ಶಿಕ್ಷಣ

ಅಂಬಿಕಾ ವಿದ್ಯಾಲಯ ಸಿಬಿಎಸ್ಇ ಸಂಸ್ಥೆಯಲ್ಲಿ ಅಭಿನಂದನೆ

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಬಪ್ಪಳಿಗೆಯ ಅಂಬಿಕಾ ಸಿ.ಬಿ.ಎಸ್.ಇ ವಿದ್ಯಾಲಯದಲ್ಲಿ ಶನಿವಾರದಂದು 2025 – 26ನೇ ಸಾಲಿನಲ್ಲಿ ಹತ್ತನೇ ತರಗತಿಯಯಲ್ಲಿ ಉತ್ತಮ ಅಂಕಗಳನ್ನು ಗಳಿಸಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ ನಡೆಯಿತು.

ಶಾಲಾ ಪ್ರಾಂಶುಪಾಲೆ ಮಾಲತಿ ಡಿ. ಮಾತನಾಡಿ ನಾವೆಲ್ಲರೂ ರಾಷ್ಟ್ರಕ್ಕಾಗಿ ಸೇವೆಯನ್ನು ಸಲ್ಲಿಸಬೇಕು. ನಿಗದಿತ ಗುರಿಯೊಂದಿಗೆ ಮುನ್ನಡೆಯುತ್ತಾ  ಜೀವನದಲ್ಲಿ ಏನನ್ನಾದರೂ ಸಾಧಿಸಿ ತೋರಿಸುವ ಮಟ್ಟಕ್ಕೆ ಬೆಳೆದು ನಿಲ್ಲಬೇಕು. ವಿದ್ಯಾರ್ಥಿ ಜೀವನದಲ್ಲಿ ಶಿಕ್ಷಕರ ಮಾರ್ಗದರ್ಶನವನ್ನು ಅಳವಡಿಸಿಕೊಂಡು ಮುನ್ನಡೆಯಬೇಕು ಎಂದು ತಿಳಿ ಹೇಳಿದರು.

ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ಚಂದ್ರಕಾಂತ್ ಪೈ ಹಾಗೂ ದೀಪಿಕಾ ಕಜೆ ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು.  ತನ್ನ ಅನಿಸಿಕೆಗಳನ್ನು ವ್ಯಕ್ತಪಡಿಸಿದರು. ಶಿಕ್ಷಕಿಯರಾದ ಅಶ್ವಿನಿ, ಕೃತಿಕ ಹಾಗೂ ದೀಪ್ತಿ ಮಕ್ಕಳಿಗೆ ಶುಭ ಹಾರೈಸಿದರು.  2025-26ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ವಾರ್ಷಿಕ ಪರೀಕ್ಷೆಯಲ್ಲಿ ಉತ್ತೀರ್ಣರಾದ ಎಲ್ಲಾ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು. ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಸ್ಮರಣಿಕೆ ನೀಡಿ ಗೌರವಿಸಲಾಯಿತು.

ವೇದಿಕೆಯಲ್ಲಿ ವಿದ್ಯಾಲಯದ  ಉಪಪ್ರಾಂಶುಪಾಲೆ  ಸುಜನಿ ಬೋರ್ಕರ್ ಉಪಸ್ಥಿತರಿದ್ದರು.  ಶಿಕ್ಷಕಿಯರಾದ ಸಹನಾ ಪ್ರಾರ್ಥಿಸಿ, ಕೃತಿಕ ಕಾರ್ಯಕ್ರಮ ನಿರ್ವಹಿಸಿ, ವಂದಿಸಿದರು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಅಂಬಿಕಾ ವಿದ್ಯಾಲಯ ಸಿಬಿಎಸ್ಇ ಸಂಸ್ಥೆಯಲ್ಲಿ ಪ್ರತಿಭಾ ತರಂಗಿಣಿ | ಸ್ವಂತ ಸಾಮರ್ಥ್ಯ ಅರಿತುಕೊಳ್ಳಿ: ಡಾ.ಎಂ.ನರಸಿಂಹ ಮೂರ್ತಿ

ಪುತ್ತೂರು: ನಾವಿಂದು ಕೃತಕ ಬುದ್ಧಿಮತ್ತೆಯ ಕಾಲದಲ್ಲಿದ್ದೇವೆ. ಎಐ ಎಂಬುದು ನಾವು ಮಾಹಿತಿಯನ್ನು…

ಯೂತ್ ರೆಡ್’ಕ್ರಾಸ್ ಪ್ರೇರಣಾ ಶಿಬಿರ: ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜು ವಿದ್ಯಾರ್ಥಿ ತಂಡಕ್ಕೆ ಬೆಸ್ಟ್ ಟೀಮ್ ಅವಾರ್ಡ್

ಪುತ್ತೂರು: ಮಂಗಳೂರು ವಿಶ್ವವಿದ್ಯಾಲಯದ ಯುವ ರೆಡ್‌ಕ್ರಾಸ್ ಘಟಕ, ಭಾರತೀಯ ರೆಡ್‌ಕ್ರಾಸ್ ಸಂಸ್ಥೆ…