ಶಿಕ್ಷಣ

ಯೂತ್ ರೆಡ್’ಕ್ರಾಸ್ ಪ್ರೇರಣಾ ಶಿಬಿರ: ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜು ವಿದ್ಯಾರ್ಥಿ ತಂಡಕ್ಕೆ ಬೆಸ್ಟ್ ಟೀಮ್ ಅವಾರ್ಡ್

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಮಂಗಳೂರು ವಿಶ್ವವಿದ್ಯಾಲಯದ ಯುವ ರೆಡ್‌ಕ್ರಾಸ್ ಘಟಕ, ಭಾರತೀಯ ರೆಡ್‌ಕ್ರಾಸ್ ಸಂಸ್ಥೆ (ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಶಾಖೆ) ಹಾಗೂ ಸುಬ್ರಹ್ಮಣ್ಯದ ಕೆ.ಎಸ್.ಎಸ್. ಕಾಲೇಜಿನ ಸಹಯೋಗದಲ್ಲಿ,ಸುಬ್ರಹ್ಮಣ್ಯದ ಕೆ.ಎಸ್.ಎಸ್. ಕಾಲೇಜಿನಲ್ಲಿ ಅಕ್ಟೋಬರ್ 8ರಿಂದ 10ರವರೆಗೆ ನಡೆದ ಮೂರು ದಿನಗಳ ಪ್ರೇರಣಾ ಶಿಬಿರದಲ್ಲಿ ಪುತ್ತೂರಿನ ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನ ತೃತೀಯ ಬಿ.ಕಾಂ ವಿದ್ಯಾರ್ಥಿ ಅಹಮ್ಮದ್ ಜೌಹರ್ ಹಾಗೂ ಪ್ರಥಮ ಬಿ.ಎಸ್ಸಿ ವಿದ್ಯಾರ್ಥಿನಿ ಮನೋನ್ಮಯಿ ಭಾಗವಹಿಸಿ ಬಹುಮಾನ ಪಡೆದುಕೊಂಡಿದ್ದಾರೆ.

ಆಶುಭಾಷಣ  ಸ್ಪರ್ಧೆಯಲ್ಲಿ ಅಹಮ್ಮದ್ ಜೌಹರ್ ದ್ವಿತೀಯ ಬಹುಮಾನ ಗಳಿಸಿ, ಇಬ್ಬರು ವಿದ್ಯಾರ್ಥಿಗಳು ಅತ್ಯುತ್ತಮ ಪ್ರದರ್ಶನ ನೀಡುವ ಮೂಲಕ ಇವರು ಪ್ರತಿನಿಧಿಸಿದ್ದ ತಂಡವು ಸ್ಪರ್ಧೆಯಲ್ಲಿ ‘ಅತ್ಯುತ್ತಮ ತಂಡ‘ (Best Team Award) ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಅಂಬಿಕಾ ವಿದ್ಯಾಲಯ ಸಿಬಿಎಸ್ಇ ಸಂಸ್ಥೆಯಲ್ಲಿ ಪ್ರತಿಭಾ ತರಂಗಿಣಿ | ಸ್ವಂತ ಸಾಮರ್ಥ್ಯ ಅರಿತುಕೊಳ್ಳಿ: ಡಾ.ಎಂ.ನರಸಿಂಹ ಮೂರ್ತಿ

ಪುತ್ತೂರು: ನಾವಿಂದು ಕೃತಕ ಬುದ್ಧಿಮತ್ತೆಯ ಕಾಲದಲ್ಲಿದ್ದೇವೆ. ಎಐ ಎಂಬುದು ನಾವು ಮಾಹಿತಿಯನ್ನು…