ಶಿಕ್ಷಣ

ವಿವೇಕಾನಂದ ಪಿಯು ಕಾಲೇಜಿನಲ್ಲಿ ‘ಮೇಧಾ 2027’ಕ್ಕೆ ಅರ್ಜಿ ಆಹ್ವಾನ | ಟಾಪ್ 25 ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಇಲ್ಲಿನ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಮೇಧಾ 2027 ಉಚಿತ ಶಿಕ್ಷಣ ಯೋಜನೆಗೆ ಡಿಸೆಂಬರ್ 6ರಂದು ಪ್ರವೇಶ ಪರೀಕ್ಷೆ ಏರ್ಪಡಿಸಿದ್ದು, ಆಸಕ್ತರು ನವಂಬರ್ 30ರೊಳಗೆ ಅರ್ಜಿ ಸಲ್ಲಿಸುವಂತೆ ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷ ರವೀಂದ್ರ ಪಿ. ಹೇಳಿದರು.

ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವಿವಿಧ ಶೈಕ್ಷಣಿಕ ಸೌಲಭ್ಯವನ್ನು ಒದಗಿಸುತ್ತಾ ಬಂದಿರುವ ನಮ್ಮ ಸಂಸ್ಥೆಯು  ಮೇಧಾ – 2027 ಎಂಬ ಶೀರ್ಷಿಕೆಯೊಂದಿಗೆ ಉಚಿತ ಶಿಕ್ಷಣ ಯೋಜನೆಯನ್ನು ಪರಿಚಯಿಸಿದೆ. ಪರೀಕ್ಷೆಯೊಂದನ್ನು ನಡೆಸಿ ಅದರಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಶೇ. 100 ಉಚಿತ ಶಿಕ್ಷಣ ದೊರೆಯಲಿದೆ. ಕಳೆದೆರಡು ಶೈಕ್ಷಣಿಕ ವರ್ಷದಿಂದ ಆರಂಭಗೊಂಡ ಈ ಯೋಜನೆಯಲ್ಲಿ ಕನ್ನಡ ಹಾಗೂ ಆಂಗ್ಲ ಮಾಧ್ಯಮದಲ್ಲಿ ಪರೀಕ್ಷೆ ನಡೆಯಲಿದ್ದು, 9 ಹಾಗೂ 10ನೇ ತರಗತಿಗೆ ಸಂಬಂಧಪಟ್ಟ ಗಣಿತ, ವಿಜ್ಞಾನ ಹಾಗೂ ಸಾಮಾನ್ಯ ಜ್ಞಾನದ ಆಧಾರದ ಮೇಲೆ 120 ನಿಮಿಷಗಳ ಪರೀಕ್ಷೆ ಇರಲಿದೆ. ವಿಜ್ಞಾನ, ವಾಣಿಜ್ಯ ಹಾಗೂ ಕಲಾ ವಿಭಾಗಗಳಿಗೆ ಸೇರಬಯಸುವ ವಿದ್ಯಾರ್ಥಿಗಳು ಈ ಪರೀಕ್ಷೆಯನ್ನು ಬರೆಯಬಹುದಾಗಿದೆ ಎಂದರು.

2026ರ ಡಿಸೆಂಬರ್ 6ರಂದು ದಕ್ಷಿಣ ಕನ್ನಡ, ಕಾಸರಗೋಡು, ಕೊಡಗು, ಹಾಸನ ಹಾಗೂ ತುಮಕೂರು ಜಿಲ್ಲೆಯ 9 ಕೇಂದ್ರಗಳಲ್ಲಿ ಬೆಳಗ್ಗೆ 10 ಗಂಟೆಗೆ ಸರಿಯಾಗಿ ಈ ಪರೀಕ್ಷೆ ನಡೆಯಲಿದೆ. ಪರೀಕ್ಷೆಗೆ ನೋಂದಾಯಿಸಲು ನವೆಂಬರ್ 30 ಕೊನೆ ದಿನಾಂಕ. ಪುತ್ತೂರಿನ ನೆಹರು ನಗರದ ವಿವೇಕಾನಂದ ಆವರಣದಲ್ಲಿರುವ ವಿವೇಕಾನಂದ ಪದವಿಪೂರ್ವ ಕಾಲೇಜು, ಕಡಬದ ಪಂಜ ರಸ್ತೆಯ ವಿದ್ಯಾನಗರದಲ್ಲಿರುವ ಸರಸ್ವತಿ ಪ್ರೌಢಶಾಲೆ, ವಿಟ್ಲದ ಸಾಲೆತ್ತೂರು ರಸ್ತೆಯಲ್ಲಿರುವ ಪಿ.ಎಂ. ಶ್ರೀ ಸರಕಾರಿ ಪ್ರೌಢಶಾಲೆ, ಬಿ. ಸಿ. ರೋಡ್ ನ ಬೆಸ್ಟ್ ಆಂಗ್ಲ ಮಾಧ್ಯಮ ಶಾಲೆ, ಸುಳ್ಯದ ಜಾಲ್ಸೂರಿನ ವಿನೋಬನಗರದಲ್ಲಿರುವ ವಿವೇಕಾನಂದ ಆಂಗ್ಲಮಾಧ್ಯಮ ಶಾಲೆ, ಕೇರಳದ ಕಾಸರಗೋಡು ಜಿಲ್ಲೆಯ ಬದಿಯಡ್ಕದಲ್ಲಿರುವ ಶ್ರೀ ಭಾರತಿ ವಿದ್ಯಾಪೀಠ, ಕೊಡಗು ಜಿಲ್ಲೆಯ ಮಡಿಕೇರಿಯಲ್ಲಿರುವ ಜನರಲ್ ತಿಮ್ಮಯ್ಯ ಪಬ್ಲಿಕ್ ಸ್ಕೂಲ್, ಹಾಸನ ಜಿಲ್ಲೆಯ ಸಕಲೇಶಪುರದಲ್ಲಿರುವ ರೋಟರಿ ಇಂಗ್ಲಿಷ್ ಸ್ಕೂಲ್ ಹಾಗೂ ತುಮಕೂರಿನಲ್ಲಿರುವ ಚೇತನ ವಿದ್ಯಾಮಂದಿರ ಪ್ರೌಢಶಾಲೆ, ಸರ್ವೋದಯ ಶಿಕ್ಷಣ ಸಂಸ್ಥೆ ಪರೀಕ್ಷಾ ಕೇಂದ್ರಗಳಾಗಿರಲಿವೆ ಎಂದು ವಿವರಿಸಿದರು.

ವಿದ್ಯಾರ್ಥಿಗಳು ಈ ನೋಂದಣಿ ಲಿಂಕ್ – www.vivekanandapuc.com/medha ನಲ್ಲಿ ನೋಂದಾಯಿಸುವ ಮೂಲಕ ಇದರ ಸದುಪಯೋಗವನ್ನು ಪಡೆದುಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ 8971924424, 8105072386, 8073700468 ಸಂಪರ್ಕ ಸಂಖ್ಯೆಗಳನ್ನು ಸಂಪರ್ಕಿಸಬಹುದು ಎಂದರು.

ಪತ್ರಿಕಾಗೋಷ್ಠಿಯಲ್ಲಿ ಕೋಶಾಧಿಕಾರಿ ಸಚಿನ್ ಶೆಣೈ, ನಿರ್ದೇಶಕ ಡಾ. ಕೆ.ಪಿ. ಸುಬ್ರಹ್ಮಣ್ಯ, ಪ್ರಾಂಶುಪಾಲ ದೇವಿಚರಣ್ ರೈ, ಉಪನ್ಯಾಸಕರುಗಳಾದ ಶಿವ ಪ್ರಸಾದ್, ಶ್ರೀವತ್ಸ ಉಪಸ್ಥಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಅಂಬಿಕಾ ವಿದ್ಯಾಲಯ ಸಿಬಿಎಸ್ಇ ಸಂಸ್ಥೆಯಲ್ಲಿ ಪ್ರತಿಭಾ ತರಂಗಿಣಿ | ಸ್ವಂತ ಸಾಮರ್ಥ್ಯ ಅರಿತುಕೊಳ್ಳಿ: ಡಾ.ಎಂ.ನರಸಿಂಹ ಮೂರ್ತಿ

ಪುತ್ತೂರು: ನಾವಿಂದು ಕೃತಕ ಬುದ್ಧಿಮತ್ತೆಯ ಕಾಲದಲ್ಲಿದ್ದೇವೆ. ಎಐ ಎಂಬುದು ನಾವು ಮಾಹಿತಿಯನ್ನು…