ಬೆಳಾಲು: ರೇಬೀಸ್ ರೋಗದ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವ ನಿಟ್ಟಿನಲ್ಲಿ ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಸೆ.12ರಂದು ರೇಬೀಸ್ ರೋಗದ ಕುರಿತು ಜಾಗೃತಿ ಕಾರ್ಯಕ್ರಮ ನಡೆಯಿತು.
ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಉಜಿರೆ ವಲಯದ ಪಶು ವೈದ್ಯಕೀಯ ಪರೀಕ್ಷಕರಾದ ಸಚಿನ್ ಅವರು ರೇಬೀಸ್ ರೋಗ ಹರಡುವ ಕಾರಣಗಳು, ರೋಗದಿಂದಾಗುವ ಅಪಾಯಗಳು ಹಾಗೂ ಕೈಗೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಕುರಿತು ಮಾಹಿತಿ ನೀಡಿದರು. ಪಿಪಿಟಿ ಹಾಗೂ ವಿಡಿಯೋ ಪ್ರದರ್ಶನದ ಮೂಲಕ ವಿದ್ಯಾರ್ಥಿಗಳಿಗೆ ರೇಬೀಸ್ ಕುರಿತು ಅರಿವು ಮೂಡಿಸಲಾಯಿತು.
ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯೋಪಾಧ್ಯಾಯರಾದ ಜಯರಾಮ ಮಯ್ಯ, ಬೆಳಾಲು ಗ್ರಾಮದ ಪಶುಸಖಿ ಯಶೋಧ ಹಾಗೂ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಭವಿತ ಕಾರ್ಯಕ್ರಮ ನಿರೂಪಿಸಿದರು.
ಪಶುಪಾಲನ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಹಾಗೂ ಶಾಲಾ ಶಿಕ್ಷಣ ಇಲಾಖೆ, ಬೆಳ್ತಂಗಡಿ ಇವರ ಸಹಯೋಗದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.






















