Friday, November 22
Share News

ಪುತ್ತೂರು: ಇಲ್ಲಿನ ನೆಲ್ಲಿಕಟ್ಟೆಯಲ್ಲಿರುವ ಈಶ ವಿದ್ಯಾಲಯದ ಪ್ರಾಂಶುಪಾಲ ಎಂ. ಗೋಪಾಲಕೃಷ್ಣ ಈಶ ಅವರ ಶಿಕ್ಷಣ ಹಾಗೂ ಸಾಮಾಜಿಕ ಕ್ಷೇತ್ರದ ಸಾಧನೆಯನ್ನು ಗುರುತಿಸಿ ಗೌರವ ಡಾಕ್ಟರೇಟ್ ಪದವಿ ಪ್ರಧಾನ ಮಾಡಲಾಗಿದೆ.

ಎಂ. ಗೋಪಾಲಕೃಷ್ಣ ಈಶ ಅವರ ವಾಣಿಯನ್ ಗಾಣಿಗ ಸಮುದಾಯದ ದಕ್ಷಿಣ ಕನ್ನಡದ ವಿಶೇಷ ಅಧ್ಯಯನಕ್ಕಾಗಿ ಚೆನ್ನೆöÊನಲ್ಲಿ ನಡೆದ ಸಮಾರಂಭದಲ್ಲಿ ಸೌತ್ – ವೆಸ್ಟರ್ನ್ ಅಮೆರಿಕನ್ ಯೂನಿವರ್ಸಿಟಿಯ ಪದವಿ ಪ್ರಧಾನ ಮಾಡಲಾಯಿತು.

ಬೆಳ್ಳಿಹಬ್ಬದ ಸಂಭ್ರಮದಲ್ಲಿರುವ ಈಶ ಎಜ್ಯುಕೇಶನಲ್ ಆ್ಯಂಡ್ ಸೋಶಿಯಲ್ ಸರ್ವೀಸ್ ಟ್ರಸ್ಟ್ ನ ಆಡಳಿತದಲ್ಲಿ ನಡೆಸಲ್ಪಡುವ ಈಶ ಶಿಕ್ಷಣ ಸಂಸ್ಥೆಯ ಸ್ಥಾಪಕರಾಗಿರುವ ಇವರು, ಪ್ರಸ್ತುತ ಸಂಸ್ಥೆಯ ಪ್ರಾಂಶುಪಾಲರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಕೆಮ್ಮಾಯಿ ವಿಷ್ಣು ಯುವಕ ಮಂಡಲದ ಸ್ಥಾಪಕ ಕಾರ್ಯದರ್ಶಿ, ವಾಣಿಯಾನ್ ಗಾಣಿಗ ಸಮಾಜ ಸೇವಾ ಸಂಘ ಪುತ್ತೂರು ಇದರ ಸ್ಥಾಪಕ ಕಾರ್ಯದರ್ಶಿ, ಜೆಸಿಐ ಪುತ್ತೂರು ಇದರ ಸದಸ್ಯನಾಗಿ, ಶ್ರೀ ಮಹಾಲಿಂಗೇಶ್ವರ ಭಜನಾ ಸೇವಾ ಟ್ರಸ್ಟ್ ಪುತ್ತೂರು ಇದರ ಸ್ಥಾಪಕರಾಗಿ ಪ್ರಸುತ್ತ ಸಂಚಾಲಕರಾಗಿ, ದಕ್ಷಿಣ ಕನ್ನಡ, ಕೊಡಗು, ಉಡುಪಿ ಜಿಲ್ಲಾ ಅತಿಥಿ ಉಪನ್ಯಾಸಕ ಸಂಘದ ಸ್ಥಾಪಕ ಅಧ್ಯಕ್ಷರಾಗಿ, ಈಶ ಲಹರಿ ಕಲಾ ತಂಡದ ಸ್ಥಾಪಕರಾಗಿ ಪ್ರಸುತ್ತ ರೋಟರಿ ಪುತ್ತೂರು ಎಲೈಟ್‌ನ ಸಿಎಲ್‌ಸಿಸಿ ಚೇರ್‌ಮೆನ್ ಇದರ ಸದಸ್ಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇದರೊಂದಿಗೆ ವಿವಿಧ ಸಂಘ ಸಂಸ್ಥೆಗಳಲ್ಲಿ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಹಾಗೂ ಸಾಮಾಜಿಕ ಧಾರ್ಮಿಕ ಕ್ಷೇತ್ರದಲ್ಲಿ ಸಕ್ರೀಯರಾಗಿದ್ದಾರೆ.

ಪ್ರಾಥಮಿಕ ಶಿಕ್ಷಣವನ್ನು ಬರ‍್ನಹಿತ್ಲು ಹಾರಾಡಿ ಶಾಲೆಯಲ್ಲಿ ಪೂರೈಸಿದರು. ಕೊಂಬೆಟ್ಟು ಜ್ಯೂನಿಯರ್ ಕಾಲೇಜಿನಲ್ಲಿ ಹೈಸ್ಕೂಲ್ ವಿದ್ಯಾಭ್ಯಾಸ ಪಡೆಯುತ್ತಿದ್ದಾಗ ದೈಹಿಕ ಶಿಕ್ಷಣ ಶಿಕ್ಷಕ ಹರಿಣಾಕ್ಷ ಅವರ ಮಾರ್ಗದರ್ಶನದಲ್ಲಿ ಎನ್.ಸಿ.ಸಿ. ಸರ್ಟಿಫೇಕೆಟ್‌ನೊಂದಿಗೆ ಬೆಸ್ಟ್ ಕೆಡೆಟ್ ಪ್ರಶಸ್ತಿ, ರೈಫಲ್ ಶೂಟಿಂಗ್‌ನಲ್ಲಿ ಪ್ರಥಮ ಪ್ರಶಸ್ತಿ ಪಡೆದರು. ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪದವಿ ಪೂರ್ವ ವಿದ್ಯಾಭ್ಯಾಸದ ಸಂದರ್ಭ ಪ್ರಾಂಶುಪಾಲರಾಗಿದ್ದ ಕುಂಜಪ್ಪ ಅವರ ಮಾರ್ಗದರ್ಶನದಲ್ಲಿ ಕಾಲೇಜು ವಿದ್ಯಾರ್ಥಿ ಸಂಘದ ಅಧ್ಯಕ್ಷನಾಗಿ, ರಾಜ್ಯಶಾಸ್ತç ವಿಭಾಗದ ಉಪನ್ಯಾಸಕ, ರಾಷ್ಟಿçÃಯ ಸೇವಾ ಯೋಜನಾಧಿಕಾರಿ  ವಿಶ್ವನಾಥ ಶೆಟ್ಟಿ ಅವರ ಮಾರ್ಗದರ್ಶನದಲ್ಲಿ ಎನ್.ಎಸ್.ಎಸ್. ನಾಯಕನಾಗಿ ಗುರುತಿಸಿಕೊಂಡರು. ಪದವಿ ಶಿಕ್ಷಣವನ್ನು ವಿವೇಕಾನಂದ ಮಹಾವಿದ್ಯಾಲಯ ನೆಹರುನಗರದಲ್ಲಿ ಅಧ್ಯಯನ ಮಾಡುವ ಸಂದರ್ಭ ಎನ್.ಎಸ್.ಎಸ್, ಎನ್.ಸಿ.ಸಿ ಅಲ್ಲದೇ ಮಂಗಳೂರು ವಿಶ್ವ ವಿದ್ಯಾಲಯದ ಸೆನಿಟ್ ಸದಸ್ಯನಾಗಿ ಆ ಬಳಿಕ ಸ್ನಾತಕೋತ್ತರ ಅಧ್ಯಯನವನ್ನು ಮಹಾ ವಿಶ್ವವಿದ್ಯಾಲಯದ ರಾಜ್ಯಶಾಸ್ತç ವಿಭಾಗದಲ್ಲಿ ಆಧ್ಯಯನ ಮಾಡಿರುತ್ತಾರೆ.

1999  ಜುಲೈ 27 ರಿಂದ 2 ವರ್ಷಗಳ ಕಾಲ ಸರಕಾರಿ ಪದವಿಪೂರ್ವ ಕಾಲೇಜು ಬೆಟ್ಟಂಪಾಡಿಯಲ್ಲಿ ರಾಜ್ಯಶಾಸ್ತ್ರದ ಅತಿಥಿ ಉಪನ್ಯಾಸಕನಾಗಿ, 6 ವರ್ಷ ಸರಕಾರಿ ಪದವಿಪೂರ್ವ ಕಾಲೇಜು ಬೆಳಿಯೂರುಕಟ್ಟೆಯಲ್ಲಿ ಅತಿಥಿ ಉಪನ್ಯಾಸಕನಾಗಿ, 8 ವರ್ಷ ಸರಕಾರಿ ಪದವಿಪೂರ್ವ ಕಾಲೇಜು ಕೊಂಬೆಟ್ಟು ಪುತ್ತೂರು ಇಲ್ಲಿ ಅತಿಥಿ ಉಪನ್ಯಾಸಕನಾಗಿ, 6 ವರ್ಷ ಕರ್ನಾಟಕ ಮುಕ್ತ ವಿಶ್ವವಿದ್ಯಾಲಯ ಮೈಸೂರು ಇದರ ಅಧ್ಯಯನ ಕೇಂದ್ರ ಸಂತ ಫಿಲೋಮಿನಾ ಕಾಲೇಜಿನಲ್ಲಿ ಉಪನ್ಯಾಸಕರಾಗಿ, ಸರಕಾರಿ ಪ್ರಥಮ ದರ್ಜೆ ಕಾಲೇಜು ಜಿಡೆಕಲ್ಲು ಕಾಲೇಜು ಪುತ್ತೂರು ಇಲ್ಲಿ ಒಂದು ವರ್ಷ, ಸರಕಾರಿ ಪ್ರಥಮ ದರ್ಜೆ ಕಾಲೇಜು ಕಾಣಿಯೂರು ಇಲ್ಲಿ ಒಂದು ವರ್ಷ ಹಾಗೂ ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಟ್ಟಂಪಾಡಿಯಲ್ಲಿ 9 ವರ್ಷ ಅತಿಥಿ ಉಪನ್ಯಾಸಕನಾಗಿ ಕಾರ್ಯನಿರ್ವಹಿಸಿದ್ದಾರೆ.

ಇವರು ಮಹಾಲಿಂಗ ಪಾಟಾಳಿ, ಯಮುನಾ ಮಹಾಲಿಂಗ ಪಾಟಾಳಿ ದಂಪತಿ ಪುತ್ರ.


Share News

Comments are closed.

Exit mobile version