tamanvi
ಕ್ರೀಡೆಶಿಕ್ಷಣ

ಬೆಥನಿ ಶಾಲೆಯ ಬಾಲಕಿಯರಿಗೆ ಕಬಡ್ಡಿಯಲ್ಲಿ ತಾಲೂಕು ಮಟ್ಟಕ್ಕೆ ಮುನ್ನಡೆ

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಪುತ್ತೂರು ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ಸಂತ ವಿಕ್ಟರ್ ಬಾಲಕಿಯರ ಪ್ರೌಢಶಾಲೆ, ಪುತ್ತೂರು ಇದರ ಸಂಯುಕ್ತ ಆಶ್ರಯದಲ್ಲಿ ನಡೆದ ಪುತ್ತೂರು ನಗರ ವಲಯ ಮಟ್ಟದ 14 ಮತ್ತು 17ರ ವಯೋಮಾನದ ಬಾಲಕ-ಬಾಲಕಿಯರ ಕಬಡ್ಡಿ ಪಂದ್ಯಾಟದಲ್ಲಿ ಬೆಥನಿ ಆಂಗ್ಲ ಮಾಧ್ಯಮ ಶಾಲೆ, ದರ್ಬೆ ತಂಡ ಉತ್ತಮ ಸಾಧನೆ ಮಾಡಿದೆ.

17ರ ವಯೋಮಾನದ ಬಾಲಕಿಯರ ವಿಭಾಗದಲ್ಲಿ ಬೆಥನಿ ಶಾಲೆಯ ತಂಡ ಪ್ರಥಮ ಸ್ಥಾನ ಪಡೆದುಕೊಂಡು ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ಆಯ್ಕೆಯಾಗಿದೆ.

ತಂಡದಲ್ಲಿ ಜುಏನಾ ಡ್ಯಾಝಲ್ ಕುಟಿನ್ಹ, ಸನ್ನಿಧಿ, ಹಾರ್ದಿಕ ಪಿ., ಜೆನಿಟ ಸಿಂಧು ಪ್ರಸನ್ನ, ಧನ್ಯ ಶ್ರೀ, ಜನನಿ ಪಿ. ಗೌಡ, ಆಯಿಷತ್ ಶಹೀಮ, ಫಾತಿಮತ್ ಅಫ್ರಾ, ಹೆಚ್. ನಮೃತಾ ಶೆಟ್ಟಿ, ಅಪೇಕ್ಷ ಮರಿನಾ ರಬೆಲ್ಲೋ, ಜಿಯಾ ಹಾಗೂ ಚಂದನ ಭಾಗವಹಿಸಿದ್ದರು.

ಪಂದ್ಯಾಟದಲ್ಲಿ ಹಾರ್ದಿಕ ಪಿ. ಅವರು ಸವ್ಯಸಾಚಿ ಆಟಗಾರ್ತಿ ಹಾಗೂ ಜುಏನಾ ಡ್ಯಾಝಲ್ ಕುಟಿನ್ಹ ಅವರು ಉತ್ತಮ ದಾಳಿಗಾರ್ತಿ ಪ್ರಶಸ್ತಿಯನ್ನು ಪಡೆದುಕೊಂಡರು.

ಶಾಲಾ ಮುಖ್ಯ ಶಿಕ್ಷಕಿ ಭಗಿನಿ ಅನಿತಾ ಟ್ರೆಸ್ಸಿ ಅವರ ಮಾರ್ಗದರ್ಶನದಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಾಗೂ ರಾಷ್ಟ್ರೀಯ ಕಬಡ್ಡಿ ತರಬೇತುದಾರ ಬಾಲಕೃಷ್ಣ ರೈ ಪೊರ್ದಾಲ್ ಅವರು ತಂಡಕ್ಕೆ ತರಬೇತಿ ನೀಡಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರಿನಲ್ಲಿ ಸಂಭ್ರಮದ 28ನೇ ವರ್ಷದ ‘ಶ್ರೀಕೃಷ್ಣಲೋಕ’ ;1,250ಕ್ಕೂ ಅಧಿಕ ಪುಟಾಣಿ ಕೃಷ್ಣ-ರಾಧೆಯರಿಂದ ವೈಭವದ ಶೋಭಾಯಾತ್ರೆ

ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧೀನದಲ್ಲಿರುವ ಪರ್ಲಡ್ಕ ಶಿವಪೇಟೆಯ ವಿವೇಕಾನಂದ…

ಬೆಳಾಲು ಧ.ಮಂ. ಪ್ರೌಢಶಾಲೆಯಲ್ಲಿ ತಾಲೂಕು ಮಟ್ಟದ ನೆಟ್‌ಬಾಲ್ ಪಂದ್ಯಾಟ: ಆತಿಥೇಯ ಶಾಲೆಗೆ ಬಾಲಕಿಯರ ವಿಭಾಗದಲ್ಲಿ ಪ್ರಥಮ

ಬೆಳಾಲು: ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ಸೆ. 9ರಂದು ತಾಲೂಕು ಮಟ್ಟದ…

ತಾಲ್ಲೂಕು ಮಟ್ಟದ ಶಟಲ್ ಬ್ಯಾಡ್ಮಿಟನ್ ಪಂದ್ಯಾಟ | ವಿದ್ಯಾರ್ಥಿಗಳು ಸೋಲು ಗೆಲುವನ್ನು ಸಮಾನವಾಗಿ ಕಾಣಬೇಕು : ಸುರೇಶ್ ಶೆಟ್ಟಿ

ಪುತ್ತೂರು: ವಿದ್ಯಾರ್ಥಿಗಳು ಗೆಲುವನ್ನು ಮಾತ್ರ ನಿರೀಕ್ಷಿಸುತ್ತಿರಬಾರದ್ಲು. ಸೋತಾಗಲೂ ಅನುಭವ…

ಸೆ. 10 ಮತ್ತು 11ರಂದು ಎಸ್‌ಡಿಎಂ ಸ್ವಾಯತ್ತ ಕಾಲೇಜಿನಲ್ಲಿ ರಾಷ್ಟ್ರಮಟ್ಟದ ‘ಆರೋಹಂ’ ಶೈಕ್ಷಣಿಕ–ಸಾಂಸ್ಕೃತಿಕ ಉತ್ಸವ

ಉಜಿರೆ: ಸ್ಥಳೀಯ ಎಸ್‌ಡಿಎಂ ಸ್ವಾಯತ್ತ ಕಾಲೇಜಿನಲ್ಲಿ ಸೆ. 10 ಮತ್ತು 11ರಂದು ರಾಷ್ಟ್ರಮಟ್ಟದ…

ವಿದ್ಯಾಮಾತಾ ಅಕಾಡೆಮಿಯಲ್ಲಿ ಶಿಕ್ಷಕರ ನೇಮಕಾತಿ ಪರೀಕ್ಷೆಗಳಿಗೆ ಆನ್‌ಲೈನ್ ಕ್ರ್ಯಾಶ್ ಕೋರ್ಸ್ ಪ್ರಾರಂಭ

ಪುತ್ತೂರು: ಸರ್ಕಾರಿ ಹಾಗೂ ಸರ್ಕಾರಿ ಸ್ವಾಮ್ಯದ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ…