tamanvi
ಶಿಕ್ಷಣ

ನೆಲ್ಲಿಕಟ್ಟೆ ಅಂಬಿಕಾ ಪದವಿ ಪೂರ್ವ ವಿದ್ಯಾಲಯದಲ್ಲಿ ಪೋಷಕರ ಸಭೆ | ಅವಕಾಶವನ್ನು ಬಳಸಿಕೊಂಡಾಗ ಭವಿಷ್ಯ ಅತ್ಯುತ್ತಮ: ಅವಿನಾಶ್ ಕೊಡೆಂಕಿರಿ

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಅವಕಾಶಗಳನ್ನು ಯೋಗ್ಯ ರೀತಿಯಲ್ಲಿ ಬಳಸಿಕೊಂಡಾಗ ಭವಿಷ್ಯ ಅತ್ಯುತ್ತಮವಾಗಿರಲು ಸಾಧ್ಯ. ಪ್ರತಿಯೊಬ್ಬ ವಿದ್ಯಾರ್ಥಿಯೂ ಕೂಡಾ ಶ್ರದ್ಧೆಯಿಂದ ಕಲಿಕೆಯಲ್ಲಿ ಮುಂದುವರಿದರೆ ಯಶಸ್ಸು ಲಭಿಸುತ್ತದೆ ಎಂದು ನರಿಮೊಗರಿನ ಸರಸ್ವತಿ ವಿದ್ಯಾಲಯದ ಸಂಚಾಲಕ ಅವಿನಾಶ್ ಕೊಡೆಂಕಿರಿ ಹೇಳಿದರು.

ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ನೆಲ್ಲಿಕಟ್ಟೆ ಅಂಬಿಕಾ ಪದವಿ ಪೂರ್ವ ವಿದ್ಯಾಲಯದಲ್ಲಿ  ಶನಿವಾರ ನಡೆದ ರಕ್ಷಕ ಶಿಕ್ಷಕ ಸಂಘದ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.

ಅಧ್ಯಕ್ಷತೆ ವಹಿಸಿದ್ದ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಮಣ್ಯ ನಟ್ಟೋಜ ಮಾತನಾಡಿ ವಿದ್ಯಾರ್ಥಿಗಳು ಈ ದೇಶದ ಅಸ್ತಿ. ಕಲಿಕೆಯಲ್ಲಿ ತೊಡಗಿಸಿಕೊಳ್ಳುವಾಗ ಬರೀ ಓದಿಗೆ ಮಾತ್ರ ಮಹತ್ವ ಕೊಡುವುದಲ್ಲ. ಜೊತೆಗೆ ದೇಶದ ಸಂಸ್ಕೃತಿ, ಆಚಾರ ವಿಚಾರಗಳ ಬಗ್ಗೆಯೂ ಅರಿಯಬೇಕು. ಶಿಕ್ಷಣದ ಜೊತೆಗೆ ದೇಶಭಕ್ತಿಯನ್ನು ಮೈಗೂಡಿಸಿಕೊಳ್ಳಬೇಕು ಎಂದರು.

ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ರಾಜಶ್ರೀ ಎಸ್ ನಟ್ಟೋಜ ಹಾಗೂ ಸಂಸ್ಥೆಯ ಉಪನ್ಯಾಸಕರು ಉಪಸ್ಥಿತರಿದ್ದರು. ಪ್ರಾಂಶುಪಾಲ ಸತ್ಯಜಿತ್ ಉಪಾಧ್ಯಾಯ ಪ್ರಸ್ತಾವನೆಗೈದು ಸ್ವಾಗತಿಸಿದರು. ಉಪ ಪ್ರಾಂಶುಪಾಲೆ ವಿನುತಾ ಸಾಲೆ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರಿನಲ್ಲಿ ಸಂಭ್ರಮದ 28ನೇ ವರ್ಷದ ‘ಶ್ರೀಕೃಷ್ಣಲೋಕ’ ;1,250ಕ್ಕೂ ಅಧಿಕ ಪುಟಾಣಿ ಕೃಷ್ಣ-ರಾಧೆಯರಿಂದ ವೈಭವದ ಶೋಭಾಯಾತ್ರೆ

ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧೀನದಲ್ಲಿರುವ ಪರ್ಲಡ್ಕ ಶಿವಪೇಟೆಯ ವಿವೇಕಾನಂದ…

ಬೆಳಾಲು ಧ.ಮಂ. ಪ್ರೌಢಶಾಲೆಯಲ್ಲಿ ತಾಲೂಕು ಮಟ್ಟದ ನೆಟ್‌ಬಾಲ್ ಪಂದ್ಯಾಟ: ಆತಿಥೇಯ ಶಾಲೆಗೆ ಬಾಲಕಿಯರ ವಿಭಾಗದಲ್ಲಿ ಪ್ರಥಮ

ಬೆಳಾಲು: ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ಸೆ. 9ರಂದು ತಾಲೂಕು ಮಟ್ಟದ…

ಜ್ಞಾನ, ಪ್ರೀತಿಯ ಬೆಸುಗೆಯೇ ವಿವೇಕ | ಸಂತ ಫಿಲೋಮಿನಾ ಕಾಲೇಜಿನ ಪ್ರಥಮ ಪದವೀಧರರ ಸಮಾರಂಭದಲ್ಲಿ ಡಾ| ಪೀಟರ್ ಪಾವ್ಲ್ ಸಲ್ದಾನ

ಪುತ್ತೂರು: ಪದವಿ ಪಡೆಯುವುದರೊಂದಿಗೆ ಜ್ಞಾನಾರ್ಜನೆ ಮುಗಿಯುವುದಿಲ್ಲ; ಬದಲಾಗಿ ನಿಮ್ಮ ಜ್ಞಾನದ…