ಶಿಕ್ಷಣ

ನಾಳೆ (ಆ.25) ದ.ಕ. ಮತ್ತು ಉಡುಪಿ ಜಿಲ್ಲೆಗಳಲ್ಲಿ ಈದ್ ಮಿಲಾದ್ ಸಾರ್ವತ್ರಿಕ ರಜೆ

ಈ ಸುದ್ದಿಯನ್ನು ಶೇರ್ ಮಾಡಿ

ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಈದ್ ಮಿಲಾದ್ (ಮೀಲಾದುನ್ನೆಬಿ) ಪ್ರಯುಕ್ತ ಆಗಸ್ಟ್ 26ರ ಬದಲಿಗೆ ಆಗಸ್ಟ್ 25ರಂದು ಸಾರ್ವತ್ರಿಕ ರಜೆ ಘೋಷಿಸಲಾಗಿದೆ.

ಚಂದ್ರ ದರ್ಶನದ ಆಧಾರದ ಮೇಲೆ ಈದ್ ಮಿಲಾದ್ ಹಬ್ಬದ ರಜೆಯನ್ನು ಆಗಸ್ಟ್ 26ರ ಬದಲಿಗೆ ಆಗಸ್ಟ್ 25ರಂದು ನೀಡುವಂತೆ ಮುಸ್ಲಿಂ ಮುಖಂಡರು ಇತ್ತೀಚೆಗೆ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಹಾಗೂ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಅವರಿಗೆ ಮನವಿ ಸಲ್ಲಿಸಿದ್ದರು.

gl

ಈ ಮನವಿಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ನಾಳೆ (ಆ.25) ಈದ್ ಮಿಲಾದ್ ಪ್ರಯುಕ್ತ ಸಾರ್ವತ್ರಿಕ ರಜೆ ನೀಡಲಾಗಿದೆ.

ಆಗಸ್ಟ್ 26ರಂದು ನೀಡಲಾಗಿದ್ದ ಈದ್ ಮಿಲಾದ್ ರಜೆಯನ್ನು ಆಗಸ್ಟ್ 25ಕ್ಕೆ ಬದಲಾಯಿಸಿರುವುದರಿಂದ, ಎರಡೂ ಜಿಲ್ಲೆಗಳ ಸರ್ಕಾರಿ ಕಚೇರಿಗಳು ಹಾಗೂ ರಜಾ ಅನ್ವಯವಾಗುವ ಸಂಸ್ಥೆಗಳಿಗೆ ನಾಳೆ ರಜೆ ಇರಲಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಬೆಳಾಲು ಧ.ಮಂ. ಪ್ರೌಢಶಾಲೆಯಲ್ಲಿ ತಾಲೂಕು ಮಟ್ಟದ ನೆಟ್‌ಬಾಲ್ ಪಂದ್ಯಾಟ: ಆತಿಥೇಯ ಶಾಲೆಗೆ ಬಾಲಕಿಯರ ವಿಭಾಗದಲ್ಲಿ ಪ್ರಥಮ

ಬೆಳಾಲು: ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ಸೆ. 9ರಂದು ತಾಲೂಕು ಮಟ್ಟದ…

ಜ್ಞಾನ, ಪ್ರೀತಿಯ ಬೆಸುಗೆಯೇ ವಿವೇಕ | ಸಂತ ಫಿಲೋಮಿನಾ ಕಾಲೇಜಿನ ಪ್ರಥಮ ಪದವೀಧರರ ಸಮಾರಂಭದಲ್ಲಿ ಡಾ| ಪೀಟರ್ ಪಾವ್ಲ್ ಸಲ್ದಾನ

ಪುತ್ತೂರು: ಪದವಿ ಪಡೆಯುವುದರೊಂದಿಗೆ ಜ್ಞಾನಾರ್ಜನೆ ಮುಗಿಯುವುದಿಲ್ಲ; ಬದಲಾಗಿ ನಿಮ್ಮ ಜ್ಞಾನದ…