tamanvi
ಉದ್ಯೋಗ

UGCET 2026: ಎಂಜಿನಿಯರಿಂಗ್ ಕೋರ್ಸ್ ಪ್ರವೇಶ ಬಯಸಿದ್ದ ಅಭ್ಯರ್ಥಿಗಳಿಗೆ ಗುಡ್‌ನ್ಯೂಸ್

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು:ಎಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ ಗಳ ಪ್ರವೇಶ ಬಯಸುವ ಅಭ್ಯರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಶುಭ ಸುದ್ದಿ ನೀಡಿದೆ. ಈ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆ (CET 2026) ಅರ್ಜಿ ಸಲ್ಲಿಕೆ ದಿನಾಂಕವನ್ನು ವಿಸ್ತರಣೆ ಮಾಡಲಾಗಿದೆ ಎಂದು ಪ್ರಾಧಿಕಾರ ಆಡಳಿತಾಧಿಕಾರಿ ಇಸ್ಲಾವುದ್ದೀನ್ ಗದ್ಯಾಳ ಅವರು ತಿಳಿಸಿದ್ದಾರೆ.

ಎಂಜಿನಿಯರಿಂಗ್ ಹಾಗೂ ಇನ್ನಿತರ ವೃತ್ತಿಪರ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಸಲ್ಲಿಸುವವರಿಗಾಗಿ ಕೊನೆ ದಿನಾಂಕವನ್ನು ಇದೇ ತಿಂಗಳ ಫೆಬ್ರವರಿ 22ರವರೆಗೆ ವಿಸ್ತರಣೆ ಮಾಡಲಾಗಿದೆ. ಇದುವರೆಗೂ 2.9 ಲಕ್ಷ ಮಂದಿ ಆಧಾರ್ ಸಂಖ್ಯೆ ಮೂಲಕ ನೋಂದಣಿ ಮಾಡಿಕೊಂಡಿದ್ದಾರೆ. ಇನ್ನೂ, ಅನೇಕರು ಫೆಬ್ರವರಿ 17ಕ್ಕೆ ನಿಗದಿಯಾಗಿದ್ದ ಕೊನೆ ದಿನಾಂಕವನ್ನು ವಿಸ್ತರಣೆ ಮಾಡುವಂತೆ ಮನವಿ ಮಾಡಿದ್ದರು. ಅವರ ಕೋರಿಕೆಯಂತೆ ಪ್ರಾಧಿಕಾರವು ಅರ್ಜಿ ಸಲ್ಲಿಸುವ ದಿನಾಂಕವನ್ನು ಫೆಬ್ರವರಿ 22 ಹಾಗೂ ಶುಲ್ಕ ಪಾವತಿಗೆ ದಿನಾಂಕವನ್ನು ಫೆಬ್ರವರಿ 24ರವರೆಗೆ ವಿಸ್ತರಿಸಲಾಗಿದೆ.

ಪ್ರವೇಶ ಬಯಸಿ ಇದುವರೆಗೆ ನೋಂದಣಿ ಮಾಡಿಕೊಂಡಿರುವ ಒಟ್ಟು ಅಭ್ಯರ್ಥಿಗಳ ಪೈಕಿ 2.5 ಲಕ್ಷ ಮಂದಿ ಅರ್ಜಿ ಶುಲ್ಕ ಪಾವತಿಸಿದ್ದಾರೆ. ಸ್ಯಾಟ್ಸ್ ಮೂಲಕ 1.8 ಲಕ್ಷ ಅಭ್ಯರ್ಥಿಗಳ ದಾಖಲೆಗಳ ಪರಿಶೀಲನೆ ಆನ್‌ಲೈನ್ ಮೂಲಕ ನಡೆಸಲಾಗಿದೆ. ಕಾಲೇಜು ಹಂತದಲ್ಲಿ 35 ಸಾವಿರ ಅಭ್ಯರ್ಥಿಗಳ ದಾಖಲೆ ಪರಿಶೀಲನೆ ಮಾಡಲಾಗಿದೆ.

ಈಗಾಗಲೇ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ತಮ್ಮ ಅರ್ಜಿಗಳಲ್ಲಿ ಏನಾದರು ಲೋಪಗಳು/ತಪ್ಪುಗಳು ಇದ್ದಲ್ಲಿ ಸರಿಪಡಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಅಧಿಕೃತ ಜಾಲತಾಣ https://cetonline.karnataka.gov.in/kea/ಕ್ಕೆ ಭೇಟಿ ನೀಡಬೇಕು.

ಫೆ.16ಕ್ಕೆ ಪಿಜಿ ನೀಟ್ ಅಭ್ಯರ್ಥಿಗಳ ದಾಖಲೆ ಪರಿಶೀಲನೆ
ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ 2026 (PGNEET 2026) ಸಂಬಂಧಿಸಿದಂತೆ ವೈದ್ಯಕೀಯ ಸ್ನಾತಕೋತ್ತರ ಪದವಿಗೆ 3ನೇ ಸುತ್ತಿನಲ್ಲಿ ಪ್ರವೇಶ ಬಯಸುವ ಸೇವಾನಿರತ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಫೆಬ್ರವರಿ 14ರವರೆಗೆ ಅವಕಾಶ ನೀಡಲಾಗಿತ್ತು.

ಅರ್ಹತಾ ಅಂಕಗಳನ್ನು ಕಡಿಮೆ ಮಾಡಿರುವ ಕಾರಣಕ್ಕೆ ಹೊಸದಾಗಿ ಇದುವರೆಗೂ ಅರ್ಜಿ ಸಲ್ಲಿಸದೇ ಇರುವ ಅರ್ಹರು ನಿಗದಿತ ದಿನಾಂಕದೊಳಗೆ ಅರ್ಜಿ ಸಲ್ಲಿಸಿದ್ದಾರೆ. ಈ ಅಭ್ಯರ್ಥಿಗಳ ಮೂಲ ದಾಖಲೆಗಳ ಪರಿಶೀಲನೆಯು ಇದೇ ಫೆಬ್ರವರಿ 16ರಂದು ಸೋಮವಾರ ಬೆಳಗ್ಗೆ 01 ಗಂಟೆ ಒಳಗೆ ಕೆಇಎ ಕಚೇರಿಯಲ್ಲಿ ನಡೆಯಲಿದ್ದು, ಅವರೇ ಖುದ್ದು ಹಾಜರಾಗಬೇಕು. ನಂತರ ಅರ್ಹರಾದವರು ಫೆಬ್ರವರಿ 17ರಂದು ಬೆಳಗ್ಗೆ 11 ಗಂಟೆವರೆಗೆ ಇಚ್ಛೆ/ಆಯ್ಕೆಗಳನ್ನು ದಾಖಲಿಸಲು ಅವಕಾಶ ನೀಡಲಾಗಿದೆ ಎಂದು ಪ್ರಕಟಣೆಯಲ್ಲಿ ಇಸ್ಲಾವುದ್ದೀನ್ ಗದ್ಯಾಳ ತಿಳಿಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts