tamanvi
ಶಿಕ್ಷಣ

ಜಿಡೆಕಲ್ಲು ಸರಕಾರಿ ಕಾಲೇಜಿಗೆ ಹೆಚ್ಚುವರಿ ಬಸ್ ಸಂಪರ್ಕ ಕಲ್ಪಿಸುವಂತೆ ಶಾಸಕ ಅಶೋಕ್ ರೈಗೆ ವಿದ್ಯಾರ್ಥಿಗಳಿಂದ ಮನವಿ

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಜಿಡೆಕಲ್ಲು ಪ್ರಥಮ ದರ್ಜೆ ಸರಕಾರಿ ಕಾಲೇಜಿಗೆ ತೆರಳಲು ಹೆಚ್ಚುವರಿ ಸರಕಾರಿ ಬಸ್ ವ್ಯವಸ್ಥೆ ಕಲ್ಪಿಸುವಂತೆ ವಿದ್ಯಾರ್ಥಿಗಳು ಶಾಸಕ ಅಶೋಕ್ ರೈ ಅವರಿಗೆ ಮನವಿ ಸಲ್ಲಿಸಿದರು.

ಶಾಸಕರ ಕಚೇರಿಗೆ ಬಂದು ಮನವಿ ಸಲ್ಲಿಸಿದ ವಿದ್ಯಾರ್ಥಿಗಳು, ಜಿಡೆಕಲ್ಲು ಕಾಲೇಜಿನಲ್ಲಿ ಸುಮಾರು 150ಕ್ಕಿಂತ ಹೆಚ್ಚು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಈಗಾಗಲೇ ಬೆಳಗ್ಗೆ ಮತ್ತು ಸಂಜೆ ಒಂದು ಬಸ್ಸಿನ ವ್ಯವಸ್ಥೆ ಇದ್ದು, ಬಸ್ಸಿನಲ್ಲಿ ಪ್ರಯಾಣಿಸುವ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗಿರುವುದರಿಂದ ವಿದ್ಯಾರ್ಥಿಗಳಿಗೆ ಒಂದೇ ಬಸ್ಸಿನಲ್ಲಿ ಪ್ರಯಾಣಿಸಲು ಸಾಧ್ಯವಾಗುತ್ತಿಲ್ಲ. ಹಾಗಾಗಿ ಬೆಳಗ್ಗೆ ಮತ್ತು ಸಂಜೆ ಹೆಚ್ಚುವರಿ ಬಸ್ಸಿನ ವ್ಯವಸ್ಥೆಯನ್ನು ಕಲ್ಪಿಸಿ ಬೆಳಗ್ಗೆ ಗಂಟೆ 8.50 ಮತ್ತು 9.10 ಕ್ಕೆ ಹಾಗೂ ಸಂಜೆ 3.30 ಮತ್ತು 4.30 ಗಂಟೆಗೆ ಹೆಚ್ಚುವರಿ ಬಸ್ ವ್ಯವಸ್ಥೆಯನ್ನು ಒದಗಿಸಿ ಕೊಡುವಂತೆ ವಿನಂತಿಸಿದರು.

ವಿದ್ಯಾರ್ಥಿಗಳ ಮನವಿಗೆ ಸ್ಪಂದಿಸಿದ ಶಾಸಕ ಅಶೋಕ್ ಕುಮಾರ್ ರೈ ಅವರು, ವಿದ್ಯಾರ್ಥಿಗಳಾದ ನಿಮ್ಮ ಮನವಿ ನ್ಯಾಯಯುತವಾಗಿಯೇ ಇದೆ. ಈಗಾಗಲೇ ಎರಡು ಬಸ್ ವ್ಯವಸ್ಥೆ ಇದೆ. ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗಿರುವ ಕಾರಣ ಹೆಚ್ಚುವರಿ ಬಸ್ ಬೇಡಿಕೆ ಇಟ್ಟಿದ್ದೀರಿ. ಕೆಎಸ್ಆರ್ಟಿಸಿ ಡಿಸಿ ಜೊತೆ ಮಾತನಾಡಿ ಪರಿಶೀಲಿಸಿ ತಕ್ಷಣ ಕ್ರಮಕ್ಕೆ ಸೂಚನೆ ನೀಡುತ್ತೇನೆ ಎಂದರು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಬೆಳಾಲು ಧ.ಮಂ. ಪ್ರೌಢಶಾಲೆಯಲ್ಲಿ ತಾಲೂಕು ಮಟ್ಟದ ನೆಟ್‌ಬಾಲ್ ಪಂದ್ಯಾಟ: ಆತಿಥೇಯ ಶಾಲೆಗೆ ಬಾಲಕಿಯರ ವಿಭಾಗದಲ್ಲಿ ಪ್ರಥಮ

ಬೆಳಾಲು: ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ಸೆ. 9ರಂದು ತಾಲೂಕು ಮಟ್ಟದ…

ಪುತ್ತೂರಿನಲ್ಲಿ ಸಂಭ್ರಮದ 28ನೇ ವರ್ಷದ ‘ಶ್ರೀಕೃಷ್ಣಲೋಕ’ ;1,250ಕ್ಕೂ ಅಧಿಕ ಪುಟಾಣಿ ಕೃಷ್ಣ-ರಾಧೆಯರಿಂದ ವೈಭವದ ಶೋಭಾಯಾತ್ರೆ

ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧೀನದಲ್ಲಿರುವ ಪರ್ಲಡ್ಕ ಶಿವಪೇಟೆಯ ವಿವೇಕಾನಂದ…

ತಾಲ್ಲೂಕು ಮಟ್ಟದ ಶಟಲ್ ಬ್ಯಾಡ್ಮಿಟನ್ ಪಂದ್ಯಾಟ | ವಿದ್ಯಾರ್ಥಿಗಳು ಸೋಲು ಗೆಲುವನ್ನು ಸಮಾನವಾಗಿ ಕಾಣಬೇಕು : ಸುರೇಶ್ ಶೆಟ್ಟಿ

ಪುತ್ತೂರು: ವಿದ್ಯಾರ್ಥಿಗಳು ಗೆಲುವನ್ನು ಮಾತ್ರ ನಿರೀಕ್ಷಿಸುತ್ತಿರಬಾರದ್ಲು. ಸೋತಾಗಲೂ ಅನುಭವ…

ಸೆ. 10 ಮತ್ತು 11ರಂದು ಎಸ್‌ಡಿಎಂ ಸ್ವಾಯತ್ತ ಕಾಲೇಜಿನಲ್ಲಿ ರಾಷ್ಟ್ರಮಟ್ಟದ ‘ಆರೋಹಂ’ ಶೈಕ್ಷಣಿಕ–ಸಾಂಸ್ಕೃತಿಕ ಉತ್ಸವ

ಉಜಿರೆ: ಸ್ಥಳೀಯ ಎಸ್‌ಡಿಎಂ ಸ್ವಾಯತ್ತ ಕಾಲೇಜಿನಲ್ಲಿ ಸೆ. 10 ಮತ್ತು 11ರಂದು ರಾಷ್ಟ್ರಮಟ್ಟದ…