ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯ ಹತ್ತನೆಯ ತರಗತಿ ವಿದ್ಯಾರ್ಥಿನಿ ದೃಶಾನ ಎಸ್. ಸರಳಿಕಾನ ಇವರು ಚಿಕ್ಕಮಗಳೂರಿನಲ್ಲಿ ನಡೆದ ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟದ -55 ವಿಭಾಗದ ಟೇಕ್ವಾಂಡೋ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಇವರು ಬೆಟ್ಟಂಪಾಡಿ ನಿವಾಸಿಗಳಾದ ಸುರೇಶ್ ಗೌಡ ಸರಳಿಕಾನ ಹಾಗೂ ವಿದ್ಯಾಶ್ರೀ ಸರಳಿಕಾನ ದಂಪತಿ ಪುತ್ರಿ.























