ಶಿಕ್ಷಣ

ನ. 28: ಜಿಡೆಕಲ್ಲು ಕಾಲೇಜಿನಲ್ಲಿ ಹಿರಿಯ ವಿದ್ಯಾರ್ಥಿಗಳ ಸಮ್ಮಿಲನ, ಮಹಾಸಭೆ

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಜಿಡೆಕಲ್ಲು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನ. 28ರಂದು ಬೆಳಿಗ್ಗೆ 10.30ರಿಂದ ಹಿರಿಯ ವಿದ್ಯಾರ್ಥಿಗಳ ಸಮ್ಮಿಲನ ಹಾಗೂ ಮಹಾಸಭೆ ಕಾಲೇಜು ಸಭಾಂಗಣದಲ್ಲಿ ನಡೆಯಲಿದೆ.

ಜಿಡೆಕಲ್ಲು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡಿದ ಎಲ್ಲಾ ಹಿರಿಯ ವಿದ್ಯಾರ್ಥಿಗಳು ಒಂದೇ ದಿನ ಕಾಲೇಜಿನಲ್ಲಿ ಒಟ್ಟಾಗಿ ಸೇರಿ ತಮ್ಮ ಹಳೆಯ ನೆನಪುಗಳನ್ನು ಮೆಲುಕು ಹಾಕುವುದರೊಂದಿಗೆ ಪರಸ್ಪರ ಸ್ನೇಹ, ಬಾಂಧವ್ಯವನ್ನು ಬೆಸೆಯುವ ಉದ್ದೇಶದಿಂದ ಈ ಸಮ್ಮಿಲನವನ್ನು ಆಯೋಜಿಸಲಾಗಿದೆ.

ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಸುಬ್ಬಪ್ಪ ಕೈಕಂಬ, ಐಕ್ಯೂಎಸಿ ಸಂಚಾಲಕ ಪ್ರೊ. ಪುಷ್ಪರಾಜ್ ಉಪಸ್ಥಿತರಿರುವರು. ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡಿದ ಎಲ್ಲಾ ಹಿರಿಯ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಪ್ರಕಟಣೆ ತಿಳಿಸಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಯಶಸ್ಸು ನಮ್ಮ ಆಯ್ಕೆ, ಅವಕಾಶವಲ್ಲ: ಡಾ.ಎಂ.ಎಸ್.ಮೂಡಿತ್ತಾಯ | ಅಂಬಿಕಾ ಪ.ಪೂ.ವಿದ್ಯಾಲಯಗಳ ವಾರ್ಷಿಕೋತ್ಸವ – ಮಾನಸೋಲ್ಲಾಸ 2025-26

ಪುತ್ತೂರು: ಪ್ರಪಂಚದ ನೂರ ತೊಂಬತ್ತಮೂರಕ್ಕೂ ಹೆಚ್ಚಿನ ರಾಷ್ಟ್ರಗಳ ಮಧ್ಯೆ ಭಾರತ ನಿರ್ಲಕ್ಷಿಸಲಾಗದ…