tamanvi
ಶಿಕ್ಷಣ

ಅಕ್ಷಯ ಕಾಲೇಜಿನಲ್ಲಿ ರಾಷ್ಟ್ರೀಯ ಗ್ರಂಥಪಾಲಕರ ದಿನಾಚರಣೆ

ಈ ಸುದ್ದಿಯನ್ನು ಶೇರ್ ಮಾಡಿ

ಅಕ್ಷಯ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಂಪ್ಯ ಅಕ್ಷಯ ಕಾಲೇಜಿನಲ್ಲಿ ಐಕ್ಯೂಎಸಿ ಮತ್ತು ಗ್ರಂಥಾಲಯ ವಿಭಾಗ ಇದರ ಸಹಯೋಗದಲ್ಲಿ ರಾಷ್ಟ್ರೀಯ ಗ್ರಂಥಪಾಲಕರ ದಿನವನ್ನು ಆಚರಿಸಲಾಯಿತು.

ಕಾರ್ಯಕ್ರಮ ಉದ್ಘಾಟಿಸಿ “A READING CAN CHANGE YOUR LIFE” ವಿಷಯದ ಕುರಿತಾಗಿ ಮಾತನಾಡಿದ ಬೆಟ್ಟಂಪಾಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಗ್ರಂಥಪಾಲಕ ರಾಮ ಕೆ., ಮನುಷ್ಯನ ಜೀವನ ಬದಲಾಗುವುದು ಅವನ ಯೋಚನೆಗಳಿಂದ ಮತ್ತು ಯೋಜನೆಗಳಿಂದ. ಒಳ್ಳೆಯ ಯೋಚನೆ ಬರಬೇಕಾದರೆ ನಮ್ಮಲ್ಲಿ ಜ್ಞಾನವಿರಬೇಕು ಅದರ ಮೊದಲ ಹೆಜ್ಜೆಯೇ ಓದು ಎಂಬುದಾಗಿ ಹೇಳಿದರು.  ವಿದ್ಯಾರ್ಥಿಗಳು ಓದುವ ಹವ್ಯಾಸವನ್ನು ನಿರಂತರವಾಗಿ ಬೆಳೆಸಿಕೊಳ್ಳಿ ಎಂದು ಕರೆಯಿತ್ತರು.

ಅಧ್ಯಕ್ಷತೆ ವಹಿಸಿದ್ದ ಅಕ್ಷಯ ಕಾಲೇಜಿನ ಪ್ರಾಂಶುಪಾಲ ಸಂಪತ್ ಪಕ್ಕಳ ಅವರು ವಿದ್ಯಾರ್ಥಿಗಳು ಓದುವ ಅಭ್ಯಾಸ ಮೈಗೂಡಿಸಿಕೊಂಡು  ಸಾಮಾಜಿಕ ಜಾಲತಾಣಗಳ ಬಳಕೆ ಮಿತವಾಗಿರಿಸಿ, ಪುಸ್ತಕಗಳ ಮೇಲೆ ಪ್ರೀತಿ ಬೆಳೆಸಿಕೊಳ್ಳಬೇಕು ಎಂದರು.

ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆಯ ಆಡಳಿತ ಅಧಿಕಾರಿ ಅರ್ಪಿತ್ ಟಿ.ಎ. ಉಪಸ್ಥಿತರಿದ್ದರು. ಐಕ್ಯೂಎಸಿ ಸಂಯೋಜಕಿ ರಶ್ಮಿ ಕೆ ಅತಿಥಿಗಳನ್ನು ಪರಿಚಯಿಸಿದರು. ಕಾರ್ಯಕ್ರಮದ ಸಂಯೋಜಕಿ ಪ್ರಭಾವತಿ ಕೆ. ರಾಷ್ಟ್ರೀಯ ಗ್ರಂಥಪಾಲಕರ ದಿನಾಚರಣೆ ಬಗ್ಗೆ ಪ್ರಸ್ತಾವಿಸಿಕವಾಗಿ ಮಾತನಾಡಿ ಸ್ವಾಗತಿಸಿದರು.  ಉಪನ್ಯಾಸಕಿ ರಶ್ಮಿತಾ ವಂದಿಸಿದರು. ದೇವಿಕಾ ಮತ್ತು ಸ್ವರ್ಣ ಪ್ರಾರ್ಥಿಸಿದರು . ರಕ್ಷಾ ಕಾರ್ಯಕ್ರಮ ನಿರೂಪಿಸಿದರು. ಪ್ರಥಮ ಪದವಿಯ ಎಲ್ಲಾ ವಿಭಾಗಗಳ ವಿದ್ಯಾರ್ಥಿಗಳು, ಉಪನ್ಯಾಸಕರು ಉಪಸ್ಥಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಬ್ಯಾಂಕ್ ಆಫ್ ಬರೋಡದಲ್ಲಿ ಬ್ಯಾಂಕಿಂಗ್ ಅಸಿಸ್ಟೆಂಟ್ ಆಗಿ ಆಯ್ಕೆಯಾದ ವಿದ್ಯಾಮಾತಾ ಅಕಾಡೆಮಿ ವಿದ್ಯಾರ್ಥಿನಿ ಜಯಪ್ರಭಾ ಕೆ

ಪುತ್ತೂರು: ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಯಲ್ಲಿ ನಿರಂತರ ಯಶಸ್ಸು ದಾಖಲಿಸುತ್ತಿರುವ…