ಶಿಕ್ಷಣ

ಬೆಳಾಲು ಶ್ರೀ ಧ. ಮಂ. ಪ್ರೌಢಶಾಲೆಯಲ್ಲಿ ಹಿಂದಿ ದಿವಸ್ ಆಚರಣೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಳಾಲು: ಬೆಳಾಲು ಶ್ರೀ ಧ. ಮಂ. ಪ್ರೌಢಶಾಲೆಯಲ್ಲಿ ಹಿಂದಿ ದಿವಸ್ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಲೆಯ ಮುಖ್ಯೋಪಾಧ್ಯಾಯ ಜಯರಾಮ ಮಯ್ಯ ಮಾತನಾಡಿ, ಮಾತೃಭಾಷೆಯನ್ನು ಪ್ರೀತಿಸುವುದರೊಂದಿಗೆ ಇತರ ಭಾಷೆಗಳನ್ನೂ ಗೌರವಿಸುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಹೇಳಿದರು.

ವಿದ್ಯಾರ್ಥಿನಿ ಮುರ್ಷಿದ ಅವರು ಹಿಂದಿ ದಿವಸ್‌ನ ವಿಶೇಷತೆ ಕುರಿತು ಮಾತನಾಡಿದರು. ಕಾರ್ಯಕ್ರಮವನ್ನು ಸಂಘಟಿಸಿದ ಹಿಂದಿ ಶಿಕ್ಷಕಿ ಐಶ್ವರ್ಯ ಅವರು ಹಿಂದಿ ಭಾಷೆಯ ಮಹತ್ವವನ್ನು ತಿಳಿಸಿದರು.

ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

ವಿದ್ಯಾರ್ಥಿ ನಿಶಾನ್ ಸ್ವಾಗತಿಸಿದರು. ಸೃಜನ್ ವಂದಿಸಿದರು. ಶ್ರೇಯ ಮತ್ತು ಸೃಜನ್ಯ ಕಾರ್ಯಕ್ರಮ ನಿರೂಪಿಸಿದರು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಅಂಬಿಕಾ ವಿದ್ಯಾಲಯ ಸಿಬಿಎಸ್ಇ ಸಂಸ್ಥೆಯಲ್ಲಿ ಪ್ರತಿಭಾ ತರಂಗಿಣಿ | ಸ್ವಂತ ಸಾಮರ್ಥ್ಯ ಅರಿತುಕೊಳ್ಳಿ: ಡಾ.ಎಂ.ನರಸಿಂಹ ಮೂರ್ತಿ

ಪುತ್ತೂರು: ನಾವಿಂದು ಕೃತಕ ಬುದ್ಧಿಮತ್ತೆಯ ಕಾಲದಲ್ಲಿದ್ದೇವೆ. ಎಐ ಎಂಬುದು ನಾವು ಮಾಹಿತಿಯನ್ನು…

ಯೂತ್ ರೆಡ್’ಕ್ರಾಸ್ ಪ್ರೇರಣಾ ಶಿಬಿರ: ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜು ವಿದ್ಯಾರ್ಥಿ ತಂಡಕ್ಕೆ ಬೆಸ್ಟ್ ಟೀಮ್ ಅವಾರ್ಡ್

ಪುತ್ತೂರು: ಮಂಗಳೂರು ವಿಶ್ವವಿದ್ಯಾಲಯದ ಯುವ ರೆಡ್‌ಕ್ರಾಸ್ ಘಟಕ, ಭಾರತೀಯ ರೆಡ್‌ಕ್ರಾಸ್ ಸಂಸ್ಥೆ…