ಪುತ್ತೂರು: ಸರಕಾರಿ ಶಿಕ್ಷಕರ ನೇಮಕಾತಿ ಪರೀಕ್ಷೆಗಳಾದ GPSTR, PSTR ಹಾಗೂ HSTR ಪರೀಕ್ಷೆಗಳಿಗೆ ಅರ್ಜಿ ಸಲ್ಲಿಸುವ ಅವಧಿಯನ್ನು ಅಕ್ಟೋಬರ್ 26, 2026ರವರೆಗೆ ವಿಸ್ತರಿಸಲಾಗಿದ್ದು, ಪರೀಕ್ಷೆಗೆ ಸಿದ್ಧತೆ ನಡೆಸುತ್ತಿರುವ ಅಭ್ಯರ್ಥಿಗಳಿಗಾಗಿ ಪುತ್ತೂರಿನ ವಿದ್ಯಾಮಾತಾ ಅಕಾಡೆಮಿ ಅಂತಿಮ ಹಂತದ ಆನ್‌ಲೈನ್ ಕ್ರ್ಯಾಶ್ ಕೋರ್ಸ್ ತರಬೇತಿಯನ್ನು ಆರಂಭಿಸಿದೆ.
ಕಳೆದ ಹಲವು ವರ್ಷಗಳಿಂದ ಸರಕಾರಿ ಹಾಗೂ ಸರಕಾರಿ ಸ್ವಾಮ್ಯದ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡುತ್ತಾ ಬಂದಿರುವ ವಿದ್ಯಾಮಾತಾ ಅಕಾಡೆಮಿ, ಶಿಕ್ಷಕರ ನೇಮಕಾತಿ ಪರೀಕ್ಷೆಗಳನ್ನು ಎದುರಿಸಲಿರುವ ಅಭ್ಯರ್ಥಿಗಳಿಗೆ ಆನ್‌ಲೈನ್ ಮೂಲಕ ತರಬೇತಿ ನೀಡುತ್ತಿದೆ. ಅಭ್ಯರ್ಥಿಗಳು ಈ ತರಬೇತಿಯ ಸದುಪಯೋಗ ಪಡೆದುಕೊಳ್ಳಬಹುದು.
ಶಿಕ್ಷಕರ ಅರ್ಹತಾ ಪರೀಕ್ಷೆಗಳಲ್ಲಿ ಸಾಧನೆ
ವಿದ್ಯಾಮಾತಾ ಅಕಾಡೆಮಿ ಸರಕಾರಿ ನೇಮಕಾತಿ ಪರೀಕ್ಷೆಗಳ ಜೊತೆಗೆ ಶಿಕ್ಷಕರ ಅರ್ಹತಾ ಪರೀಕ್ಷೆಗಳಿಗೂ ತರಬೇತಿ ನೀಡುತ್ತಿದ್ದು, ಈವರೆಗೆ 800ಕ್ಕೂ ಅಧಿಕ ಅಭ್ಯರ್ಥಿಗಳು ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (KARTET), ಕರ್ನಾಟಕ ರಾಜ್ಯ ಅರ್ಹತಾ ಪರೀಕ್ಷೆ (KSET), ಕೇಂದ್ರೀಯ ಶಿಕ್ಷಕರ ಅರ್ಹತಾ ಪರೀಕ್ಷೆ (CTET) ಹಾಗೂ ರಾಷ್ಟ್ರೀಯ ಅರ್ಹತಾ ಪರೀಕ್ಷೆ (NET)ಗಳಲ್ಲಿ ಉತ್ತೀರ್ಣರಾಗಿದ್ದಾರೆ ಎಂದು ಅಕಾಡೆಮಿ ತಿಳಿಸಿದೆ.
ಕಳೆದ ಸಾಲಿನ ಶಿಕ್ಷಕರ ನೇಮಕಾತಿ ಪರೀಕ್ಷೆಗೆ ನೀಡಿದ ತರಬೇತಿಯ ಮೂಲಕ ಐವರು ಅಭ್ಯರ್ಥಿಗಳು GPSTR ನೇಮಕಾತಿಯಲ್ಲಿ ಉತ್ತೀರ್ಣರಾಗಿದ್ದಾರೆ ಎಂದು ತಿಳಿಸಲಾಗಿದೆ.
ಅ.26ರವರೆಗೆ ಅರ್ಜಿ ಸಲ್ಲಿಸಲು ಅವಕಾಶ
GPSTR, PSTR ಹಾಗೂ HSTR ನೇಮಕಾತಿಗೆ ಇನ್ನೂ ಅರ್ಜಿ ಸಲ್ಲಿಸದ ಅಭ್ಯರ್ಥಿಗಳಿಗೆ ಅಕ್ಟೋಬರ್ 26, 2026ರವರೆಗೆ ಅರ್ಜಿ ಸಲ್ಲಿಸಲು ಅವಕಾಶವಿದೆ. ಅರ್ಜಿ ಸಲ್ಲಿಸದ ಅರ್ಹ ಅಭ್ಯರ್ಥಿಗಳು ಈ ಅವಕಾಶವನ್ನು ಬಳಸಿಕೊಂಡು ನೇಮಕಾತಿ ಪ್ರಕ್ರಿಯೆಯಲ್ಲಿ ಭಾಗವಹಿಸಬಹುದಾಗಿದೆ.
ವಿದ್ಯಾಮಾತಾ ಅಕಾಡೆಮಿ ಆಯೋಜಿಸಿರುವ ಅಂತಿಮ ಹಂತದ ಕ್ರ್ಯಾಶ್ ಕೋರ್ಸ್ ಲೈವ್ ಆನ್‌ಲೈನ್ ತರಗತಿಗಳ ಮೂಲಕ ರಾತ್ರಿ 7ರಿಂದ 10 ಗಂಟೆಯವರೆಗೆ ನಡೆಯಲಿದೆ. ಪ್ರತಿದಿನ ಮಾದರಿ ಪ್ರಶ್ನೆಪತ್ರಿಕೆಗಳ ಪರೀಕ್ಷೆ, ಅಧ್ಯಯನ ಸಾಮಗ್ರಿಗಳು ಹಾಗೂ ನೇಮಕಾತಿಗೆ ಸಂಬಂಧಿಸಿದ ನಿರಂತರ ಮಾರ್ಗದರ್ಶನವನ್ನು ತರಬೇತಿ ಒಳಗೊಂಡಿದೆ.
ತರಬೇತಿಗೆ ಸೇರ್ಪಡೆಯಾಗಲು ಆಸಕ್ತ ಅಭ್ಯರ್ಥಿಗಳು ಪುತ್ತೂರಿನ ಎಪಿಎಂಸಿ ರಸ್ತೆಯಲ್ಲಿರುವ ವಿದ್ಯಾಮಾತಾ ಅಕಾಡೆಮಿ ಕಚೇರಿಯನ್ನು ಸಂಪರ್ಕಿಸಬಹುದು. ಹೆಚ್ಚಿನ ಮಾಹಿತಿಗಾಗಿ 9620468869 / 9945182516 ಸಂಖ್ಯೆಗೆ ಕರೆ ಮಾಡಬಹುದು.























