tamanvi
ಶಿಕ್ಷಣಸ್ಥಳೀಯ

ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳಲ್ಲಿ ವಿಶಿಷ್ಟ ಸ್ವಾತಂತ್ರ್ಯೋತ್ಸವ: ಮಾಜಿ ಸೈನಿಕರೊಂದಿಗೆ ಸಮ್ಮಿಲನ, ಭೋಜನಕೂಟ

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ದೇಶದೆಲ್ಲೆಡೆ 80ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ ಮನೆಮಾಡಿದ್ದ ಸಂದರ್ಭದಲ್ಲಿ, ಪುತ್ತೂರಿನ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳು ವಿಭಿನ್ನ ರೀತಿಯಲ್ಲಿ ಸ್ವಾತಂತ್ರ್ಯೋತ್ಸವ ಆಚರಿಸುವ ಮೂಲಕ ಗಮನ ಸೆಳೆದವು. ದೇಶದ ಸ್ವಾತಂತ್ರ್ಯ ಹಾಗೂ ಗಡಿಯನ್ನು ರಕ್ಷಿಸಿದ ಮಾಜಿ ಸೈನಿಕರನ್ನು ಗೌರವಿಸುವ ಉದ್ದೇಶದಿಂದ ಅವರೊಂದಿಗೆ ಸಮ್ಮಿಲನ ಹಾಗೂ ಭೋಜನಕೂಟವನ್ನು ಆಯೋಜಿಸಲಾಯಿತು.

ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಮಣ್ಯ ನಟ್ಟೋಜ ಅವರ ಪರಿಕಲ್ಪನೆಯಂತೆ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಭಾರತೀಯ ಸೇನೆ ಹಾಗೂ ಗಡಿ ಭದ್ರತಾ ಪಡೆ (ಬಿಎಸ್‌ಎಫ್)ಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ಪುತ್ತೂರು ತಾಲೂಕಿನ ವೀರಯೋಧರು ಹಾಗೂ ಅವರ ಕುಟುಂಬಸ್ಥರನ್ನು ಆತ್ಮೀಯವಾಗಿ ಆಹ್ವಾನಿಸಲಾಯಿತು.

ಪುತ್ತೂರಿನಲ್ಲಿ ದಕ್ಷಿಣ ಭಾರತದ ಮೊದಲ ಖಾಸಗಿ ಅಮರ್ ಜವಾನ್ ಜ್ಯೋತಿಯನ್ನು ಸ್ಥಾಪಿಸಿರುವ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳು ದೇಶ, ದೇಶಭಕ್ತಿ ಹಾಗೂ ಭಾರತೀಯ ಸೇನೆಯೆಡೆಗಿನ ಗೌರವವನ್ನು ನಿರಂತರವಾಗಿ ವ್ಯಕ್ತಪಡಿಸುತ್ತಿವೆ. ಇದೇ ಆಶಯದೊಂದಿಗೆ ಮಾಜಿ ಸೈನಿಕರನ್ನು ಸನ್ಮಾನಿಸಿ, ಪ್ರತಿಯೊಬ್ಬರಿಗೂ ಸ್ಮರಣಿಕೆ ನೀಡಿ ಗೌರವಿಸಲಾಯಿತು. ಬಳಿಕ ಮಾಜಿ ಯೋಧರು ಹಾಗೂ ಅವರ ಕುಟುಂಬಸ್ಥರಿಗೆ ಭೋಜನಕೂಟ ಏರ್ಪಡಿಸಲಾಯಿತು.

ಸೈನಿಕರ ಋಣ ತೀರಿಸುವ ಪ್ರಯತ್ನ:

‘ನಮಗಾಗಿ ನಮ್ಮ ಹೆಮ್ಮೆಯ ಸೈನಿಕರು ತಮ್ಮ ಬದುಕನ್ನು ಸಮರ್ಪಿಸಿದ್ದಾರೆ. ನಮ್ಮ ತ್ರಿವರ್ಣ ಧ್ವಜ ಹಾರಾಡುತ್ತಿರುವುದು ಸೈನಿಕರ ತ್ಯಾಗ ಹಾಗೂ ಸೇವೆಯ ಫಲ. ನಾವೆಲ್ಲರೂ ಸೈನಿಕರ ಋಣದಲ್ಲಿದ್ದೇವೆ. ಆ ಋಣದಲ್ಲಿ ಕನಿಷ್ಠವನ್ನಾದರೂ ತೀರಿಸುವ ಪ್ರಯತ್ನವಾಗಿ ಮಾಜಿ ಸೈನಿಕರು ಹಾಗೂ ಅವರ ಕುಟುಂಬಸ್ಥರನ್ನು ಆಹ್ವಾನಿಸಿ ಸಮ್ಮಿಲನ ಕಾರ್ಯಕ್ರಮ ಹಾಗೂ ಭೋಜನಕೂಟ ಆಯೋಜಿಸಲಾಗಿದೆ’ ಎಂದು ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಮಣ್ಯ ನಟ್ಟೋಜ ಹೇಳಿದರು.

ಮಾಜಿ ಸೈನಿಕರ ಅನಿಸಿಕೆ

ಭೋಜನಕೂಟಕ್ಕೂ ಮುನ್ನ ಸಮ್ಮಿಲನದ ಅಂಗವಾಗಿ ಸಭಾ ಕಾರ್ಯಕ್ರಮ ನಡೆಯಿತು. ಪುತ್ತೂರು ಮಾಜಿ ಸೈನಿಕರ ಸಂಘದ ಅಧ್ಯಕ್ಷ ವಸಂತ ಕುಮಾರ್, ಗಡಿ ಭದ್ರತಾ ಪಡೆಯ ಮಾಜಿ ಸೈನಿಕರ ಸಂಘದ ಮುಖ್ಯಸ್ಥ ಚಂದಪ್ಪ ಮೂಲ್ಯ ಹಾಗೂ ಕರ್ನಲ್ ಡಿ.ಜಿ. ಭಟ್ ಅವರು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು.

ಕಾರ್ಯಕ್ರಮದಲ್ಲಿ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ರಾಜಶ್ರೀ ಎಸ್. ನಟ್ಟೋಜ, ಆಡಳಿತ ಮಂಡಳಿ ಸದಸ್ಯರು ಹಾಗೂ ವಿಶ್ರಾಂತ ಪ್ರಾಚಾರ್ಯ ಡಾ. ಎಚ್. ಮಾಧವ ಭಟ್, ಬಾಲಕೃಷ್ಣ ಬೋರ್ಕರ್ ಸೇರಿದಂತೆ ನೂರಾರು ಮಂದಿ ಮಾಜಿ ಯೋಧರು ಹಾಗೂ ಅವರ ಕುಟುಂಬಸ್ಥರು ಭಾಗವಹಿಸಿದ್ದರು.

ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಮಣ್ಯ ನಟ್ಟೋಜ ಅವರು ಮಾಜಿ ಸೈನಿಕರನ್ನು ಆತ್ಮೀಯವಾಗಿ ಸ್ವಾಗತಿಸಿದರು. ಉಪನ್ಯಾಸಕ ಸತೀಶ್ ಇರ್ದೆ ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಬ್ಯಾಂಕ್ ಆಫ್ ಬರೋಡದಲ್ಲಿ ಬ್ಯಾಂಕಿಂಗ್ ಅಸಿಸ್ಟೆಂಟ್ ಆಗಿ ಆಯ್ಕೆಯಾದ ವಿದ್ಯಾಮಾತಾ ಅಕಾಡೆಮಿ ವಿದ್ಯಾರ್ಥಿನಿ ಜಯಪ್ರಭಾ ಕೆ

ಪುತ್ತೂರು: ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಯಲ್ಲಿ ನಿರಂತರ ಯಶಸ್ಸು ದಾಖಲಿಸುತ್ತಿರುವ…

1 of 155