ಶಿಕ್ಷಣ

ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಅಂಬಿಕಾ ವಿದ್ಯಾಲಯದ ವಿದ್ಯಾರ್ಥಿಗಳ ಮಿಂಚಿನ ಸಾಧನೆ; ಹಲವು ಪದಕಗಳ ಬೇಟೆ

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿ.ಬಿ.ಎಸ್.ಇ. ಸಂಸ್ಥೆಯ ವಿದ್ಯಾರ್ಥಿಗಳು ಬೆಂಗಳೂರಿನ ಬನಶಂಕರಿಯ ರಾಷ್ಟ್ರೋತ್ಥಾನ ವಿದ್ಯಾಕೇಂದ್ರದಲ್ಲಿ ನಡೆದ ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ವಿವಿಧ ವಿಭಾಗಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿ ಹಲವು ಪದಕಗಳನ್ನು ಗಳಿಸಿದ್ದಾರೆ.

ಕಿಶೋರ ವರ್ಗದ ಬಾಲಕರ ವಿಭಾಗದಲ್ಲಿ 10ನೇ ತರಗತಿಯ ಲಲನ್ ಯು. ನಾಯಕ್ ಅವರು 400 ಮೀಟರ್ ಫ್ರೀಸ್ಟೈಲ್‌ನಲ್ಲಿ ತೃತೀಯ ಸ್ಥಾನ, 200 ಮೀಟರ್ ಫ್ರೀಸ್ಟೈಲ್‌ನಲ್ಲಿ ಪ್ರಥಮ ಸ್ಥಾನ ಹಾಗೂ 4×100 ಮೀಟರ್ ಫ್ರೀಸ್ಟೈಲ್ ರಿಲೇಯಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ.

ಅದೇ ವಿಭಾಗದಲ್ಲಿ 10ನೇ ತರಗತಿಯ ಅನಿತೇಜ್ ಮಧುಸೂದನ್ ಸಾಲೆ ಅವರು 800 ಮೀಟರ್ ಫ್ರೀಸ್ಟೈಲ್‌ನಲ್ಲಿ ಪ್ರಥಮ ಸ್ಥಾನ ಹಾಗೂ 200 ಮೀಟರ್ ಬ್ಯಾಕ್‌ಸ್ಟ್ರೋಕ್‌ನಲ್ಲಿ ತೃತೀಯ ಸ್ಥಾನ ಗಳಿಸಿದ್ದಾರೆ.

ಕಿಶೋರ ವರ್ಗದ ಬಾಲಕಿಯರ ವಿಭಾಗದಲ್ಲಿ 10ನೇ ತರಗತಿಯ ಮೆಹೆಕ್ ರವಿಕುಮಾರ್ ಕೊಠಾರಿ ಅವರು 200 ಮೀಟರ್ ಬ್ಯಾಕ್‌ಸ್ಟ್ರೋಕ್‌ನಲ್ಲಿ ಪ್ರಥಮ ಸ್ಥಾನ ಹಾಗೂ 4×100 ಮೀಟರ್ ಫ್ರೀಸ್ಟೈಲ್ ರಿಲೇಯಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ. 8ನೇ ತರಗತಿಯ ರೀಶಾ ಪಿ. ಶೆಟ್ಟಿ ಅವರು 200 ಮೀಟರ್ ಫ್ರೀಸ್ಟೈಲ್‌ನಲ್ಲಿ ತೃತೀಯ ಸ್ಥಾನ ಗಳಿಸಿದ್ದಾರೆ.

ಬಾಲ ವರ್ಗದ ಬಾಲಕರ ವಿಭಾಗದಲ್ಲಿ 8ನೇ ತರಗತಿಯ ಪ್ರತ್ಯುಷ್ ಎಲ್. ಎಸ್. ಗೌಡ ಅವರು 50 ಮೀಟರ್ ಬ್ಯಾಕ್‌ಸ್ಟ್ರೋಕ್ ಹಾಗೂ 50 ಮೀಟರ್ ಬಟರ್‌ಫ್ಲೈಯಲ್ಲಿ ಪ್ರಥಮ ಸ್ಥಾನ ಮತ್ತು 100 ಮೀಟರ್ ಬ್ಯಾಕ್‌ಸ್ಟ್ರೋಕ್‌ನಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ. ತಂಡದ 4×100 ಮೀಟರ್ ಫ್ರೀಸ್ಟೈಲ್ ರಿಲೇ ಹಾಗೂ 4×100 ಮೀಟರ್ ಮೆಡ್ಲಿ ರಿಲೇಯಲ್ಲೂ ಪ್ರಥಮ ಸ್ಥಾನ ಗಳಿಸಿದ್ದಾರೆ.

8ನೇ ತರಗತಿಯ ದೀಪಾಂಶ್ ಶೆಟ್ಟಿ ಅವರು 50 ಮೀಟರ್ ಫ್ರೀಸ್ಟೈಲ್‌ನಲ್ಲಿ ಪ್ರಥಮ ಸ್ಥಾನ, 100 ಮೀಟರ್ ಫ್ರೀಸ್ಟೈಲ್‌ನಲ್ಲಿ ದ್ವಿತೀಯ ಸ್ಥಾನ ಹಾಗೂ 200 ಮೀಟರ್ ಫ್ರೀಸ್ಟೈಲ್‌ನಲ್ಲಿ ತೃತೀಯ ಸ್ಥಾನ ಪಡೆದುಕೊಂಡಿದ್ದು, 4×100 ಮೀಟರ್ ಫ್ರೀಸ್ಟೈಲ್ ರಿಲೇಯಲ್ಲೂ ಪ್ರಥಮ ಸ್ಥಾನ ಗಳಿಸಿದ್ದಾರೆ.

6ನೇ ತರಗತಿಯ ಶ್ರೀಹಾನ್ ಗೌಡ ಕೆ.ಜೆ. ಅವರು 200 ಮೀಟರ್ ಬ್ಯಾಕ್‌ಸ್ಟ್ರೋಕ್ ಹಾಗೂ 100 ಮೀಟರ್ ಬಟರ್‌ಫ್ಲೈಯಲ್ಲಿ ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ.

ವಿದ್ಯಾರ್ಥಿಗಳ ಈ ಸಾಧನೆಗೆ ಅಂಬಿಕಾ ವಿದ್ಯಾಲಯದ ಆಡಳಿತ ಮಂಡಳಿ, ಪ್ರಾಂಶುಪಾಲರು, ಶಿಕ್ಷಕ ವೃಂದ ಹಾಗೂ ಪೋಷಕರು ಅಭಿನಂದನೆ ಸಲ್ಲಿಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಅಂಬಿಕಾ ವಿದ್ಯಾಲಯ ಸಿಬಿಎಸ್ಇ ಸಂಸ್ಥೆಯಲ್ಲಿ ಪ್ರತಿಭಾ ತರಂಗಿಣಿ | ಸ್ವಂತ ಸಾಮರ್ಥ್ಯ ಅರಿತುಕೊಳ್ಳಿ: ಡಾ.ಎಂ.ನರಸಿಂಹ ಮೂರ್ತಿ

ಪುತ್ತೂರು: ನಾವಿಂದು ಕೃತಕ ಬುದ್ಧಿಮತ್ತೆಯ ಕಾಲದಲ್ಲಿದ್ದೇವೆ. ಎಐ ಎಂಬುದು ನಾವು ಮಾಹಿತಿಯನ್ನು…

ಜ್ಞಾನ, ಪ್ರೀತಿಯ ಬೆಸುಗೆಯೇ ವಿವೇಕ | ಸಂತ ಫಿಲೋಮಿನಾ ಕಾಲೇಜಿನ ಪ್ರಥಮ ಪದವೀಧರರ ಸಮಾರಂಭದಲ್ಲಿ ಡಾ| ಪೀಟರ್ ಪಾವ್ಲ್ ಸಲ್ದಾನ

ಪುತ್ತೂರು: ಪದವಿ ಪಡೆಯುವುದರೊಂದಿಗೆ ಜ್ಞಾನಾರ್ಜನೆ ಮುಗಿಯುವುದಿಲ್ಲ; ಬದಲಾಗಿ ನಿಮ್ಮ ಜ್ಞಾನದ…