ಶಿಕ್ಷಣ

ವಿಭಾಗ ಮಟ್ಟದ ದಸರಾ ವೇಟ್‌ ಲಿಫ್ಟಿಂಗ್: ಸಂತ ಫಿಲೋಮಿನಾ ಕಾಲೇಜು ವಿದ್ಯಾರ್ಥಿಗಳ ಸಾಧನೆ

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ), ಪುತ್ತೂರಿನ ವಿದ್ಯಾರ್ಥಿಗಳು ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ನಡೆದ ವಿಭಾಗ ಮಟ್ಟದ ದಸರಾ ವೇಟ್‌ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಗಮನಾರ್ಹ ಸಾಧನೆ ಮಾಡಿ ಐದು ಪದಕಗಳನ್ನು ಗೆದ್ದುಕೊಂಡಿದ್ದಾರೆ. ಅಲ್ಲದೆ, ಪದಕ ವಿಜೇತರು ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

gl

ತೃತೀಯ ಬಿ.ಎಸ್ಸಿ. ವಿದ್ಯಾರ್ಥಿನಿ ದೃಶ್ಯಾ ಕೆ.ವಿ. 53 ಕೆ.ಜಿ. ವಿಭಾಗದಲ್ಲಿ ಚಿನ್ನದ ಪದಕ ಪಡೆದರೆ, ದ್ವಿತೀಯ ಬಿಬಿಎ ವಿದ್ಯಾರ್ಥಿನಿ ಪ್ರೇಕ್ಷಾ ಪಿ. 61 ಕೆ.ಜಿ. ವಿಭಾಗದಲ್ಲಿ ಬೆಳ್ಳಿ ಪದಕ ಗಳಿಸಿದರು. ತೃತೀಯ ಬಿಸಿಎ ವಿದ್ಯಾರ್ಥಿನಿ ಚಮೀಹ್ಶಾ 69 ಕೆ.ಜಿ. ವಿಭಾಗದಲ್ಲಿ ಕಂಚಿನ ಪದಕ ಪಡೆದರು. ದ್ವಿತೀಯ ಬಿ.ಎಸ್ಸಿ. ವಿದ್ಯಾರ್ಥಿನಿ ಸಿಂಚನಾ ಬಿ. 77 ಕೆ.ಜಿ. ವಿಭಾಗದಲ್ಲಿ ಕಂಚಿನ ಪದಕ ಗಳಿಸಿದರು. ತೃತೀಯ ಬಿ.ಎಸ್ಸಿ. ವಿದ್ಯಾರ್ಥಿ ರಿತೇಶ್ ಕೆ.ಐ. 70 ಕೆ.ಜಿ. ವಿಭಾಗದಲ್ಲಿ ಚಿನ್ನದ ಪದಕ ಗೆದ್ದು ಕಾಲೇಜಿನ ಪದಕ ಪಟ್ಟಿಗೆ ಮತ್ತೊಂದು ಚಿನ್ನ ಸೇರಿಸಿದರು.

ವಿದ್ಯಾರ್ಥಿಗಳಿಗೆ ತರಬೇತುದಾರ ಅಶ್ವತ್ ಗೌಡ ತರಬೇತಿ ನೀಡಿದ್ದರು. ಕಾಲೇಜಿನ ಪ್ರಾಂಶುಪಾಲ ರೆ. ಡಾ. ಆಂಟನಿ ಪ್ರಕಾಶ್ ಮೊಂತೆರೋ ವಿದ್ಯಾರ್ಥಿಗಳು ಹಾಗೂ ತರಬೇತುದಾರರನ್ನು ಅಭಿನಂದಿಸಿ, ಅವರ ಸಾಧನೆ ಹಾಗೂ ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುವುದಕ್ಕೆ ಶುಭ ಹಾರೈಸಿದರು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಬೆಳಾಲು ಧ.ಮಂ. ಪ್ರೌಢಶಾಲೆಯಲ್ಲಿ ತಾಲೂಕು ಮಟ್ಟದ ನೆಟ್‌ಬಾಲ್ ಪಂದ್ಯಾಟ: ಆತಿಥೇಯ ಶಾಲೆಗೆ ಬಾಲಕಿಯರ ವಿಭಾಗದಲ್ಲಿ ಪ್ರಥಮ

ಬೆಳಾಲು: ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ಸೆ. 9ರಂದು ತಾಲೂಕು ಮಟ್ಟದ…

ಜ್ಞಾನ, ಪ್ರೀತಿಯ ಬೆಸುಗೆಯೇ ವಿವೇಕ | ಸಂತ ಫಿಲೋಮಿನಾ ಕಾಲೇಜಿನ ಪ್ರಥಮ ಪದವೀಧರರ ಸಮಾರಂಭದಲ್ಲಿ ಡಾ| ಪೀಟರ್ ಪಾವ್ಲ್ ಸಲ್ದಾನ

ಪುತ್ತೂರು: ಪದವಿ ಪಡೆಯುವುದರೊಂದಿಗೆ ಜ್ಞಾನಾರ್ಜನೆ ಮುಗಿಯುವುದಿಲ್ಲ; ಬದಲಾಗಿ ನಿಮ್ಮ ಜ್ಞಾನದ…