ ಅಧ್ಯಕ್ಷ ಜಯಂತ್ ನಡುಬೈಲು ಮಾತನಾಡಿ, ಪೋಷಕರು ಮಕ್ಕಳಿಗೆ ಸಂಪತ್ತನ್ನು ಮಾಡುವ ಬದಲಾಗಿ ಮಕ್ಕಳನ್ನೇ ಸರಿಯಾದ ವಿದ್ಯಾಭ್ಯಾಸ ನೀಡಿ ಅವರನ್ನು ಸಂಪತ್ತನಾಗಿ ರೂಪಿಸುವ ಜವಾಬ್ದಾರಿ ಪೋಷಕರು ಶಿಕ್ಷಕರು ಹಾಗೂ ಸಂಸ್ಥೆಯ ಮೇಲಿರುತ್ತದೆ ಎಂದು ಹೇಳಿದರು.

ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಉದಯೋನ್ಮುಖ ಯುವ ಪ್ರತಿಭೆ ಕನಿಷ್ಕ ಮನೋಜ್ ಕರ್ಕೆರ ಅವರು, ವಿದ್ಯಾರ್ಥಿಗಳು ವಿದ್ಯಾರ್ಥೀ ಜೀವನದಲ್ಲಿ ಅನೇಕ ಸ್ಪರ್ಧೆಗಳಲ್ಲಿ ಭಾಗವಹಿಸಬೇಕು. ಸ್ಪರ್ಧೆಯಲ್ಲಿ ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸಿದಾಗ ಮಾತ್ರ ನಾವು ಜೀವನದಲ್ಲಿ ಉನ್ನತ ಸ್ಥಾನವನ್ನು ಏರಲು ಸಾಧ್ಯ ಎಂದರು.

ಕಾರ್ಯಕ್ರಮದಲ್ಲಿ ಗೌರವ ಅತಿಥಿಗಳಾಗಿ ಉಪಸ್ಥಿತರಿದ್ದ ಅಕ್ಷಯ ಪದವಿ ಕಾಲೇಜಿನ ಪ್ರಾಂಶುಪಾಲರಾದ ಸಂಪತ್ ಕೆ ಪಕ್ಕಳ ಮಾತನಾಡಿ, ನಮ್ಮ ಕಾಲೇಜಿನಲ್ಲಿ ಪದವಿ ಮತ್ತು ಪದವಿ ಪೂರ್ವ ಕಾಲೇಜಿನಲ್ಲಿರುವ ಕೋರ್ಸ್ ಗಳು ಮತ್ತು ಅವಕಾಶಗಳ ಬಗ್ಗೆ ಪೋಷಕರಿಗೆ ತಿಳಿಸಿದರು.

ಕಾಲೇಜಿನ ಆಡಳಿತ ಅಧಿಕಾರಿ ಅರ್ಪಿತ್ ಟಿ.ಎ. ಅವರು ವಿದ್ಯಾರ್ಥಿ ಜೀವನದಲ್ಲಿ ಅಂಕಗಳ ಜೊತೆ ಅವರ ಕೌಶಲ್ಯವನ್ನು ಹೆಚ್ಚಿಸಿಕೊಂಡಾಗ ಮಾತ್ರ ಅವರು ಸುಲಭವಾಗಿ ಉದ್ಯೋಗವನ್ನು ಪಡೆಯಬಹುದು ಎಂದು ಸೂಚಿಸಿದರು.

ಕಾಲೇಜಿನ ವ್ಯವಸ್ಥಾಪಕ ನಿರ್ದೆಶಕಿ ಕಲಾವತಿ ಜಯಂತಿ, ಕೆರಿಯರ್ ಡೆಸ್ಟಿನಿ ಮಂಗಳೂರು ಇದರ ಸ್ಥಾಪಕರಾದ ಜಯಶ್ರೀ ಉಪಸ್ಥಿತರಿದ್ದರು.

ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಗಂಗಾರತ್ನ ಪ್ರಾಸ್ತಾವಿಕವಾಗಿ ಮಾತನಾಡಿದರು. ಉಪನ್ಯಾಸಕರಾದ ಭೂಮಿಕ ಬಿ ವಿ ಸ್ವಾಗತಿಸಿ, ನವನೀತ ಎಂ ವಂದಿಸಿ, ಪರಿಮಳ ರಾವ್ ನಿರೂಪಿಸಿದರು.

ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನಿರ್ದೇಶಕರಾದ ಅಭಿಲಾಶ್ ಕ್ಷತ್ರಿಯ ಹಾಗೂ ಅಕ್ಷಯ ಕೆರಿಯರ್ ಅಕಾಡೆಮಿ ವಿದ್ಯಾರ್ಥಿಗಳಿಗೆ ಏವಿಯೇಷನ್ ಟ್ರೈನರ್ ಜಯಶ್ರೀ ಓರಿಯಂಟೇಶನ್ ಕಾರ್ಯಕ್ರಮ ನಡೆಸಿದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts