ಉದ್ಯೋಗ

ಹೆಸ್ಕಾಂನಲ್ಲಿ 388 ಟ್ರೈನಿ ಹುದ್ದೆಗಳಿಗೆ ಅರ್ಜಿ ಆಹ್ವಾನ :ITI ಅಭ್ಯರ್ಥಿಗಳಿಗೆ ಅವಕಾಶ

GL

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು:ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ (HESCOM) ಸಂಸ್ಥೆಯು 2026ನೇ ಸಾಲಿಗೆ ಸಂಬಂಧಿಸಿದಂತೆ ಟ್ರೈನಿ (ಐಟಿಐ ಎಲೆಕ್ಟ್ರಿಷಿಯನ್) ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಆರಂಭಿಸಿದೆ. ಒಟ್ಟು 388 ಖಾಲಿ ಹುದ್ದೆಗಳಿಗಾಗಿ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.ಮಾನ್ಯತೆ ಪಡೆದ ಸಂಸ್ಥೆಯಿಂದ ITI (ಎಲೆಕ್ಟ್ರಿಷಿಯನ್) ಕೋರ್ಸ್ ಪೂರ್ಣಗೊಳಿಸಿದ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹರಾಗಿದ್ದು, ತಾಂತ್ರಿಕ ವಿದ್ಯಾಭ್ಯಾಸ ಹೊಂದಿರುವವರಿಗೆ ಉತ್ತಮ ಸರ್ಕಾರಿ ಸಂಸ್ಥೆಯಲ್ಲಿ ತರಬೇತಿ ಪಡೆಯುವ ಅವಕಾಶ ದೊರೆಯಲಿದೆ.

chennai-shopping
maithri

ನೇಮಕಾತಿ ಸಂಪೂರ್ಣ ವಿವರ:

ಹುದ್ದೆಯ ಹೆಸರು: ಟ್ರೈನಿ (ಐಟಿಐ ಎಲೆಕ್ಟ್ರಿಷಿಯನ್)

ಒಟ್ಟು ಹುದ್ದೆಗಳು: 388

ಪೋಸ್ಟಿಂಗ್ ಸ್ಥಳ: ಹುಬ್ಬಳ್ಳಿ, ಕರ್ನಾಟಕ

ಅರ್ಜಿ ಸಲ್ಲಿಕೆ ಆರಂಭ ದಿನಾಂಕ: ಫೆಬ್ರವರಿ 11, 2026

ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: ಮಾರ್ಚ್ 02, 2026

ಅರ್ಜಿ ಶುಲ್ಕ:

ಸಾಮಾನ್ಯ ವರ್ಗದ ಅಭ್ಯರ್ಥಿಗಳು: ₹100

ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳು: ₹50

ಅರ್ಜಿ ಶುಲ್ಕವನ್ನು ಡಿಮ್ಯಾಂಡ್ ಡ್ರಾಫ್ಟ್ (DD) ಮೂಲಕ ಪಾವತಿಸಬೇಕು.

ಆಯ್ಕೆ ಪ್ರಕ್ರಿಯೆ:

ಈ ನೇಮಕಾತಿಯಲ್ಲಿ ಲಿಖಿತ ಪರೀಕ್ಷೆ ಇರುವುದಿಲ್ಲ. ಸಲ್ಲಿಕೆಯಾಗುವ ಅರ್ಜಿಗಳನ್ನು ಶಾರ್ಟ್‌ಲಿಸ್ಟ್ ಮಾಡಲಾಗುವುದು. ಬಳಿಕ ಮೆರಿಟ್ ಪಟ್ಟಿಯನ್ನು ಪ್ರಕಟಿಸಿ ದಾಖಲೆಗಳ ಪರಿಶೀಲನೆ ನಡೆಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಮಾಸಿಕ ವೇತನ:

ಆಯ್ಕೆಯಾಗುವ ಅಭ್ಯರ್ಥಿಗಳಿಗೆ ತರಬೇತಿ ಅವಧಿಯಲ್ಲಿ ಪ್ರತಿ ತಿಂಗಳು ₹9,600 ಸ್ಟೈಪೆಂಡ್ ನೀಡಲಾಗುತ್ತದೆ. ತರಬೇತಿ ಅವಧಿಯ ಅನುಭವ ಭವಿಷ್ಯದಲ್ಲಿ ಉತ್ತಮ ಉದ್ಯೋಗಾವಕಾಶಗಳಿಗೆ ದಾರಿಯಾಗಲಿದೆ.

ಅರ್ಜಿ ಸಲ್ಲಿಸುವ ವಿಧಾನ:

ಅಭ್ಯರ್ಥಿಗಳು ಸಂಸ್ಥೆಯ ಅಧಿಕೃತ ಜಾಲತಾಣ hescom.co.in ಗೆ ಭೇಟಿ ನೀಡಿ ವ್ರೃತ್ತಿ ಅಥವಾ ನೇಮಕಾತಿ ವಿಭಾಗದಲ್ಲಿ ಟ್ರೈನಿ (ಐಟಿಐ ಎಲೆಕ್ಟ್ರಿಷಿಯನ್) ಹುದ್ದೆಯ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು. ಅಗತ್ಯ ಮಾಹಿತಿಯನ್ನು ಸರಿಯಾಗಿ ತುಂಬಿ, ಡಿಮ್ಯಾಂಡ್ ಡ್ರಾಫ್ಟ್ ಮೂಲಕ ಶುಲ್ಕ ಪಾವತಿಸಿ, ಅರ್ಜಿ ಸಲ್ಲಿಸಿದ ನಂತರ ಅಪ್ಲಿಕೇಶನ್ ನಂಬರ್ ಅಥವಾ ರಶೀದಿಯನ್ನು ಸಂಗ್ರಹಿಸಿಕೊಳ್ಳುವುದು ಕಡ್ಡಾಯವಾಗಿದೆ.ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗೆ ಅರ್ಜಿ ಸಲ್ಲಿಸುವಂತೆ ಸೂಚಿಸಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts