ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ನೆಲ್ಲಿಕಟ್ಟೆ ಅಂಬಿಕಾ ಪದವಿ ಪೂರ್ವ ವಿದ್ಯಾಲಯದ ಪ್ರಥಮ ಪಿಯುಸಿ ವಿದ್ಯಾರ್ಥಿ ಶ್ರೇಯಸ್ ಸಿ ಭಂಡಾರಿ ಅವರು ರಾಷ್ಟ್ರಮಟ್ಟದ ವಿಜ್ಞಾನ ಮಾದರಿ ಸ್ಪರ್ಧೆಯಲ್ಲಿ ಇನ್ಸ್’ಪೈರ್ ಮಾನಕ್ ಪ್ರಶಸ್ತಿ ಪಡೆದುಕೊಂಡಿದ್ದು, ಅಂತಾರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ನವದೆಹಲಿಯಲ್ಲಿ ರಾಷ್ಟ್ರಮಟ್ಟದ ವಿಜ್ಞಾನ ಮಾದರಿ ಸ್ಪರ್ಧೆ ಆಯೋಜಿಸಿತ್ತು. ಮುಂದಿನ ಹಂತದ ಅಂತಾರಾಷ್ಟ್ರೀಯ ಮಟ್ಟದ ಸ್ಪರ್ಧೆ ಜಪಾನ್ ನಲ್ಲಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.
ಇವರು ಪುತ್ತೂರು ಪಡುವನ್ನೂರಿನ ಚಂದ್ರಶೇಖರ ಭಂಡಾರಿ ಮತ್ತು ಹರ್ಷಮಣಿ ದಂಪತಿ ಪುತ್ರ.























