ಶಿಕ್ಷಣ

ಉನ್ನತ ವಿದ್ಯಾಭ್ಯಾಸದ ಮಾರ್ಗದರ್ಶಿಯಾಗಿರುವ ಪುತ್ತೂರಿನ ‘ಪ್ರೇರಣಾ’ ಸಂಸ್ಥೆಗೆ ಸ್ವಾಮಿ ವಿವೇಕಾನಂದ ಸದ್ಭಾವನಾ ರಾಜ್ಯ ಸಾಂಘಿಕ ಪ್ರಶಸ್ತಿ

ಪುತ್ತೂರು: ಇಲ್ಲಿನ ಪ್ರತಿಷ್ಠಿತ ‘ಪ್ರೇರಣಾ’ ಸಂಸ್ಥೆಗೆ ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ನೀಡುವ ಸ್ವಾಮಿ ವಿವೇಕಾನಂದ ಸದ್ಭಾವನಾ ರಾಜ್ಯ ಸಾಂಘಿಕ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಇಲ್ಲಿನ ಪ್ರತಿಷ್ಠಿತ ‘ಪ್ರೇರಣಾ’ ಸಂಸ್ಥೆಗೆ ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ನೀಡುವ ಸ್ವಾಮಿ ವಿವೇಕಾನಂದ ಸದ್ಭಾವನಾ ರಾಜ್ಯ ಸಾಂಘಿಕ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.

ಫೆ.5ರಂದು ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ನಗರದ ಗವಿಸಿದ್ದೇಶ್ವರ ವೇದಿಕೆಯಲ್ಲಿ ಸ್ವಾಮಿ ವಿವೇಕಾನಂದ ಜಯಂತ್ಯೋತ್ಸವ ಹಾಗೂ ಸ್ವಾಮಿ ವಿವೇಕಾನಂದ ರಾಷ್ಟ್ರೀಯ, ರಾಜ್ಯ ಸದ್ಭಾವನಾ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.

‘ಪ್ರೇರಣಾ’ ಸಂಸ್ಥೆಯ ನಿರ್ದೇಶಕರಾದ ನಾಗೇಶ್‍ ಕೆಡೆಂಜಿ ಹಾಗೂ ವಸಂತ ವೀರಮಂಗಲ ಅವರು ಪ್ರಶಸ್ತಿ ಸ್ವೀಕರಿಸಿದರು.

ಸಮಾರಂಭದಲ್ಲಿ ಸುಕ್ಷೇತ್ರ ಸಿದ್ಧನಕೊಳ್ಳ ನಿರಂತರ ದಾಸೋಹ ಹಾಗೂ ಕಲಾ ಪೋಷಕರ ಮಠದ ಡಾ.ಶ್ರೀ ಶಿವಕುಮಾರ ಮಹಾಸ್ವಾಮೀಜಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ ಎಸ್‍. ತಂಗಡಗಿ, ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟದ ರಾಜ್ಯಾಧ್ಯಕ್ಷ ಡಾ.ಎಸ್‍.ಬಾಲಾಜಿ ಮೊದಲಾದ ಗಣ್ಯರು ಉಪಸ್ಥಿತರಿದ್ದರು.

ಪ್ರತೀ ವರ್ಷದಂತೆ ಈ ವರ್ಷವೂ ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಬೆಂಗಳೂರು ಹಾಗೂ ವಿಜಯಪುರ ಜಿಲ್ಲಾ ಘಟಕದ ಆಶ್ರಯದಲ್ಲಿ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ನಗರದ ಗವಿಸಿದ್ದೇಶ್ವರ ವೇದಿಕೆಯಲ್ಲಿ ಸ್ವಾಮಿ ವಿವೇಕಾನಂದ ಜಯಂತ್ಯೋತ್ಸವ ಹಾಗೂ ಸ್ವಾಮಿ ವಿವೇಕಾನಂದ ರಾಷ್ಟ್ರೀಯ, ರಾಜ್ಯ ಸದ್ಭಾವನಾ ಪ್ರಶಸ್ತಿ ಪ್ರದಾನ ಸಮಾರಂಭ, ಸಾಂಸ್ಕೃತಿಕ ಯುವ ವೈಭವ ಕಾರ್ಯಕ್ರಮ ಏರ್ಪಡಿಸಿದ್ದು, ಪ್ರೇರಣಾ ಸಂಸ್ಥೆಯನ್ನು 2024-25ನೇ ಸಾಲಿನ ಪ್ರತಿಷ್ಠಿತ ಸ್ವಾಮಿ ವಿವೇಕಾನಂದರ ರಾಜ್ಯ ಸದ್ಭಾವನಾ ಸಾಂಘಿಕ ಪ್ರಶಸ್ತಿಗೆ ರಾಜ್ಯಾಧ್ಯಕ್ಷರು ಅಧ್ಯಕ್ಷತೆಯ ಸಮಿತಿಯಲ್ಲಿ ಆಯ್ಕೆ ಮಾಡಿದ್ದರು.

ಪುತ್ತೂರಿನ ಏಳ್ಮುಡಿಯ ಪ್ರಭು ಕಟ್ಟಡದಲ್ಲಿ ಕಾರ್ಯಾಚರಿಸುತ್ತಿರುವ ‘ಪ್ರೇರಣಾ’ ಸಂಸ್ಥೆ ಐಎಎಸ್‍, ಐ ಎಫ್ಎಸ್‍, ಐಪಿಎಸ್‍, ಸಿಎ, ಸಿಎಂಎ, ನೀಟ್‍, ಕೆಸೆಟ್, ಪ್ಲೇಸ್‍ ಮೆಂಟ್‍ ತರಬೇತಿ, ಪ್ಲೇಸ್‍ ಮೆಂಟ್‍, ಶಿಕ್ಷಣ ಗೈಡ್‍ ಲೈನ್ಸ್, ಪಿಯುಸಿ ಕೋಚಿಂಗ್‍, ಡಿಸ್ಟೆನ್ಸ್ ಶಿಕ್ಷಣ, ಲರ್ನಿಂಗ್‍ ಓರ್ಟರಿ ಸ್ಕಿಲ್ಸ್, ಸ್ಪೋಕನ್ ಇಂಗ್ಲೀಷ್‍, ಆ್ಯಂಕರಿಂಗ್‍ ತರಬೇತಿ ನೀಡುತ್ತಿದೆ. ‘ಪ್ರೇರಣಾ’ ಸಂಸ್ಥೆಯಿಂದ ಉನ್ನತ ಶಿಕ್ಷಣದ ಮಾಹಿತಿ, ಡಿಗ್ರಿ, ಇಂಜಿನಿಯರಿಂಗ್‍, ಮೆಡಿಕಲ್‍ ಕಾಲೇಜುಗಳು, ಸರಕಾರಿ ವಸತಿ ನಿಲಯ, ಸರಕಾರಿ ವಿದ್ಯಾರ್ಥಿ ವೇತನ, ಶೈಕ್ಷಣಿಕ ಸಾಲದ ಕುರಿತು, ಸರಕಾರಿ, ಖಾಸಗಿ ಉದ್ಯೋಗಗಳ ಮಾಹಿತಿ ನೀಡಲಾಗುತ್ತದೆ. ಅಲ್ಲದೆ ಪ್ರೇರಣಾ ಸಂಸ್ಥೆಯಿಂದ ಉನ್ನತ ಶಿಕ್ಷಣದ ಬಗ್ಗೆ ಮಾಹಿತಿ ಪಡೆದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಲಾಗುತ್ತಿದೆ.

‘ಪ್ರೇರಣಾ’ ಸಂಸ್ಥೆಯ ಆಡಳಿತ ಮಂಡಳಿ ನಿರ್ದೇಶಕ ಮುರಳೀಧರ ಕೆ.ಎಲ್‍., ನಿರ್ದೇಶಕರಾದ ಪ್ರವೀಣ್‍ ಕುಂಟ್ಯಾನ, ನಾಗೇಶ್‍ ಕೆಡೆಂಜಿ, ವಸಂತ ವೀರಮಂಗಲ ಅವರ ಮಾರ್ಗದರ್ಶನದಲ್ಲಿ ಕಾರ್ಯನಿರ್ವಾಹಕ ನಿರ್ದೇಶಕಿ ಮೋಕ್ಷಿತಾ ಮಿಥುನ್, ಪ್ರಬಂಧಕಿ ದಯಾಮಣಿ ಹೆಚ್‍.ಕೆ., ಸಿಬ್ಬಂದಿ ರಕ್ಷಿತಾ ಅವರು ಗಳ ಪರಿಶ್ರಮದಲ್ಲಿ ಬೆಳೆದು ಬಂದ ಈ ಸಂಸ್ಥೆಗೆ ಇದೀಗ ಬಂದಿರುವ ರಾಜ್ಯಮಟ್ಟದ ಪ್ರಶಸ್ತಿ ಸಂಸ್ಥೆಯ ಹಿರಿಮೆಗೆ ಸಂದ ಗೌರವ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಸಿಬಿಎಸ್ಇ 10ನೇ ತರಗತಿ: ಮೊದಲ ಬೋರ್ಡ್ ಪರೀಕ್ಷೆಗೆ ಕಡ್ಡಾಯ ಹಾಜರಾತಿ! ಗೈರುಹಾಜರಾದರೆ ‘ಎಸೆನ್ಷಿಯಲ್ ರಿಪೀಟ್’

ನವದೆಹಲಿ:ಸಿಬಿಎಸ್ಇ 10ನೇ ತರಗತಿ ವಿದ್ಯಾರ್ಥಿಗಳಿಗೆ 2026ನೇ ಸಾಲಿನಿಂದ ಜಾರಿಯಾಗುತ್ತಿರುವ ಎರಡು…

ಅಂಬಿಕಾದಲ್ಲಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ | ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗಾಗಿ ವಿಶೇಷ ಯೋಜನೆ

ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರಾಯೋಜಿತ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳು…

ಕೈಕಾರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಶತಮಾನೋತ್ಸವ: ಎರಡು ದಿನಗಳ ಐತಿಹಾಸಿಕ ಸಂಭ್ರಮಕ್ಕೆ ಭರ್ಜರಿ ಸಿದ್ಧತೆ

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ವ್ಯಾಪ್ತಿಗೆ ಒಳಪಟ್ಟಿರುವ ಕೈಕಾರ ಸರ್ಕಾರಿ ಹಿರಿಯ…