tamanvi
ಶಿಕ್ಷಣ

ತಾಲ್ಲೂಕು ಮಟ್ಟದ ಶಟಲ್ ಬ್ಯಾಡ್ಮಿಟನ್ ಪಂದ್ಯಾಟ | ವಿದ್ಯಾರ್ಥಿಗಳು ಸೋಲು ಗೆಲುವನ್ನು ಸಮಾನವಾಗಿ ಕಾಣಬೇಕು : ಸುರೇಶ್ ಶೆಟ್ಟಿ

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ವಿದ್ಯಾರ್ಥಿಗಳು ಗೆಲುವನ್ನು ಮಾತ್ರ ನಿರೀಕ್ಷಿಸುತ್ತಿರಬಾರದ್ಲು. ಸೋತಾಗಲೂ ಅನುಭವ ದೊರೆಯುತ್ತದೆ. ಗೆಲುವು ಅನುಭವದ ಹಾದಿಯನ್ನು ಹೇಳಲು ಸಹಾಯಕವಾಗುತ್ತದೆ. ಹಾಗೆಂದು ಸ್ಪರ್ಧಿಸುವಾಗ ಪ್ರತೀ ಬಾರಿಯೂ ಶಕ್ತಿ ಮೀರಿ ಪ್ರಯತ್ನಿಸಬೇಕು ಎಂದು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಸದಸ್ಯ ಕೆ.ಸುರೇಶ ಶೆಟ್ಟಿ ಹೇಳಿದರು.

ambika

ಅವರು ಪುತ್ತೂರಿನ ಸುದಾನ ಸ್ಪೋರ್ಟ್ಸ್ ಕ್ಲಬ್‌ನಲ್ಲಿ ದಕ್ಷಿಣ ಕನ್ನಡ ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ನೆಲ್ಲಿಕಟ್ಟೆ ಅಂಬಿಕಾ ಪದವಿ ಪೂರ್ವ ವಿದ್ಯಾಲಯಗಳ ಜಂಟಿ ಆಶ್ರಯದಲ್ಲಿ ಆಯೋಜಿಸಲಾದ ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಸೋಲು ಮತ್ತು ಗೆಲುವನ್ನು ಸಮಾನವಾಗಿ ಕಾಣಬೇಕು. ಶಟಲ್ ಆಟವು ವಿಶ್ವದ ಅತೀ ವೇಗವಾದ ಕ್ರೀಡೆಯಾಗಿದೆ. ಇದು ದೇಹ ಹಾಗೂ ಬುದ್ಧಿ ಒಂದೇ ಕಡೆ ಬರುವಂತೆ ಮಾಡುವಲ್ಲಿ ಸಹಕಾರಿಯಾಗಿದೆ. ಎಲ್ಲರೂ ತಮ್ಮ ಬುದ್ಧಿಶಕ್ತಿಯನ್ನು ಸರಿಯಾಗಿ ಬಳಸಿಕೊಂಡು ಆಟದಲ್ಲಿ ಪಾಲ್ಗೊಳ್ಳಬೇಕು ಎಂದು ಕರೆನೀಡಿದರು.

ಸುದಾನ ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷ ಸಚ್ಚಿದಾನಂದ ಅವರು ಪಂದ್ಯಾಟವನ್ನು ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಶಾಲಾ ಕಾಲೇಜುಗಳಲ್ಲಿ ಕೇವಲ ಪಠ್ಯ ಮಾತ್ರ ದೊರಕದೆ ಆಟದಲ್ಲಿಯೂ ಸಮಾನವಾದ ಅವಕಾಶಗಳು ದೊರೆಯಬೇಕು ಹಾಗೂ ವಿದ್ಯಾರ್ಥಿಗಳು ಅದನ್ನು ಸರಿಯಾಗಿ ಬಳಸಿಕೊಳ್ಳಬೇಕು. ಇದರಿಂದ ವಿದ್ಯಾರ್ಥಿಗಳ ಸರ್ವತೋಮುಖ ಪ್ರಗತಿ ಸಾಧ್ಯ ಎಂದರು.

ವೇದಿಕೆಯಲ್ಲಿ ನೆಲ್ಲಿಕಟ್ಟೆ ಪದವಿ ಪೂರ್ವ ವಿದ್ಯಾಲಯದ ಪ್ರಾoಶುಪಾಲ ಸತ್ಯಜಿತ್ ಉಪಾಧ್ಯಾಯ, ಬಪ್ಪಳಿಗೆ ವಸತಿಯುತ ಪದವಿ ಪೂರ್ವ ವಿದ್ಯಾಲಯದ ಪ್ರಾಂಶುಪಾಲ ಗಣೇಶ್ ಪ್ರಸಾದ್, ಉಪ ಪ್ರಾಂಶುಪಾಲ ಪ್ರದೀಪ್ ಕೆ ವೈ ಉಪಸ್ಥಿತರಿದ್ದರು. ಜೀವಶಾಸ್ತç ಉಪನ್ಯಾಸಕ ವಿಷ್ಣು ಪ್ರದೀಪ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

ಫಲಿತಾAಶ :

ಬಾಲಕರ ವಿಭಾಗದಲ್ಲಿ ಪುತ್ತೂರಿನ ಸÀಂತ ಫಿಲೋಮಿನಾ ಕಾಲೇಜು ಪ್ರಥಮ ಸ್ಥಾನ ಪಡೆದರೆ, ನೆಲ್ಲಿಕಟ್ಟೆಯ ಅಂಬಿಕಾ ಪದವಿ ಪೂರ್ವ ವಿದ್ಯಾಲಯ ದ್ವಿತೀಯ ಸ್ಥಾನ ಗಳಿಸಿತು. ಬಾಲಕಿಯರ ವಿಭಾಗದಲ್ಲಿ ನೆಲ್ಲಿಕಟ್ಟೆಯ ಅಂಬಿಕಾ ಪದವಿ ಪೂರ್ವ ವಿದ್ಯಾಲಯ ಪ್ರಥಮ ಹಾಗೂ ಪುತ್ತೂರಿನ ವಿವೇಕಾನಂದ ಪದವಿ ಪೂರ್ವ ವಿದ್ಯಾಲಯದ ತಂಡ ದ್ವಿತೀಯ ಸ್ಥಾನಿಯಾಯಿತು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರಿನಲ್ಲಿ ಸಂಭ್ರಮದ 28ನೇ ವರ್ಷದ ‘ಶ್ರೀಕೃಷ್ಣಲೋಕ’ ;1,250ಕ್ಕೂ ಅಧಿಕ ಪುಟಾಣಿ ಕೃಷ್ಣ-ರಾಧೆಯರಿಂದ ವೈಭವದ ಶೋಭಾಯಾತ್ರೆ

ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧೀನದಲ್ಲಿರುವ ಪರ್ಲಡ್ಕ ಶಿವಪೇಟೆಯ ವಿವೇಕಾನಂದ…

ವಿದ್ಯಾಮಾತಾ ಅಕಾಡೆಮಿಯಲ್ಲಿ ಶಿಕ್ಷಕರ ನೇಮಕಾತಿ ಪರೀಕ್ಷೆಗಳಿಗೆ ಆನ್‌ಲೈನ್ ಕ್ರ್ಯಾಶ್ ಕೋರ್ಸ್ ಪ್ರಾರಂಭ

ಪುತ್ತೂರು: ಸರ್ಕಾರಿ ಹಾಗೂ ಸರ್ಕಾರಿ ಸ್ವಾಮ್ಯದ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ…