ಪುತ್ತೂರು: ಶಿಕ್ಷಣ ಸಂಪನ್ಮೂಲ ಕೇಂದ್ರ ಪುತ್ತೂರು ಹಾಗೂ ಮಂಗಳೂರು ಪಡಿ ಸಂಸ್ಥೆಯ ಆಶ್ರಯದಲ್ಲಿ ಅಸರ್ ತರಬೇತಿ ಉದ್ಘಾಟನೆ ಮತ್ತು ಬಾಲ್ಯ ವಿವಾಹ ಮುಕ್ತ ಜಿಲ್ಲೆಯ ಸಮಾಲೋಚನಾ ಸಭೆ ಪುತ್ತೂರು ಲಯನ್ಸ್ ಸೇವಾ ಸದನದಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಪುತ್ತೂರು ಲಯನ್ಸ್ ಕ್ಲಬ್ ಅಧ್ಯಕ್ಷ ಮಂಜುನಾಥ್ ಗೌಡ, ಮಕ್ಕಳ ಕಲಿಕೆಯ ಹಂತಗಳನ್ನು ಅರಿತುಕೊಳ್ಳುವುದು ಬಹಳ ಅಗತ್ಯ. ಪ್ರಸ್ತುತ ಮಕ್ಕಳು ಡಿಜಿಟಲ್ ಮಾಧ್ಯಮವನ್ನು ಹೆಚ್ಚು ಬಳಸುತ್ತಿರುವ ಹಿನ್ನೆಲೆಯಲ್ಲಿ ಅವರ ವರ್ತನೆ ಹಾಗೂ ಬದಲಾವಣೆಗಳ ಬಗ್ಗೆಯೂ ತಿಳಿದುಕೊಳ್ಳುವುದು ಅಗತ್ಯವಾಗಿದೆ ಎಂದು ಹೇಳಿದರು.
ಶಿಕ್ಷಣ ಸಂಪನ್ಮೂಲ ಕೇಂದ್ರದ ಅಧ್ಯಕ್ಷ ರಫೀಕ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಶಿಕ್ಷಣ ಸಂಪನ್ಮೂಲ ಕೇಂದ್ರಗಳ ಒಕ್ಕೂಟದ ಉಪಾಧ್ಯಕ್ಷ ನಂದ ಪಾಯಸ್ ಹಾಗೂ ಶಿಕ್ಷಣ ಸಂಪನ್ಮೂಲ ಕೇಂದ್ರದ ಉಪಾಧ್ಯಕ್ಷೆ ರೋಹಿಣಿ ಆಚಾರ್ಯ ನೆಹರುನಗರ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಸಂಪನ್ಮೂಲ ವ್ಯಕ್ತಿಗಳಾಗಿ ಮೌನೇಶ್ ವಿಶ್ವಕರ್ಮ ಹಾಗೂ ಸುನಿತಾ ನಾಯಕ್, ಮಂಗಳೂರು ಸಹಕರಿಸಿದರು.
ಇದೇ ಸಂದರ್ಭದಲ್ಲಿ ಡಾ. ಪದ್ಮಿನಿ ಮಕ್ಕಳ ಹಕ್ಕುಗಳ ಪ್ರಶಸ್ತಿ–2026ಕ್ಕೆ ಭಾಜನರಾದ ಕಸ್ತೂರಿ ಆರ್. ಬೊಳುವಾರು ಅವರನ್ನು ಸನ್ಮಾನಿಸಲಾಯಿತು.
ಪಡಿ ಸಂಸ್ಥೆಯ ಕಾರ್ಯನಿರ್ವಹಣಾಧಿಕಾರಿ ರೆನ್ನಿ ಡಿಸೋಜಾ ಪ್ರಾಸ್ತಾವಿಕವಾಗಿ ಮಾತನಾಡಿದರು. ಪಡಿ ಸಂಸ್ಥೆಯ ಸಿಬ್ಬಂದಿ ಸವಿತಾ ಸನ್ಮಾನ ಪತ್ರ ವಾಚಿಸಿದರು. ಮಮತಾ ರೈ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಜಯ ಕುಮಾರಿ ಉಪಸ್ಥಿತರಿದ್ದರು.
























