ಶಿಕ್ಷಣ

ಸೈನಿಕರ ಪ್ರಾಣರಕ್ಷಣೆಗೆ ಆಧುನಿಕ ತಂತ್ರಜ್ಞಾನಗಳಿವೆ: ಸುಂದರ ಪೂಜಾರಿ | ಅಂಬಿಕಾ ವಿದ್ಯಾಲಯದ ಸಿಬಿಎಸ್ಇ ಸಂಸ್ಥೆಯಲ್ಲಿ ಯೋಧ ಗೌರವ

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಈಗಿನ ದಿನಮಾನಗಳಲ್ಲಿ ಸೈನ್ಯದ ಎಲ್ಲಾ ವಿಭಾಗಗಳಲ್ಲೂ ಸೈನಿಕರ ಪ್ರಾಣಕ್ಕೆ ಅಪಾಯವಾಗದಂತೆ ತಡೆಯಲು ತಂತ್ರಜ್ಞಾನ ಸಹಾಯಕವಾಗಿದೆ. ಸೈನಿಕರ ಪ್ರಾಣಕ್ಕೆ ತೊಂದರೆಯಾಗಬಾರದೆನ್ನುವ ಕಾರಣದಿಂದ ಕರ್ತವ್ಯದ ಸಮಯದಲ್ಲಿ ಸೈನಿಕರು ಎಲ್ಲಿದ್ದರೂ ಮಿಲಿಟರಿ ವ್ಯವಸ್ಥೆಗೆ ಸೂಚನೆ ಸಿಗುವ ತಂತ್ರಜ್ಞಾನವಿದೆ ಎಂದು ದೇಶದ ಗಡಿ ಭದ್ರತಾ ಪಡೆಯಲ್ಲಿ ಸತತವಾಗಿ 34 ವರ್ಷಗಳ ಸೇವೆಯನ್ನು ಸಲ್ಲಿಸಿ ಜುಲೈ 31ರಂದು ನಿವೃತ್ತಿ ಹೊಂದಿ ಮರಳಿ ಊರಿಗೆ ಆಗಮಿಸಿದ ಸುಂದರ ಪೂಜಾರಿ ಹೇಳಿದರು.

gl

ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿ.ಬಿ.ಎಸ್.ಇ. ಸಂಸ್ಥೆಯಲ್ಲಿ ಶನಿವಾರ ಆಯೋಜಿಸಲಾದ ಗೌರವ ಕಾರ್ಯಕ್ರಮದಲ್ಲಿ ಭಾಗವಹಿಸಿ ಸನ್ಮಾನ ಸ್ವೀಕರಿಸಿ ಮಾತನಾಡಿದರು.

ದೇಶಸೇವೆ ಮಾಡಲು ಸೈನ್ಯಕ್ಕೆ ಸೇರುವುದು ಒಂದು ಉತ್ತಮ ಸಾಧ್ಯತೆ. ಹಾಗೆಂದು ಸೈನ್ಯಕ್ಕೆ ಸೈನಿಕರಾಗಿಯೇ ಸೇರಬೇಕೆಂದಿಲ್ಲ. ವೈದ್ಯರಾಗಿಯೂ, ಅಭಿಯಂತರರಾಗಿಯೂ, ತಂತ್ರಜ್ಞರಾಗಿಯೂ ಕೂಡ ಸೇವೆಯನ್ನು ಸಲ್ಲಿಸಲು ಅವಕಾಶಗಳಿವೆ ಎಂದರಲ್ಲದೆ ತಮ್ಮ ದೀರ್ಘಕಾಲದ ಅನುಭವದ ಸಾರವನ್ನು ವಿದ್ಯಾಥಿಗಳೊಂದಿಗೆ ಹಂಚಿಕೊಂಡರು.

ಅಧ್ಯಕ್ಷತೆ ವಹಿಸಿದ್ದ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಮಣ್ಯ ನಟ್ಟೋಜ ಮಾತನಾಡಿ ಸೈನಿಕರು ಕೇವಲ ಯುದ್ಧದ ಸಂದರ್ಭದಲ್ಲಿ ಮಾತ್ರವಲ್ಲದೆ ಪ್ರಾಕೃತಿಕ ವಿಕೋಪಗಳ ಸಂದರ್ಭದಲ್ಲಿಯೂ ಜನರನ್ನು ರಕ್ಷಿಸುವ ಕಾರ್ಯದಲ್ಲಿ ನಿರತರಾಗುತ್ತಾರೆ. ತಮ್ಮ ಕುಟುಂಬವನ್ನು ಬಿಟ್ಟು ಸಮಾಜದ ವಿವಿಧ ಕುಟುಂಬಗಳ ರಕ್ಷಣೆಗಾಗಿ ತಮ್ಮನ್ನು ಮುಡಿಪಾಗಿಟ್ಟುಕೊಳ್ಳುತ್ತಾರೆ. ಹಾಗಾಗಿ ನಾವು ಎಲ್ಲೇ ಹೋಗಲಿ, ಎಷ್ಟೇ ದೂರ ಪ್ರಯಾಣಿಸಲಿ ನಮ್ಮ ಹೆಮ್ಮೆಯ ಸೈನಿಕರನ್ನು ಗೌರವಿಸುವುದು ನಮ್ಮೆಲ್ಲರ ಕರ್ತವ್ಯ ಹಾಗೂ ಜವಾಬ್ದಾರಿಯಾಗಿದೆ. ಆದ್ದರಿಂದ ಅಂಬಿಕಾ ವಿದ್ಯಾಸಂಸ್ಥೆಯು ಕೇವಲ ಆಡಳಿತ ಮಂಡಳಿ, ಶಿಕ್ಷಕರು, ಪೋಷಕರು ಹಾಗೂ ವಿದ್ಯಾರ್ಥಿಗಳನ್ನು ಒಳಗೊಂಡಿಲ್ಲ. ನಮ್ಮ ದೇಶದ ಸೈನಿಕರನ್ನೂ ಒಡಗೂಡಿ ಅಂಬಿಕಾ ಪರಿವಾರವೆನಿಸಿಕೊಂಡಿದೆ ಎಂದು ನುಡಿದರು.

ಸುಂದರ ಪೂಜಾರಿ ದಂಪತಿಯನ್ನು ಅಂಬಿಕಾ ಸಂಸ್ಥೆಗಳ ಪರವಾಗಿ ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ವಿದ್ಯಾಲಯದ ಪ್ರಾಂಶುಪಾಲೆ ಮಾಲತಿ ಡಿ. ಹಾಗೂ ಉಪಪ್ರಾಂಶುಪಾಲೆ ಸುಜನಿ ಬೋರ್ಕರ್ ಉಪಸ್ಥಿತರಿದ್ದರು.

6ನೇ ತರಗತಿಯ ಆರಾಧ್ಯ ಸ್ವಾಗತಿಸಿದರು. 9ನೇ ತರಗತಿಯ ಮಾನ್ಯಲಕ್ಷೀ ಎನ್ ಪಿ ಯೋಧರ  ಪರಿಚಯಗೈದರು. 9ನೇ ತರಗತಿಯ ಕುವೀರ  ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು. ವಿದ್ಯಾರ್ಥಿನಿ ದೀಪ್ತಿ ಬಿ ಪಿ ಸಹಕರಿಸಿದರು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಬೆಳಾಲು ಧ.ಮಂ. ಪ್ರೌಢಶಾಲೆಯಲ್ಲಿ ತಾಲೂಕು ಮಟ್ಟದ ನೆಟ್‌ಬಾಲ್ ಪಂದ್ಯಾಟ: ಆತಿಥೇಯ ಶಾಲೆಗೆ ಬಾಲಕಿಯರ ವಿಭಾಗದಲ್ಲಿ ಪ್ರಥಮ

ಬೆಳಾಲು: ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ಸೆ. 9ರಂದು ತಾಲೂಕು ಮಟ್ಟದ…

ಜ್ಞಾನ, ಪ್ರೀತಿಯ ಬೆಸುಗೆಯೇ ವಿವೇಕ | ಸಂತ ಫಿಲೋಮಿನಾ ಕಾಲೇಜಿನ ಪ್ರಥಮ ಪದವೀಧರರ ಸಮಾರಂಭದಲ್ಲಿ ಡಾ| ಪೀಟರ್ ಪಾವ್ಲ್ ಸಲ್ದಾನ

ಪುತ್ತೂರು: ಪದವಿ ಪಡೆಯುವುದರೊಂದಿಗೆ ಜ್ಞಾನಾರ್ಜನೆ ಮುಗಿಯುವುದಿಲ್ಲ; ಬದಲಾಗಿ ನಿಮ್ಮ ಜ್ಞಾನದ…