ಶಿಕ್ಷಣ

ಅಂಬಿಕಾ ವಿದ್ಯಾಲಯ ಸಿಬಿಎಸ್ಇ ಸಂಸ್ಥೆಯಲ್ಲಿ ಶಿಕ್ಷಕರಿಗೆ ಪುನಶ್ಚೇತನ ಕಾರ್ಯಾಗಾರ | ಶಿಕ್ಷಕರು ತಮ್ಮ ಕೌಶಲ್ಯವನ್ನು ವೃದ್ಧಿಪಡಿಸುವುದು ಅಗತ್ಯ : ರಾಜಶ್ರೀ ನಟ್ಟೋಜ

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಶಿಕ್ಷಣ ಎನ್ನುವುದು ನಿರಂತರವಾಗಿ ನಡೆಯುವಂತದ್ದು. ಶಿಕ್ಷಕರು ತಮ್ಮ ಕೌಶಲ್ಯವನ್ನು ಅಭಿವೃದ್ಧಿಪಡಿಸಲು ನಾನಾ ಬಗೆಯ ಪುನಶ್ಚೇತನ ಕಾರ್ಯಾಗಾರದಲ್ಲಿ ಭಾಗವಹಿಸುವುದು ಅತಿ ಅಗತ್ಯ. ಹಾಗಾಗಿ ತಾವು ಭಾಗವಹಿಸುವ ಪುನಶ್ಚೇತನ ಕಾರ್ಯಾಗಾರದಿಂದ ಮಕ್ಕಳ ಶೈಕ್ಷಣಿಕ ಬೆಳವಣಿಗೆಗೆ ಅನುಕೂಲಕರವಾಗುವಂತಹ ಸದುಪಯೋಗವನ್ನು ಶಿಕ್ಷಕರು ಪಡೆದುಕೊಳ್ಳುವಂತಾಗಬೇಕು ಎಂದು ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ರಾಜಶ್ರೀ ಎಸ್ ನಟ್ಟೋಜ ಹೇಳಿದರು.

ಅವರು ನಗರದ ನಟ್ಟೋಜ ಫೌಂಡೇಶನ್  ಟ್ರಸ್ಟ್ ಪ್ರವರ್ತಿತ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿ.ಬಿ.ಎಸ್.ಇ ಸಂಸ್ಥೆಯಲ್ಲಿ ಶಿಕ್ಷಕರಿಗಾಗಿ ನಡೆಸದ ಪುನಶ್ಚೇತನ ಕಾರ್ಯಾಗಾರವನ್ನು ಉದ್ಘಾಟಿಸಿ, ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಬೆಂಗಳೂರಿನ ವೇದಾಂಶ್ ಅಕಾಡೆಮಿಯ ಸಹಯೋಗದಲ್ಲಿ ನಡೆದ ಈ ಪುನಶ್ಚೇತನ ಕಾರ್ಯಾಗಾರದಲ್ಲಿ ವೇದಾಂಶ್ ಅಕಾಡೆಮಿಯ ಸ್ಥಾಪಕ ಮತ್ತು ವ್ಯವಸ್ಥಾಪಕ ನಿರ್ದೇಶಕ ಕರಣಂ ಆರ್ ನವೀನ್, ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಮತ್ತು ವೇದಾಂಶ್ ಅಕಾಡೆಮಿಯ ಸಲಹೆಗಾರ ಡಾ.ಎಂ. ನರಸಿಂಹಮೂರ್ತಿ, ವೇದಾಂಶ್ ಅಕಾಡೆಮಿಯ ಸಲಹೆಗಾರ ವಿಜಯ್ ಬಿ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ, ಶಿಕ್ಷಕರ ಕೌಶಲ್ಯ ಅಭಿವೃದ್ಧಿಗೆ ಸಂಬಂಧಿಸಿದಂತೆ ಅನೇಕ ಚಟುವಟಿಕೆಗಳನ್ನು ಹಮ್ಮಿಕೊಂಡರು. ವೇದಾಂಶ್ ಅಕಾಡೆಮಿಯ ಸಲಹೆಗಾರರಾದ ಭರತ್, ಸುಬ್ರಹ್ಮಣ್ಯ ಪಾರ್ಲ, ಅಂಬಿಕಾ ವಿದ್ಯಾಲಯದ ಪ್ರಾಂಶುಪಾಲೆ ಮಾಲತಿ ಡಿ ಉಪಸ್ಥಿತರಿದ್ದರು.

ಶಾಲಾ ಶಿಕ್ಷಕಿಯರಾದ ಶರಣ್ಯ, ಸಹನಾ ಪ್ರಾರ್ಥಿಸಿದರು. ಶಾಲಾ ಶಿಕ್ಷಕಿಯರಾದ ರಕ್ಷಾ ಸ್ವಾಗತಿಸಿ, ಶಾಲಾ ಶಿಕ್ಷಕಿ ಸ್ವಾತಿ ಅತಿಥಿಗಳನ್ನು ಪರಿಚಯಿಸಿದರು. ವೀಣಾ ಸರಸ್ವತಿ ನಿರೂಪಣೆಗೈದರು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಯೂತ್ ರೆಡ್’ಕ್ರಾಸ್ ಪ್ರೇರಣಾ ಶಿಬಿರ: ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜು ವಿದ್ಯಾರ್ಥಿ ತಂಡಕ್ಕೆ ಬೆಸ್ಟ್ ಟೀಮ್ ಅವಾರ್ಡ್

ಪುತ್ತೂರು: ಮಂಗಳೂರು ವಿಶ್ವವಿದ್ಯಾಲಯದ ಯುವ ರೆಡ್‌ಕ್ರಾಸ್ ಘಟಕ, ಭಾರತೀಯ ರೆಡ್‌ಕ್ರಾಸ್ ಸಂಸ್ಥೆ…