ಉದ್ಯೋಗ

ರಾಜ್ಯದ ಕಾಲೇಜುಗಳಲ್ಲಿ ಖಾಲಿಯಿರುವ 1,033 ಹುದ್ದೆಗಳ ಭರ್ತಿಗೆ ಸಿಎಂ ಸೂಚನೆ

GL
ರಾಜ್ಯದ ವಿವಿಧ ಕಾಲೇಜುಗಳಲ್ಲಿ ಖಾಲಿ ಇರುವ 1,033 ಹುದ್ದೆಗಳು ಮತ್ತು ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ತಕ್ಷಣವೇ ಕ್ರಮ ತೆಗೆದುಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರು ಆರ್ಥಿಕ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ಸುದ್ದಿಯನ್ನು ಶೇರ್ ಮಾಡಿ

ರಾಜ್ಯದ ವಿವಿಧ ಕಾಲೇಜುಗಳಲ್ಲಿ ಖಾಲಿ ಇರುವ 1,033 ಹುದ್ದೆಗಳು ಮತ್ತು ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ತಕ್ಷಣವೇ ಕ್ರಮ ತೆಗೆದುಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರು ಆರ್ಥಿಕ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

chennai-shopping
maithri

ಸಿಎಂ ಸಿದ್ದರಾಮಯ್ಯ ಅವರು ಬುಧವಾರ ಗೃಹ ಕಛೇರಿ ಕೃಷ್ಣಾದಲ್ಲಿ ಉನ್ನತ ಮಟ್ಟದ ಶಿಕ್ಷಣ ಇಲಾಖೆ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಈ ವೇಳೆ ಖಾಲಿ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ತೆಗೆದುಕೊಂಡ ಕ್ರಮಗಳ ಬಗ್ಗೆ ಎರಡು ದಿನಗಳಲ್ಲಿ ಮಾಹಿತಿ ನೀಡಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಇನ್ನು ಉನ್ನತ ಶಿಕ್ಷಣಕ್ಕೆ ಪ್ರಸಕ್ತ ಬಜೆಟ್‌ನಲ್ಲಿ 5,862 ಕೋಟಿ ರೂಪಾಯಿ ಅನುದಾನ ನೀಡಲಾಗಿದೆ. ಈವರೆಗೆ 3,713 ಕೋಟಿ (ಶೇಕಡ 72.87) ಬಳಕೆ ಆಗಿದೆ. ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಮೂಲಸೌಕರ್ಯ ಅಭಿವೃದ್ಧಿಗೆ ಬಜೆಟ್‌ನಲ್ಲಿ 250 ಕೋಟಿ ರೂಪಾಯಿ ನೀಡಲಾಗಿದೆ. ಅನುದಾನವನ್ನು ಪೂರ್ಣ ಪ್ರಮಾಣದಲ್ಲಿ ಬಳಸಿಕೊಳ್ಳಬೇಕೆಂದು ಅಧಿಕಾರಿಗಳಿಗೆ ತಿಳಿಸಿದರು.

30 ಕೋಟಿ ರೂಪಾಯಿ ವೆಚ್ಚದಲ್ಲಿ 21 ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು 9 ಮಹಿಳಾ ಪಾಲಿಟೆಕ್ನಿಕ್ ಕಾಲೇಜುಗಳನ್ನು ಉನ್ನತೀಕರಿಸುವ ಕಾರ್ಯ ನಡೆಯುತ್ತಿದೆ. ಮೈಸೂರಿನ ಮಹಾರಾಣಿ ಕಾಲೇಜು ಮತ್ತು ಹಾಸ್ಟೆಲ್‌ನ ನೂತನ ಕಟ್ಟಡ ಕಾಮಗಾರಿಯನ್ನು ಶೀಘ್ರದಲ್ಲೇ ಪ್ರಾರಂಭಿಸಬೇಕು. ಅನುಮೋದನೆ ನೀಡಲಾಗಿರುವ ಕಾಲೇಜು ಕಟ್ಟಡಗಳ ನಿರ್ಮಾಣ ಕಾಮಗಾರಿಯನ್ನು ಬೇಗ ಪೂರ್ಣಗೊಳಿಸಬೇಕೆಂದು ಸೂಚನೆ ನೀಡಿದರು.

ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ 1,842 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳನ್ನು ಭರ್ತಿ ಮಾಡಲಾಗಿದೆ. ಒಂದೇ ದಿನದಲ್ಲಿ 1,016 ಅಭ್ಯರ್ಥಿಗಳಿಗೆ ಸ್ಥಳ ನಿಯುಕ್ತಿಯೊಂದಿಗೆ ಆದೇಶ ನೀಡಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಮಾಹಿತಿ ನೀಡಿದರು.

ಅಪ್ರೆಂಟಿಸ್‌ ಶಿಪ್ ಎಂಬೆಡೆಡ್ ಪದವಿ ಕಾರ್ಯಕ್ರಮದಡಿ ಪ್ರಸಕ್ತ ಸಾಲಿನಲ್ಲಿ 43 ಕಾಲೇಜುಗಳ 1,477 ವಿದ್ಯಾರ್ಥಿಗಳಿಗೆ ಸ್ಟೈಪೆಂಡರಿ ಅಪ್ರೆಂಟಿಸ್‌ಶಿಪ್ ನೀಡಲಾಗಿದೆ. ಸಿಆ‌ರ್ ಐಎಸ್‌ಪಿ ಮತ್ತು ಸೆಕ್ಟ‌ರ್ ಸ್ಕಿಲ್ ಕೌನ್ಸಿಲ್ಸ್ ಸಹಭಾಗಿತ್ವದಲ್ಲಿ ಅನುಷ್ಠಾನಗೊಳಿಸಲಾಗಿದೆ. ಪದವಿ ಜೊತೆಗೆ ಉದ್ಯೋಗ ಒದಗಿಸುವ ಅವಕಾಶ ಇದರಿಂದ ಹೆಚ್ಚಿದೆ. ಈ ಯೋಜನೆಯನ್ನು ಮತ್ತಷ್ಟು ಕಾಲೇಜುಗಳಿಗೆ ವಿಸ್ತರಿಸುವ ಕುರಿತು ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿದರು.

ಕಾರ್ಪೊರೇಟ್ ಸಂಸ್ಥೆಗಳ ಸಾಮಾಜಿಕ ಹೊಣೆಗಾರಿಕೆ ನಿಧಿ ಅಡಿಯಲ್ಲಿ 20 ಕಾರ್ಪೊರೇಟ್ ಸಂಸ್ಥೆಗಳೊಂದಿಗೆ ಒಡಂಬಡಿಕೆ ಮಾಡಿಕೊಳ್ಳಲಾಗಿದೆ. ಉನ್ನತ ಶಿಕ್ಷಣದಲ್ಲಿ ಒಟ್ಟು 24 ಲಕ್ಷ ವಿದ್ಯಾರ್ಥಿಗಳಿದ್ದು, 5 ಲಕ್ಷ ವಿದ್ಯಾರ್ಥಿಗಳು ಸರ್ಕಾರಿ ಕಾಲೇಜುಗಳಲ್ಲಿ ಕಲಿಯುತ್ತಿದ್ದಾರೆ ಎಂದು ಅವರು ತಿಳಿಸಿದರು. ಉನ್ನತ ಶಿಕ್ಷಣಕ್ಕೆ ಒಟ್ಟಾರೆ ಪ್ರವೇಶಾತಿ ರಾಜ್ಯದಲ್ಲಿ ಶೇಕಡ 36ರಷ್ಟಿದೆ. ದೇಶದ ಶೇಕಡಾವಾರು 27.30ರಷ್ಟಿದೆ. ಉನ್ನತ ಶಿಕ್ಷಣ ಪ್ರವೇಶಾತಿಯಲ್ಲಿ ರಾಷ್ಟ್ರಮಟ್ಟದಲ್ಲಿ ಕರ್ನಾಟಕ 12ನೇ ಸ್ಥಾನದಲ್ಲಿದೆ. ಮತ್ತಷ್ಟು ಅಭಿವೃದ್ಧಿಗೊಳಿಸುವ ಹಿನ್ನೆಲೆ ಯೋಜನೆಗಳನ್ನು ರೂಪಿಸಬೇಕು. ಕನ್ನಡ ವಿಶ್ವವಿದ್ಯಾಲಯ ಮತ್ತು ಜಾನಪದ ವಿಶ್ವವಿದ್ಯಾಲಯಗಳ ಸಮಸ್ಯೆಗಳನ್ನು ಬಗೆಹರಿಸಲು ಕ್ರಮ ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚಿಸಿದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts