tamanvi
ಶಿಕ್ಷಣ

ಬ್ಯಾಂಕ್ ಆಫ್ ಬರೋಡದಲ್ಲಿ ಬ್ಯಾಂಕಿಂಗ್ ಅಸಿಸ್ಟೆಂಟ್ ಆಗಿ ಆಯ್ಕೆಯಾದ ವಿದ್ಯಾಮಾತಾ ಅಕಾಡೆಮಿ ವಿದ್ಯಾರ್ಥಿನಿ ಜಯಪ್ರಭಾ ಕೆ

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಯಲ್ಲಿ ನಿರಂತರ ಯಶಸ್ಸು ದಾಖಲಿಸುತ್ತಿರುವ ವಿದ್ಯಾಮಾತಾ ಅಕಾಡೆಮಿಯ ವಿದ್ಯಾರ್ಥಿನಿ ಜಯಪ್ರಭಾ ಕೆ. ಅವರು ಬ್ಯಾಂಕ್ ಆಫ್ ಬರೋಡ (BOB) ನೇಮಕಾತಿ ಪರೀಕ್ಷೆಯಲ್ಲಿ ಎಲ್ಲಾ ಹಂತಗಳನ್ನು ಯಶಸ್ವಿಯಾಗಿ ಪೂರೈಸಿ ಬ್ಯಾಂಕಿಂಗ್ ಅಸಿಸ್ಟೆಂಟ್ ಹುದ್ದೆಗೆ ಆಯ್ಕೆಯಾಗಿದ್ದಾರೆ.

ಪುತ್ತೂರು ತಾಲೂಕಿನ ಮುಂಡೂರು ಗ್ರಾಮದ ಕೊಡೆಂಕೇರಿ ನಿವಾಸಿ ಪದ್ಮನಾಭ ಅವರ ಪುತ್ರಿಯಾಗಿರುವ ಜಯಪ್ರಭಾ ಅವರು ಫಾರ್ಮಸಿ ಪದವೀಧರರಾಗಿದ್ದು, ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗಾಗಿ ವಿದ್ಯಾಮಾತಾ ಅಕಾಡೆಮಿಯಲ್ಲಿ ತರಬೇತಿ ಹಾಗೂ ಮಾರ್ಗದರ್ಶನ ಪಡೆದಿದ್ದರು. ಇತ್ತೀಚೆಗೆ ಭಾರತೀಯ ವಾಯುಪಡೆಯ AFCAT ನೇಮಕಾತಿ ಪರೀಕ್ಷೆಯಲ್ಲೂ ಅವರು ಉತ್ತೀರ್ಣರಾಗಿದ್ದು, ಇದೀಗ ಬ್ಯಾಂಕ್ ಆಫ್ ಬರೋಡ ನೇಮಕಾತಿಯಲ್ಲೂ ಯಶಸ್ಸು ಸಾಧಿಸುವ ಮೂಲಕ ಮತ್ತೊಂದು ಮೈಲಿಗಲ್ಲು ಸ್ಥಾಪಿಸಿದ್ದಾರೆ.

ವಿದ್ಯಾಮಾತಾ ಅಕಾಡೆಮಿಯ ಆಡಳಿತ ನಿರ್ದೇಶಕ ಭಾಗ್ಯೇಶ್ ರೈ ಮಾತನಾಡಿ, ಒಂದೇ ಸೂರಿನಡಿ ನೀಡುತ್ತಿರುವ ಗುಣಮಟ್ಟದ ತರಬೇತಿಯ ಫಲವಾಗಿ ಅನೇಕ ಅಭ್ಯರ್ಥಿಗಳು ವಿವಿಧ ಸರ್ಕಾರಿ ಉದ್ಯೋಗಗಳಿಗೆ ಆಯ್ಕೆಯಾಗುತ್ತಿದ್ದಾರೆ. ಜಯಪ್ರಭಾ ಅವರ ಸಾಧನೆ ಇತರ ಉದ್ಯೋಗಾಕಾಂಕ್ಷಿಗಳಿಗೆ ಪ್ರೇರಣೆಯಾಗಿದ್ದು, ಮುಂದಿನ ನೇಮಕಾತಿ ಪರೀಕ್ಷೆಗಳಿಗೂ ಇನ್ನಷ್ಟು ಅಭ್ಯರ್ಥಿಗಳನ್ನು ಯಶಸ್ವಿಗೊಳಿಸುವ ವಿಶ್ವಾಸವಿದೆ ಎಂದು ಹೇಳಿದರು.

ಜಯಪ್ರಭಾ ಅವರ ಸಾಧನೆಗೆ ವಿದ್ಯಾಮಾತಾ ಅಕಾಡೆಮಿಯ ಆಡಳಿತ ಮಂಡಳಿ, ತರಬೇತುದಾರರು ಹಾಗೂ ಸಿಬ್ಬಂದಿ ವರ್ಗ ಅಭಿನಂದನೆ ಸಲ್ಲಿಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರಿನಲ್ಲಿ ಸಂಭ್ರಮದ 28ನೇ ವರ್ಷದ ‘ಶ್ರೀಕೃಷ್ಣಲೋಕ’ ;1,250ಕ್ಕೂ ಅಧಿಕ ಪುಟಾಣಿ ಕೃಷ್ಣ-ರಾಧೆಯರಿಂದ ವೈಭವದ ಶೋಭಾಯಾತ್ರೆ

ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧೀನದಲ್ಲಿರುವ ಪರ್ಲಡ್ಕ ಶಿವಪೇಟೆಯ ವಿವೇಕಾನಂದ…

ಬೆಳಾಲು ಧ.ಮಂ. ಪ್ರೌಢಶಾಲೆಯಲ್ಲಿ ತಾಲೂಕು ಮಟ್ಟದ ನೆಟ್‌ಬಾಲ್ ಪಂದ್ಯಾಟ: ಆತಿಥೇಯ ಶಾಲೆಗೆ ಬಾಲಕಿಯರ ವಿಭಾಗದಲ್ಲಿ ಪ್ರಥಮ

ಬೆಳಾಲು: ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ಸೆ. 9ರಂದು ತಾಲೂಕು ಮಟ್ಟದ…

ಜ್ಞಾನ, ಪ್ರೀತಿಯ ಬೆಸುಗೆಯೇ ವಿವೇಕ | ಸಂತ ಫಿಲೋಮಿನಾ ಕಾಲೇಜಿನ ಪ್ರಥಮ ಪದವೀಧರರ ಸಮಾರಂಭದಲ್ಲಿ ಡಾ| ಪೀಟರ್ ಪಾವ್ಲ್ ಸಲ್ದಾನ

ಪುತ್ತೂರು: ಪದವಿ ಪಡೆಯುವುದರೊಂದಿಗೆ ಜ್ಞಾನಾರ್ಜನೆ ಮುಗಿಯುವುದಿಲ್ಲ; ಬದಲಾಗಿ ನಿಮ್ಮ ಜ್ಞಾನದ…

ತಾಲ್ಲೂಕು ಮಟ್ಟದ ಶಟಲ್ ಬ್ಯಾಡ್ಮಿಟನ್ ಪಂದ್ಯಾಟ | ವಿದ್ಯಾರ್ಥಿಗಳು ಸೋಲು ಗೆಲುವನ್ನು ಸಮಾನವಾಗಿ ಕಾಣಬೇಕು : ಸುರೇಶ್ ಶೆಟ್ಟಿ

ಪುತ್ತೂರು: ವಿದ್ಯಾರ್ಥಿಗಳು ಗೆಲುವನ್ನು ಮಾತ್ರ ನಿರೀಕ್ಷಿಸುತ್ತಿರಬಾರದ್ಲು. ಸೋತಾಗಲೂ ಅನುಭವ…