tamanvi
ಶಿಕ್ಷಣ

ನೆಲ್ಲಿಕಟ್ಟೆ ಅಂಬಿಕಾ ಪದವಿ ಪೂರ್ವ ವಿದ್ಯಾಲಯದಲ್ಲಿ ಯೋಗ ಆಚರಣೆ | ಯೋಗದಿಂದ ಮನಸ್ಸು ಶುದ್ಧ: ಶರಾವತಿ ಪುತ್ತೂರು

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಯೋಗ ಭಾರತದ ಕೊಡುಗೆ. ಭಾರತ ಯೋಗವನ್ನು ವಿಶ್ವಕ್ಕೆ ಪರಿಚಯ ಮಾಡುವ ಕೆಲಸವನ್ನು ಮಾಡಿದೆ. ಯೋಗವನ್ನು ಮಾಡುವುದರ ಮೂಲಕ ಪ್ರತಿಯೊಬ್ಬರೂ ಸಂಕಲ್ಪ ಸಿದ್ಧಿ ಪಡೆಯಲು ಸಾಧ್ಯ ಎಂದು ಆರ್ಟ್ ಆಫ್ ಲಿವಿಂಗ್‌ನ ಯೋಗ ಶಿಕ್ಷಕಿ ಶರಾವತಿ ರವಿನಾರಾಯಣ ಹೇಳಿದರು.

maithri

ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ನೆಲಿಕಟ್ಟೆ ಪದವಿ ಪೂರ್ವ ವಿದ್ಯಾಲಯದಲ್ಲಿ ಸೋಮವಾರ ನಡೆದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಯೋಗವನ್ನು ಮಾಡುವುದರಿಂದ ಮನಸ್ಸು ಶುದ್ಧವಾಗುತ್ತದೆ. ಅರೋಗ್ಯ ವೃದ್ಧಿಯಾಗುತ್ತದೆ ಹಾಗೂ ಒತ್ತಡಗಳ ನಿಯಂತ್ರಣವಾಗುತ್ತದೆ. ಕಲಿಕೆಯ ಜೊತೆಗೆ ಯೋಗವನ್ನು ಅಳವಡಿಸಿಕೊಂಡರೆ ಬುದ್ಧಿ ಚುರುಕಾಗಿ ಚಂಚಲ ಮನಸ್ಸನ್ನು ಹತೋಟಿಯಲ್ಲಿಡಲು ಕೂಡ ಸಾಧ್ಯವಾಗುತ್ತದೆ. ಆದುದರಿಂದ ವಿದ್ಯಾರ್ಥಿಗಳು ಯೋಗದ ಅಭ್ಯಾಸವನ್ನು ಬೆಳೆಸಿಕೊಳ್ಳಬೇಕು ಎಂದು ತಿಳಿಸಿದರು.

ವೇದಿಕೆಯಲ್ಲಿ ಸಂಸ್ಥೆಯ ಪ್ರಾoಶುಪಾಲ ಸತ್ಯಜಿತ್ ಉಪಾಧ್ಯಾಯ ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಶತೋಧರಿ ಸ್ವಾಗತಿಸಿದರು. ವಿದ್ಯಾರ್ಥಿನಿ ಆದ್ಯಾ ಕಾರ್ಯಕ್ರಮ ನಿರೂಪಿಸಿ, ಆಪ್ತಾ ರೈ ವಂದಿಸಿದರು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಬ್ಯಾಂಕ್ ಆಫ್ ಬರೋಡದಲ್ಲಿ ಬ್ಯಾಂಕಿಂಗ್ ಅಸಿಸ್ಟೆಂಟ್ ಆಗಿ ಆಯ್ಕೆಯಾದ ವಿದ್ಯಾಮಾತಾ ಅಕಾಡೆಮಿ ವಿದ್ಯಾರ್ಥಿನಿ ಜಯಪ್ರಭಾ ಕೆ

ಪುತ್ತೂರು: ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಯಲ್ಲಿ ನಿರಂತರ ಯಶಸ್ಸು ದಾಖಲಿಸುತ್ತಿರುವ…