tamanvi
ಟ್ರೆಂಡಿಂಗ್ ನ್ಯೂಸ್ಶಿಕ್ಷಣ

ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯಲ್ಲಿ ಗುರುಪೂರ್ಣಿಮಾ ಆಚರಣೆ | ವ್ಯಕ್ತಿತ್ವ ನಿರ್ಮಾಣಕ್ಕೆ ಶಿಕ್ಷಣದೊಂದಿಗೆ ಸಂಸ್ಕಾರವೂ ಬೇಕು: ಪುರೋಹಿತ ನಾಗರಾಜ ಭಟ್

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ವ್ಯಾಸ ಪೂರ್ಣಿಮೆಯು ಅಜ್ಞಾನದ ಕತ್ತಲೆಯನ್ನು ದೂರ ಮಾಡಿ ಜ್ಞಾನದ ದೀಪ ಬೆಳಗಿಸಿದ ಮಹರ್ಷಿ ವ್ಯಾಸರನ್ನು ಸ್ಮರಿಸುವ ಅತ್ಯಂತ ಶ್ರೇಷ್ಠ ದಿನವಾಗಿದೆ. ಉತ್ತಮ ವ್ಯಕ್ತಿತ್ವ ನಿರ್ಮಾಣಕ್ಕೆ ಶಿಕ್ಷಣದೊಂದಿಗೆ ಸಂಸ್ಕಾರವೂ ಅಗತ್ಯವಾಗಿದ್ದು, ಪ್ರತಿಯೊಬ್ಬರ ಜೀವನದಲ್ಲಿ ಗುರುವಿನ ಸ್ಥಾನ ಅತ್ಯುನ್ನತವಾಗಿದೆ ಎಂದು ಬ್ರಹ್ಮಶ್ರೀ ಪುರೋಹಿತ ನಾಗರಾಜ ಭಟ್ ಹೇಳಿದರು.

maithri

ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿ.ಬಿ.ಎಸ್.ಇ. ಸಂಸ್ಥೆಯಲ್ಲಿ ಆಯೋಜಿಸಲಾದ ವ್ಯಾಸ ಪೂರ್ಣಿಮಾ ಆಚರಣೆಯಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.

ಸಮರ್ಥ ರಾಮದಾಸರು ಛತ್ರಪತಿ ಶಿವಾಜಿ ಮಹಾರಾಜರ ರಾಜಕೀಯ ಹಾಗೂ ಆಧ್ಯಾತ್ಮಿಕ ಜೀವನಕ್ಕೆ ಮಾರ್ಗದರ್ಶಕರಾಗಿದ್ದರು. ಹರಿಹರ ಮತ್ತು ಬುಕ್ಕರಾಯರಿಗೆ ವಿದ್ಯಾರಣ್ಯ ಸ್ವಾಮಿಗಳು ಮಾರ್ಗದರ್ಶನ ನೀಡಿ ಸಾಮ್ರಾಜ್ಯ ನಿರ್ಮಾಣಕ್ಕೆ ಪ್ರೇರಣೆಯಾಗಿದ್ದರು. ಶ್ರೀರಾಮಕೃಷ್ಣ ಪರಮಹಂಸರು ಸ್ವಾಮಿ ವಿವೇಕಾನಂದರ ಸಂಶಯಗಳನ್ನು ನಿವಾರಿಸಿ ಅವರನ್ನು ವಿಶ್ವಪ್ರಸಿದ್ಧ ಆಧ್ಯಾತ್ಮಿಕ ನಾಯಕನನ್ನಾಗಿ ರೂಪಿಸಿದರು. ಹೀಗೆ ಪ್ರತಿಯೊಬ್ಬ ಮಹಾನ್ ವ್ಯಕ್ತಿಯ ಯಶಸ್ಸಿನ ಹಿಂದೆ ಒಬ್ಬ ಶ್ರೇಷ್ಠ ಗುರುವಿನ ಮಾರ್ಗದರ್ಶನ ಇರುತ್ತದೆ ಎಂದು ಹೇಳಿದರು.

ಗುರುಪರಂಪರೆಯನ್ನು ಉಳಿಸಿ, ಸನಾತನ ಸಂಸ್ಕೃತಿಯನ್ನು ಬೆಳೆಸುತ್ತಾ ದೈಹಿಕ, ಮಾನಸಿಕ ಮತ್ತು ಶೈಕ್ಷಣಿಕ ಸಂಸ್ಕಾರಗಳನ್ನು ಅಳವಡಿಸಿಕೊಂಡು ಗುಣ, ವಿನಯಗಳಿಂದ ಕೂಡಿದ ಜೀವನ ನಡೆಸಿದಾಗ ಬದುಕು ಸಾರ್ಥಕವಾಗುತ್ತದೆ ಎಂದು ಅಭಿಪ್ರಾಯಪಟ್ಟರು. ಕಾರ್ಯಕ್ರಮದ ಆರಂಭದಲ್ಲಿ ವಿದ್ಯಾರ್ಥಿಗಳು ಬ್ರಹ್ಮಶ್ರೀ ಪುರೋಹಿತ ನಾಗರಾಜ ಭಟ್ ಅವರ  ಪಾದಪೂಜೆ ನೆರವೇರಿಸುವ ಮೂಲಕ ಗುರುವಂದನೆ ನಡೆಸಿದರು.

ಅಧ್ಯಕ್ಷತೆ ವಹಿಸಿದ್ದ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಗಣೇಶ್ ಪ್ರಸಾದ್ ಮಾತನಾಡಿ, ಭಾರತೀಯ ಸಂಸ್ಕೃತಿಯಲ್ಲಿ ಗುರುವಿಗೆ ದೇವರ ಸ್ಥಾನ ನೀಡಲಾಗಿದೆ. ಆಚಾರ್ಯ ದೇವೋ ಭವ ಎಂಬ ಸಂದೇಶವು ಗುರುವಿನ ಮಹತ್ವವನ್ನು ಸಾರುತ್ತದೆ. ಗುರುಭಕ್ತಿ, ನಿಷ್ಠೆ ಹಾಗೂ ಶ್ರದ್ಧೆಯಿಂದ ವಿದ್ಯೆಯನ್ನು ಸಂಪಾದಿಸಿದಾಗ ಯಶಸ್ಸು ಸಾಧಿಸಲು ಸಾಧ್ಯವಾಗುತ್ತದೆ ನುಡಿದರು.

ಪ್ರಾಂಶುಪಾಲೆ ಮಾಲತಿ ಡಿ ಹಾಗೂ ಉಪಪ್ರಾಂಶುಪಾಲೆಯಾದ ಸುಜನಿ ಬೋರ್ಕರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ವಿದ್ಯಾರ್ಥಿಗಳು ಗುರುಸ್ತುತಿಯನ್ನು ಸ್ತುತಿಸಿದರು. ಗುರುವಿನ ಮಹತ್ವದ ಕುರಿತು ಕೆ ಎಮ್ ಶಮಿತ ಭಟ್ ಮಾತನಾಡಿದರು. ಶಿಕ್ಷಕಿ ಪ್ರಿಯಶ್ರೀ ಅತಿಥಿಗಳನ್ನು ಪರಿಚಯಿಸಿದರು. ಅನನ್ಯಾ ಬಿ ಸ್ವಾಗತಿಸಿದರು. ಗುರುಪೂರ್ಣಿಮೆಯ ಬಗ್ಗೆ ಸುಧನ್ವ ಕೆ ಪ್ರಸ್ತಾವನೆಗೈದರು. ಲಾವಣ್ಯ ಪಟ್ಟೆ ವಂದಿಸಿ, ಮನಸ್ವಿ ಎಮ್ ಕಾರ್ಯಕ್ರಮವನ್ನು ನಿರೂಪಿಸಿದರು. ಕಾರ್ಯಕ್ರಮದ ಅಂತ್ಯದಲ್ಲಿ ಮಹರ್ಷಿ ವ್ಯಾಸರ ಭಾವಚಿತ್ರಕ್ಕೆ ಆರತಿ ಬೆಳಗಿ ಗೌರವ ಸಮರ್ಪಿಸಲಾಯಿತು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಆಟಮ್’ಬರ್ಗ್ ಫ್ಯಾನ್ ಮಾರಾಟದಲ್ಲಿ ದಾಖಲೆ: ಮೈತ್ರಿ ಎಲೆಕ್ಟ್ರಿಕ್ ಕಂಪೆನಿಗೆ ಗೋಲ್ಡ್ ಮೆಂಬರ್’ಶಿಪ್

ಪುತ್ತೂರು: ಆಟಮ್’ಬರ್ಗ್ ಫ್ಯಾನ್ ಗಳಲ್ಲಿ ಅತ್ಯಧಿಕ ಮಾರಾಟ ಮಾಡಿ ಸಾಧನೆ ಮಾಡಿದ ಪುತ್ತೂರಿನ…

ಜಿಡೆಕಲ್ಲು ಸರಕಾರಿ ಕಾಲೇಜಿಗೆ ಹೆಚ್ಚುವರಿ ಬಸ್ ಸಂಪರ್ಕ ಕಲ್ಪಿಸುವಂತೆ ಶಾಸಕ ಅಶೋಕ್ ರೈಗೆ ವಿದ್ಯಾರ್ಥಿಗಳಿಂದ ಮನವಿ

ಪುತ್ತೂರು: ಜಿಡೆಕಲ್ಲು ಪ್ರಥಮ ದರ್ಜೆ ಸರಕಾರಿ ಕಾಲೇಜಿಗೆ ತೆರಳಲು ಹೆಚ್ಚುವರಿ ಸರಕಾರಿ ಬಸ್…