tamanvi
ಶಿಕ್ಷಣ

ಸರಕಾರಿ  ವಸತಿ ಶಾಲೆಗಳ  ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ

ಮೊರಾರ್ಜಿ ದೇಸಾಯಿ/ಕಿತ್ತೂರು ರಾಣಿ ಚೆನ್ನಮ್ಮ/ ಅಟಲ್ ಬಿಹಾರಿ ವಾಜಪೇಯಿ/ ಶ್ರೀ ನಾರಾಯಣ ಗುರು/ ಶ್ರೀಮತಿ ಇಂದಿರಾಗಾಂಧಿ / ಡಾ|| ಬಿ.ಆರ್.ಅಂಬೇಡ್ಕ‌ರ್ ವಸತಿ ಶಾಲೆಗಳಿಗೆ 2025-26ನೇ ಸಾಲಿನ ಪ್ರವೇಶ

ಈ ಸುದ್ದಿಯನ್ನು ಶೇರ್ ಮಾಡಿ

ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟವರ್ಗಗಳ ಕಲ್ಯಾಣ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ/ಕಿತ್ತೂರು ರಾಣಿ ಚೆನ್ನಮ್ಮ/ ಅಟಲ್ ಬಿಹಾರಿ ವಾಜಪೇಯಿ/ ಶ್ರೀ ನಾರಾಯಣ ಗುರು/ ಶ್ರೀಮತಿ ಇಂದಿರಾಗಾಂಧಿ / ಡಾ|| ಬಿ.ಆರ್.ಅಂಬೇಡ್ಕ‌ರ್ ವಸತಿ ಶಾಲೆಗಳಿಗೆ 2025-26ನೇ ಸಾಲಿನಲ್ಲಿ 5ನೇ ತರಗತಿ ವ್ಯಾಸಂಗ ಮಾಡುತ್ತಿರುವ ಆಸಕ್ತ ಪ.ಜಾ/ಪ.ವ./ ಸಾಮಾನ್ಯ/ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ 6ನೇ ತರಗತಿ ಪ್ರವೇಶ ಪರೀಕ್ಷೆಗೆ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ. ಆಸಕ್ತ ವಿದ್ಯಾರ್ಥಿಗಳು ಆಯಾ ತಾಲೂಕಿನ ಮೇಲ್ಕಂಡ ವಸತಿ ಶಾಲೆಗಳ ಮೂಲಕ ಜ.25 ರೊಳಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಪ.ಜಾ./ಪ.ವ. ಹಾಗೂ ಹಿಂ.ವ. ಪ್ರವರ್ಗ-1 ವಿದ್ಯಾರ್ಥಿಗಳ ಕುಟುಂಬ ವಾರ್ಷಿಕ ಆದಾಯವು ರೂ.2.50 ಲಕ್ಷ, ಮತ್ತು ಹಿಂ.ವ. 2ಎ,2ಬಿ, 3ಎ ಮತ್ತು 3ಬಿ ವಿದ್ಯಾರ್ಥಿಗಳ ಕುಟುಂಬ ವಾರ್ಷಿಕ ಆದಾಯವು ರೂ. 1.00 ಲಕ್ಷಗಳ ಮಿತಿಯೊಳಗಿರಬೇಕು. ಪ್ರವೇಶ ಪರೀಕ್ಷೆಯು ದಿ: 15/02/2025 ರಂದು ನಡೆಯಲಿದ್ದು, ಪ್ರವೇಶ ಪತ್ರಗಳನ್ನು ಫೆ.06ರಿಂದ ವೆಬ್‌ಸೈಟ್‌ಗಳಿಂದ ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ

 https://kreis.karnataka.gov.in/

http://kea.kar.nic.in


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರಿನಲ್ಲಿ ಸಂಭ್ರಮದ 28ನೇ ವರ್ಷದ ‘ಶ್ರೀಕೃಷ್ಣಲೋಕ’ ;1,250ಕ್ಕೂ ಅಧಿಕ ಪುಟಾಣಿ ಕೃಷ್ಣ-ರಾಧೆಯರಿಂದ ವೈಭವದ ಶೋಭಾಯಾತ್ರೆ

ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧೀನದಲ್ಲಿರುವ ಪರ್ಲಡ್ಕ ಶಿವಪೇಟೆಯ ವಿವೇಕಾನಂದ…

ಬೆಳಾಲು ಧ.ಮಂ. ಪ್ರೌಢಶಾಲೆಯಲ್ಲಿ ತಾಲೂಕು ಮಟ್ಟದ ನೆಟ್‌ಬಾಲ್ ಪಂದ್ಯಾಟ: ಆತಿಥೇಯ ಶಾಲೆಗೆ ಬಾಲಕಿಯರ ವಿಭಾಗದಲ್ಲಿ ಪ್ರಥಮ

ಬೆಳಾಲು: ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ಸೆ. 9ರಂದು ತಾಲೂಕು ಮಟ್ಟದ…

ಜ್ಞಾನ, ಪ್ರೀತಿಯ ಬೆಸುಗೆಯೇ ವಿವೇಕ | ಸಂತ ಫಿಲೋಮಿನಾ ಕಾಲೇಜಿನ ಪ್ರಥಮ ಪದವೀಧರರ ಸಮಾರಂಭದಲ್ಲಿ ಡಾ| ಪೀಟರ್ ಪಾವ್ಲ್ ಸಲ್ದಾನ

ಪುತ್ತೂರು: ಪದವಿ ಪಡೆಯುವುದರೊಂದಿಗೆ ಜ್ಞಾನಾರ್ಜನೆ ಮುಗಿಯುವುದಿಲ್ಲ; ಬದಲಾಗಿ ನಿಮ್ಮ ಜ್ಞಾನದ…

ತಾಲ್ಲೂಕು ಮಟ್ಟದ ಶಟಲ್ ಬ್ಯಾಡ್ಮಿಟನ್ ಪಂದ್ಯಾಟ | ವಿದ್ಯಾರ್ಥಿಗಳು ಸೋಲು ಗೆಲುವನ್ನು ಸಮಾನವಾಗಿ ಕಾಣಬೇಕು : ಸುರೇಶ್ ಶೆಟ್ಟಿ

ಪುತ್ತೂರು: ವಿದ್ಯಾರ್ಥಿಗಳು ಗೆಲುವನ್ನು ಮಾತ್ರ ನಿರೀಕ್ಷಿಸುತ್ತಿರಬಾರದ್ಲು. ಸೋತಾಗಲೂ ಅನುಭವ…