ಶಿಕ್ಷಣ

ದಸರಾ ರಜೆಯಲ್ಲಿ ಷರತ್ತುಬದ್ಧ ವಿಶೇಷ ತರಗತಿಗೆ ಅನುಮತಿ: ಶಾಲೆಗಳಿಗೆ ಶಿಕ್ಷಣ ಇಲಾಖೆ ಸೂಚನೆ

ಈ ಸುದ್ದಿಯನ್ನು ಶೇರ್ ಮಾಡಿ

ಮಂಗಳೂರು: ಮಳೆಯಿಂದಾಗಿ ಘೋಷಿಸಲಾಗಿದ್ದ ರಜೆಗಳನ್ನು ಸರಿದೂಗಿಸುವ ಉದ್ದೇಶದಿಂದ ಮುಂಬರುವ ದಸರಾ ರಜೆಯ ಅವಧಿಯಲ್ಲಿ ಷರತ್ತುಬದ್ಧವಾಗಿ ವಿಶೇಷ ತರಗತಿಗಳನ್ನು ನಡೆಸಲು ಶಾಲೆಗಳಿಗೆ ಶಿಕ್ಷಣ ಇಲಾಖೆ ಅನುಮತಿ ನೀಡಿದೆ.

gl

ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಶಾಲೆಗಳ ಮುಖ್ಯಸ್ಥರು ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳು (BEO) ಸಲ್ಲಿಸಿದ್ದ ಮನವಿಗಳನ್ನು ಪರಿಶೀಲಿಸಿದ ಜಿಲ್ಲಾ ಉಪನಿರ್ದೇಶಕರು (DDPI), ಮಳೆ ರಜೆಯಿಂದ ಉಂಟಾದ ಕಲಿಕಾ ದಿನಗಳ ಕೊರತೆಯನ್ನು ಸರಿದೂಗಿಸಲು ಅಕ್ಟೋಬರ್ 3ರಿಂದ 7ರವರೆಗೆ ತರಗತಿಗಳನ್ನು ನಡೆಸಲು ಅನುಮತಿ ನೀಡಿದ್ದಾರೆ.

ಅಕ್ಟೋಬರ್ 3ರಿಂದ ದಸರಾ ರಜೆ ಘೋಷಿಸಿಕೊಂಡು ವಿಶೇಷ ತರಗತಿಗಳನ್ನು ನಡೆಸುವ ಶಾಲೆಗಳು, ಶನಿವಾರ ಮಧ್ಯಾಹ್ನದ ನಂತರ ತರಗತಿಗಳನ್ನು ನಡೆಸುವ ಮೂಲಕ ಮಳೆ ರಜೆಯನ್ನು ಸರಿದೂಗಿಸಬೇಕು ಎಂದು ಸೂಚಿಸಲಾಗಿದೆ.

ಪೋಷಕರ ಲಿಖಿತ ಸಮ್ಮತಿ ಕಡ್ಡಾಯ

ವಿಶೇಷ ತರಗತಿಗಳಿಗೆ ವಿದ್ಯಾರ್ಥಿಗಳನ್ನು ಕಳುಹಿಸುವ ಮೊದಲು ಶಾಲೆಗಳು ಪೋಷಕರಿಂದ ಲಿಖಿತ ಸಮ್ಮತಿ ಪತ್ರ ಪಡೆಯಬೇಕು. ಪಡೆದ ಸಮ್ಮತಿ ಪತ್ರಗಳನ್ನು ಶಾಲೆಯಲ್ಲಿ ದಾಖಲೆಯಾಗಿ ಕಾಯ್ದಿರಿಸುವಂತೆ ಶಿಕ್ಷಣ ಇಲಾಖೆ ಸೂಚಿಸಿದೆ.

ಇದರ ಜೊತೆಗೆ, ಶಾಲೆಗಳು ಎಸ್‌ಡಿಎಂಸಿ ಸಭೆ ನಡೆಸಿ ವಿಶೇಷ ತರಗತಿಗಳನ್ನು ನಡೆಸುವ ಕುರಿತು ತೀರ್ಮಾನ ಕೈಗೊಳ್ಳಬೇಕು. ಈ ಕುರಿತ ಸಭೆಯ ಕಾರ್ಯಕಲಾಪಗಳನ್ನು ಮುಖ್ಯೋಪಾಧ್ಯಾಯರು ಹಾಗೂ ಸಹ ಶಿಕ್ಷಕರು ದಾಖಲಿಸಿಕೊಳ್ಳಬೇಕು ಎಂದು ತಿಳಿಸಲಾಗಿದೆ.

ವಿಶೇಷ ತರಗತಿಗಳ ಆಯೋಜನೆ ಸೇರಿದಂತೆ ಕೈಗೊಂಡ ಕ್ರಮಗಳು ಮತ್ತು ತರಗತಿಗಳ ವಿವರಗಳನ್ನು ಸಂಬಂಧಪಟ್ಟ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಲಿಖಿತವಾಗಿ ಸಲ್ಲಿಸುವಂತೆ ಶಾಲೆಗಳಿಗೆ ನಿರ್ದೇಶನ ನೀಡಲಾಗಿದೆ.

ಮಳೆ ರಜೆಯಿಂದಾಗಿ ಉಂಟಾದ ಕಲಿಕಾ ದಿನಗಳ ಕೊರತೆಯನ್ನು ಸರಿದೂಗಿಸುವ ಸಂದರ್ಭದಲ್ಲಿ ವಿದ್ಯಾರ್ಥಿಗಳ ಹಿತ ಹಾಗೂ ಪೋಷಕರ ಒಪ್ಪಿಗೆಯನ್ನು ಪರಿಗಣಿಸಿ ಈ ಕ್ರಮ ಕೈಗೊಳ್ಳಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರಿನಲ್ಲಿ ಸಂಭ್ರಮದ 28ನೇ ವರ್ಷದ ‘ಶ್ರೀಕೃಷ್ಣಲೋಕ’ ;1,250ಕ್ಕೂ ಅಧಿಕ ಪುಟಾಣಿ ಕೃಷ್ಣ-ರಾಧೆಯರಿಂದ ವೈಭವದ ಶೋಭಾಯಾತ್ರೆ

ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧೀನದಲ್ಲಿರುವ ಪರ್ಲಡ್ಕ ಶಿವಪೇಟೆಯ ವಿವೇಕಾನಂದ…

ಬೆಳಾಲು ಧ.ಮಂ. ಪ್ರೌಢಶಾಲೆಯಲ್ಲಿ ತಾಲೂಕು ಮಟ್ಟದ ನೆಟ್‌ಬಾಲ್ ಪಂದ್ಯಾಟ: ಆತಿಥೇಯ ಶಾಲೆಗೆ ಬಾಲಕಿಯರ ವಿಭಾಗದಲ್ಲಿ ಪ್ರಥಮ

ಬೆಳಾಲು: ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ಸೆ. 9ರಂದು ತಾಲೂಕು ಮಟ್ಟದ…

ಜ್ಞಾನ, ಪ್ರೀತಿಯ ಬೆಸುಗೆಯೇ ವಿವೇಕ | ಸಂತ ಫಿಲೋಮಿನಾ ಕಾಲೇಜಿನ ಪ್ರಥಮ ಪದವೀಧರರ ಸಮಾರಂಭದಲ್ಲಿ ಡಾ| ಪೀಟರ್ ಪಾವ್ಲ್ ಸಲ್ದಾನ

ಪುತ್ತೂರು: ಪದವಿ ಪಡೆಯುವುದರೊಂದಿಗೆ ಜ್ಞಾನಾರ್ಜನೆ ಮುಗಿಯುವುದಿಲ್ಲ; ಬದಲಾಗಿ ನಿಮ್ಮ ಜ್ಞಾನದ…