tamanvi
ಶಿಕ್ಷಣ

ವಿದತ್ ನೂತನ ಶಾಖೆ ನಗರದಲ್ಲಿ ‘ಆರಂಭ’- ಬ್ಯಾಚ್ ಉದ್ಘಾಟನಾ ಸಮಾರಂಭ

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ವಿದತ್ ಶಿಕ್ಷಣ ಸಂಸ್ಥೆಯ 2ನೇ ಶಾಖೆ ನೆಹರುನಗರದ ಅಶ್ವಿನ್ ಕಾಂಪ್ಲೆಕ್ಸ್ ನಲ್ಲಿ ಶುಭಾರಂಭಗೊಂಡಿದ್ದು, ಜೂನ್ 29ರಂದು ‘ಆರಂಭ’ ಬ್ಯಾಚ್‌ ಉದ್ಘಾಟನಾ ಸಮಾರಂಭ ಅದ್ದೂರಿಯಾಗಿ ನಡೆಯಿತು.

ಕಾರ್ಯಕ್ರಮವನ್ನು ನಿವೃತ್ತ ಐ.ಎ.ಎಸ್ ಅಧಿಕಾರಿ ಟಿ.ಕೆ. ಮನೋಜ್ ಕುಮಾರ್ ಉದ್ಘಾಟಿಸಿ, ವಿದ್ಯಾರ್ಥಿಗಳನ್ನು ಉದ್ದೇಶಿಸಿ ಪ್ರೇರಣಾದಾಯಕವಾಗಿ ಮಾತನಾಡಿದರು. ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸು ಸಾಧಿಸಲು ಶಿಸ್ತು, ನಿರಂತರ ಪರಿಶ್ರಮ ಹಾಗೂ ಆತ್ಮವಿಶ್ವಾಸದ ಮಹತ್ವವನ್ನು ಅವರು ವಿವರಿಸಿದರು.

ಸವಣೂರಿನ ವಿದ್ಯಾರಶ್ಮಿ ವಿದ್ಯಾಲಯದ ಮಾಜಿ ಪ್ರಾಂಶುಪಾಲ ಹಾಗೂ ಅರಸ್ ಟ್ರಸ್ಟ್‌ನ ಅಧ್ಯಕ್ಷ ಸೀತಾರಾಮ್ ಕೇವಳ ಮತ್ತು ಸರಸ್ವತಿ ಸಹಕಾರಿ ಬ್ಯಾಂಕ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಸಂತ್ ನಾಯಕ್ ಮುಖ್ಯ ಅತಿಥಿಗಳಾಗಿದ್ದರು.

ಈ ಸಂದರ್ಭದಲ್ಲಿ ಟಿ.ಕೆ. ಮನೋಜ್ ಕುಮಾರ್ ದಂಪತಿಯನ್ನು ವಿದತ್ ಸಂಸ್ಥೆಯ  ಸಂಸ್ಥಾಪಕ ಶ್ರೀವತ್ಸ್ ಬಿ.ಎಸ್. ಹಾಗೂ ಸಹ ಸಂಸ್ಥಾಪಕಿ ಶುಭಲಕ್ಷ್ಮೀ ಸನ್ಮಾನಿಸಿದರು.

‘ಆರಂಭ’ ಬ್ಯಾಚ್‌ ಉದ್ಘಾಟನೆಯು ಶಿಕ್ಷಣ ಕ್ಷೇತ್ರದಲ್ಲಿ ಹೊಸ ಹೆಜ್ಜೆಯಾಗಿದ್ದು, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಿದ್ಯಾರ್ಥಿಗಳನ್ನು ಸಮರ್ಥವಾಗಿ ಸಜ್ಜುಗೊಳಿಸುವ ಮಹತ್ವದ ಪ್ರಯತ್ನವಾಗಿದೆ.

ವಿದತ್ ಸಂಸ್ಥೆಯಲ್ಲಿ ಈ ಕೆಳಗಿನ ವಿಶೇಷ ತರಬೇತಿ ಕಾರ್ಯಕ್ರಮಗಳು ಲಭ್ಯವಿವೆ:

– ಕೆಸಿಇಟಿ (KCET) ತರಬೇತಿ

– ನೀಟ್ (NEET) ತರಬೇತಿ

– ಜೆಇಇ (JEE) ತರಬೇತಿ

– ಎಸ್‌ಎಸ್‌ಎಲ್‌ಸಿ (10ನೇ ತರಗತಿ) ವಿಶೇಷ ಬ್ಯಾಚ್

– 1ರಿಂದ 10ನೇ ತರಗತಿಯವರೆಗೆ ಅಡ್ವಾನ್ಸ್ ಟ್ಯೂಷನ್

– ಒಲಿಂಪಿಯಾಡ್ ತರಬೇತಿ

– ನವೋದಯ ಪ್ರವೇಶ ಪರೀಕ್ಷೆ ತರಬೇತಿ

ಅನುಭವ ಸಂಪನ್ನ ಶಿಕ್ಷಕರ ಮಾರ್ಗದರ್ಶನ, ತಂತ್ರಜ್ಞಾನ ಆಧಾರಿತ ಬೋಧನಾ ವಿಧಾನ, ವೈಯಕ್ತಿಕ ಗಮನ ಹಾಗೂ ವಿದ್ಯಾರ್ಥಿ ಸ್ನೇಹಿ ವಾತಾವರಣವು ವಿದತ್ ಸಂಸ್ಥೆಯ ಪ್ರಮುಖ ವಿಶೇಷತೆಗಳಾಗಿವೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರಿನಲ್ಲಿ ಸಂಭ್ರಮದ 28ನೇ ವರ್ಷದ ‘ಶ್ರೀಕೃಷ್ಣಲೋಕ’ ;1,250ಕ್ಕೂ ಅಧಿಕ ಪುಟಾಣಿ ಕೃಷ್ಣ-ರಾಧೆಯರಿಂದ ವೈಭವದ ಶೋಭಾಯಾತ್ರೆ

ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧೀನದಲ್ಲಿರುವ ಪರ್ಲಡ್ಕ ಶಿವಪೇಟೆಯ ವಿವೇಕಾನಂದ…

ಬೆಳಾಲು ಧ.ಮಂ. ಪ್ರೌಢಶಾಲೆಯಲ್ಲಿ ತಾಲೂಕು ಮಟ್ಟದ ನೆಟ್‌ಬಾಲ್ ಪಂದ್ಯಾಟ: ಆತಿಥೇಯ ಶಾಲೆಗೆ ಬಾಲಕಿಯರ ವಿಭಾಗದಲ್ಲಿ ಪ್ರಥಮ

ಬೆಳಾಲು: ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ಸೆ. 9ರಂದು ತಾಲೂಕು ಮಟ್ಟದ…

ಜ್ಞಾನ, ಪ್ರೀತಿಯ ಬೆಸುಗೆಯೇ ವಿವೇಕ | ಸಂತ ಫಿಲೋಮಿನಾ ಕಾಲೇಜಿನ ಪ್ರಥಮ ಪದವೀಧರರ ಸಮಾರಂಭದಲ್ಲಿ ಡಾ| ಪೀಟರ್ ಪಾವ್ಲ್ ಸಲ್ದಾನ

ಪುತ್ತೂರು: ಪದವಿ ಪಡೆಯುವುದರೊಂದಿಗೆ ಜ್ಞಾನಾರ್ಜನೆ ಮುಗಿಯುವುದಿಲ್ಲ; ಬದಲಾಗಿ ನಿಮ್ಮ ಜ್ಞಾನದ…