tamanvi
ಶಿಕ್ಷಣ

ವಿವೇಕಾನಂದ ವಿದ್ಯಾವರ್ಧಕ ಸಂಘಕ್ಕೆ ನೂತನ ಸಾರಥ್ಯ! | ಪುತ್ತೂರು ಎಪಿಎಂಸಿ ಮಾಜಿ ಅಧ್ಯಕ್ಷ ಕೃಷ್ಣ ಶೆಟ್ಟಿ ಕಡಬ ಸಾರಥಿ!

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾಗಿ, ಪುತ್ತೂರು ಎಪಿಎಂಸಿ ಮಾಜಿ ಅಧ್ಯಕ್ಷ ಕೃಷ್ಣ ಶೆಟ್ಟಿ ಕಡಬ ನೇಮಕಗೊಂಡಿದ್ದಾರೆ ಎಂದು ವರದಿಯಾಗಿದೆ.

maithri

ಡಾ. ಪ್ರಭಾಕರ ಭಟ್ ಕಲ್ಲಡ್ಕ ಅವರು ಅಧ್ಯಕ್ಷರಾಗಿರುವ ಹಾಲಿ ಆಡಳಿತ ಮಂಡಳಿಯ ಅವಧಿ ಜುಲೈ ಅಂತ್ಯಕ್ಕೆ ಮುಕ್ತಾಯಗೊಳ್ಳಲಿದೆ. ನೂತನ ಆಡಳಿತ ಮಂಡಳಿಯ ಆಯ್ಕೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ಅಧಿಕೃತ ಘೋಷಣೆಯಷ್ಟೇ ಬಾಕಿ ಉಳಿದಿದೆ ಎಂದು ತಿಳಿದುಬಂದಿದೆ.

ಕಳೆದ 10 ವರ್ಷಗಳಿಂದ ಡಾ. ಪ್ರಭಾಕರ ಭಟ್ ಕಲ್ಲಡ್ಕ ಅವರು ಅಧ್ಯಕ್ಷರಾಗಿದ್ದರು. ಪ್ರತಿ 5 ವರ್ಷಕ್ಕೊಮ್ಮೆ ಸಂಘದ ಆಡಳಿತ ಮಂಡಳಿ ಪುನಾರಚಣೆ ಆಗುತ್ತಿದ್ದು, ಓರ್ವ ಅಧ್ಯಕ್ಷರು ಎರಡು ಅವಧಿಗೆ ಅಧ್ಯಕ್ಷರಾಗಿ ಮುಂದುವರಿಯುವ ಅವಕಾಶ ಇದೆ. ಇದೀಗ ಜಿಪಂ ಮಾಜಿ ಸದಸ್ಯರೂ, ಪುತ್ತೂರು ಎಪಿಎಂಸಿ ಮಾಜಿ ಅಧ್ಯಕ್ಷರೂ ಆಗಿದ್ದ ಕೃಷ್ಣ ಶೆಟ್ಟಿ ಕಡಬ ಅವರು ಆಯ್ಕೆಯಾಗಿದ್ದಾರೆ. ಅದೇ ರೀತಿ ಉಪಾಧ್ಯಕ್ಷರಾಗಿ ರೂಪಲೇಖ, ಪ್ರಧಾನ ಕಾರ್ಯದರ್ಶಿಯಾಗಿ ವಿಜಯ ನಾರಾಯಣ, ಕೋಶಾಧಿಕಾರಿಯಾಗಿ ಸಂತೋಷ್ ಬೋನಂತಾಯ, ಜತೆ ಕಾರ್ಯದರ್ಶಿಗಳಾಗಿ ಭರತ್ ಪೈ ಹಾಗೂ ಕರುಣಾಕರ ಸುವರ್ಣ, ಮಹಾಲಕ್ಷ್ಮೀ, ರಮೇಶ್ಚಂದ್ರ, ವಸಂತ ಮಾಧವ, ಶ್ರೀಪತಿ ಕಲ್ಲೂರಾಯ, ರವೀಂದ್ರ ದಕ್ಷ ಅವರು ಹೊಸ ಸಮಿತಿಯಲ್ಲಿ ಸದಸ್ಯರಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಬ್ಯಾಂಕ್ ಆಫ್ ಬರೋಡದಲ್ಲಿ ಬ್ಯಾಂಕಿಂಗ್ ಅಸಿಸ್ಟೆಂಟ್ ಆಗಿ ಆಯ್ಕೆಯಾದ ವಿದ್ಯಾಮಾತಾ ಅಕಾಡೆಮಿ ವಿದ್ಯಾರ್ಥಿನಿ ಜಯಪ್ರಭಾ ಕೆ

ಪುತ್ತೂರು: ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಯಲ್ಲಿ ನಿರಂತರ ಯಶಸ್ಸು ದಾಖಲಿಸುತ್ತಿರುವ…