ಪುತ್ತೂರು: ನವರಾತ್ರಿ ಪ್ರಯುಕ್ತ ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ವತಿಯಿಂದ ಅ. 16ರಂದು ಶಾರದಾ ಪೂಜೆ, ಆಯುಧ ಪೂಜೆ ಹಾಗೂ ಗಣಪತಿ ಹವನ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ.
ಆ ಪ್ರಯುಕ್ತ ಸಾರ್ವಜನಿಕರಿಗೆ ತಮ್ಮ ಮಕ್ಕಳ ಅಕ್ಷರಾಭ್ಯಾಸಕ್ಕೆ ಅವಕಾಶ ಕಲ್ಪಿಸಿಕೊಡಲಾಗಿದೆ. ಅಕ್ಷರಾಭ್ಯಾಸ ಕಾರ್ಯಕ್ರಮವು ಬಪ್ಪಳಿಗೆಯಲ್ಲಿ, ಶೃಂಗೇರಿ ಜಗದ್ಗುರುಗಳಾದ ಶ್ರೀ ವಿಧುಶೇಖರ ಭಾರತೀ ಸನ್ನಿಧಾನಂಗಳವರು ಉದ್ಘಾಟಿಸಿದ ಶ್ರೀ ಶಂಕರ ಸಭಾಭವನದಲ್ಲಿ ಬೆಳಗ್ಗೆ 11 ಗಂಟೆಗೆ ನಡೆಯಲಿದೆ.
ಆಸಕ್ತರು ಪಾರಂಪರಿಕ ಉಡುಗೆಗಳೊಂದಿಗೆ ತಮ್ಮ ಮಕ್ಕಳನ್ನು ಕರೆತಂದು ಅಕ್ಷರಾಭ್ಯಾಸ ನಡೆಸಬಹುದಾಗಿ ಪ್ರಕಟಣೆ ತಿಳಿಸಿದೆ.

























