ಶಿಕ್ಷಣ

ಆಗತ ಸ್ವಾಗತ ಕಾರ್ಯಕ್ರಮ

ಈ ಸುದ್ದಿಯನ್ನು ಶೇರ್ ಮಾಡಿ

ಕಲ್ಲಡ್ಕ ಶ್ರೀರಾಮ ಪ್ರೌಢಶಾಲೆಯ ಮಧುಕರ ಸಭಾಂಗಣದಲ್ಲಿ 2026-27ನೇ ಸಾಲಿನ ಹೊಸದಾಗಿ ಸೇರ್ಪಡೆಗೊಂಡಂತಹ ವಿದ್ಯಾರ್ಥಿಗಳಿಗೆ ಆಗತ ಸ್ವಾಗತ ಕಾರ್ಯಕ್ರಮ ನಡೆಯಿತು.

maithri

ಕಾರ್ಯಕ್ರಮದ ಪ್ರಾರಂಭದಲ್ಲಿ ಹೊಸದಾಗಿ ಸೇರ್ಪಡೆಗೊಂಡ ವಿದ್ಯಾರ್ಥಿಗಳಿಗೆ ಆರತಿ ಬೆಳಗುವುದರ ಮೂಲಕ ಸ್ವಾಗತಿಸಲಾಯಿತು. ಕಾರ್ಯಕ್ರಮಕ್ಕೆ ಬಂದ ಅತಿಥಿ ಅಭ್ಯಾಗತರಿಂದ ದೀಪ ಪ್ರಜ್ವಲನೆ ಮತ್ತು ಭಾರತ ಮಾತೆಯ ಭಾವಚಿತ್ರಕ್ಕೆ ಪುಷ್ಪಾರ್ಚನೆಯನ್ನು ಮಾಡಲಾಯಿತು.

ಅಧ್ಯಕ್ಷತೆಯನ್ನು ವಹಿಸಿದ್ದ ಶ್ರೀರಾಮ ವಿದ್ಯಾಕೇಂದ್ರದ ಸಂಸ್ಥಾಪಕ, ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ್ ಭಟ್ ಕಲ್ಲಡ್ಕ ಮಾತನಾಡಿ, ಶಿಕ್ಷಣದ ಜೊತೆ ಸಂಸ್ಕಾರ ಅಗತ್ಯ. ಜ್ಞಾನದ ಮೂಲ ಭಾರತ. ಅದು ನಮಗೆ ಮಾದರಿಯಾಗಲಿ ಎಂದು ಶುಭ ಹಾರೈಸಿದರು.

ವಿಧಾನ ಪರಿಷತ್ ಸದಸ್ಯ ಶಾಂತರಾಮ ಬುದ್ನಾ  ಸಿದ್ದಿ ಮಾತನಾಡಿ, ಸಮಾಜವು ನಮಗೆ ಎಲ್ಲವನ್ನು ನೀಡಿದೆ. ನಮ್ಮಿಂದ ಸಮಾಜಕ್ಕೆ ಏನಾದರೂ ನೀಡುವ ಪ್ರಜೆಗಳಾಗಬೇಕು ಎಂದು ಶುಭ ಹಾರೈಸಿದರು.

ಎಸ್.ಎಲ್.ವಿ. ಗ್ರೂಪ್ ಚೈರ್‌ಮ್ಯಾನ್ ದಿವಾಕರ ದಾಸ್, ಚಿಕ್ಕಮಗಳೂರು ಬನ್ಯಾನ್ ಎಂಟರ್‌ಪ್ರೈಸಸ್ ಮ್ಯಾನೇಜಿಂಗ್ ಪಾರ್ಟನರ್ ನಿತೀಶ್ ಗೌಡ, ಮೋನಿಶಾ ನರಸಿಂಹ ಮೂರ್ತಿ ಚಿಕ್ಕಮಗಳೂರು, ಬೇಕಲ ಗೋಕುಲಂ ಗೋಶಾಲೆ ಪರಂಪರಾ ವಿದ್ಯಾಪೀಠಂ ಸ್ಥಾಪಕಿ ನಾಗರತ್ನ ವಿಷ್ಣು ಹೆಬ್ಬಾರ್, ಮಂಗಳೂರು ಸಾವಿತ್ರಿ ಮೆಮೊರಿಯಲ್ ಟ್ರಸ್ಟಿನ ವಿಶ್ವಾಸ ರಾವ್, ವಿಟಿವಿ ಆಡಳಿತ ನಿರ್ದೇಶಕ ರಾಮದಾಸ್ ಶೆಟ್ಟಿ ವಿಟ್ಲ ಉಪಸ್ಥಿತರಿದ್ದರು.

ವೇದಿಕೆಯಲ್ಲಿ ರಾಷ್ಟ್ರ ಸೇವಿಕಾ ಸಮಿತಿಯ ಕಾರ್ಯಕಾರಣಿ ಸದಸ್ಯೆ ಡಾ. ಕಮಲ ಪ್ರಭಾಕರ್ ಭಟ್, ವಿದ್ಯಾಕೇಂದ್ರದ ಸಂಚಾಲಕ ವಸಂತ ಮಾಧವ, ಶ್ರೀರಾಮ ಪ್ರೌಢಶಾಲೆಯ ಮುಖ್ಯ ಗುರು ಗೋಪಾಲ್ ಎಂ ಮತ್ತು ಹಿರಿಯ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಹೊಸದಾಗಿ ಸೇರ್ಪಡೆಗೊಂಡ ವಿದ್ಯಾರ್ಥಿಗಳು ಅಗ್ನಿಹೋತ್ರಕ್ಕೆ ಘೃತಾಹುತಿಯನ್ನು ಮಾಡಿ, ಭಾರತಾಂಬೆಗೆ ಪುಷ್ಪಾರ್ಚನೆ ಮತ್ತು ಹಿರಿಯರಿಂದ ತಿಲಕ ಧಾರಣೆ ಯೊಂದಿಗೆ ಆಶೀರ್ವಾದ ಪಡೆದರು. 2025-26ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.

ಭುವಿ ಗೀತೆ ಹಾಡಿ, ತೃಪ್ತಿ ಕಾರ್ಯಕ್ರಮ ನಿರೂಪಿಸಿದರು. ಭೂಮಿಕಾ ಸ್ವಾಗತಿಸಿ,  ಪೂಜಿತ ವಂದಿಸಿದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ನಾಳೆ ಶ್ರೀಧರಾಭಿವಂದನ | ಡಾ. ಎಚ್.ಜಿ. ಶ್ರೀಧರ್ ಅವರಿಗೆ ಶಿಷ್ಯವೃಂದ, ಪುತ್ತೂರು ಕಸಾಪದಿಂದ ಸಾರ್ವಜನಿಕ ಸನ್ಮಾನ

ಪುತ್ತೂರು: ವಿವೇಕಾನಂದ ಕಾಲೇಜಿನ ನಿವೃತ್ತ ಪರೀಕ್ಷಾಂಗ ಕುಲಸಚಿವ ಡಾ.ಎಚ್‌.ಜಿ. ಶ್ರೀಧರ ಅವರಿಗೆ…