ಉದ್ಯೋಗ

ಇನ್ನು ಕೆ.ಪಿ.ಎಸ್.ಸಿ ಪರೀಕ್ಷೆಯಲ್ಲಿ ಈ ಪೆನ್ ಬಳಕೆ ಕಡ್ಡಾಯ!

ಕೆಪಿಎಸ್‌ಸಿಯು ಮಹತ್ವದ ಪ್ರಕಟಣೆಯೊಂದನ್ನು ಹೊರಡಿಸಿದೆ. ಇನ್ಮುಂದೆ ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಕಡ್ಡಾಯವಾಗಿ ನೀಲಿ ಬಣ್ಣದ ಬಾಲ್ ಪಾಯಿಂಟ್ ಪೆನ್ ಬಳಕೆ ಕಡ್ಡಾಯವಾಗಿ ಬಳಸಬೇಕು ಎಂದು ಸೂಚನೆ ನೀಡಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಕೆಪಿಎಸ್‌ಸಿಯು ಮಹತ್ವದ ಪ್ರಕಟಣೆಯೊಂದನ್ನು ಹೊರಡಿಸಿದೆ. ಇನ್ಮುಂದೆ ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಕಡ್ಡಾಯವಾಗಿ ನೀಲಿ ಬಣ್ಣದ ಬಾಲ್ ಪಾಯಿಂಟ್ ಪೆನ್ ಬಳಕೆ ಕಡ್ಡಾಯವಾಗಿ ಬಳಸಬೇಕು ಎಂದು ಸೂಚನೆ ನೀಡಿದೆ.

Shani-pooja

ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಈವರೆಗೆ ಕಪ್ಪು ಬಣ್ಣದ ಬಾಲ್ ಪಾಯಿಂಟ್ ಪೆನ್‌ನಿಂದ ಪರೀಕ್ಷೆ ಬರೆಯಬೇಕು ಎಂದು ಅಭ್ಯರ್ಥಿಗಳಿಗೆ ಸೂಚಿಸಲಾಗುತ್ತಿತ್ತು. ಆದರೆ ಈಗ ಸೂಚನೆಯಲ್ಲಿ ಮಾರ್ಪಾಡು ಮಾಡಿ ಫೆಬ್ರವರಿ 16ರಿಂದ ಕೆಪಿಎಸ್‌ಸಿ ನಡೆಸುವ ಎಲ್ಲಾ ಪರೀಕ್ಷೆಗಳಲ್ಲಿ ಕಡ್ಡಾಯವಾಗಿ ನೀಲಿ ಬಣ್ಣದ ಪೆನ್ ಮಾತ್ರ ಬಳಸಬೇಕು ಎಂದು ಕೆಪಿಎಸ್‌ಸಿ ಪ್ರಕಟಣೆಯಲ್ಲಿ ತಿಳಿಸಿದೆ.

ಸಾಮಾನ್ಯವಾಗಿ ಬಹುತೇಕ ಎಲ್ಲೆಡೆ ನೀಲಿ ಪೆನ್ ಬಳಕೆಯಲ್ಲಿದೆ. ಆದರೆ, ಕೆಪಿಎಸ್‌ಸಿ ಪರೀಕ್ಷೆಗೆ ಮಾತ್ರ ಕಪ್ಪು ಬಣ್ಣದ ಪೆನ್ ಬಳಕೆಗೆ ನಿರ್ದೇಶನ ನೀಡುವುದರಿಂದ ಅಭ್ಯರ್ಥಿಗಳು ಅನಗತ್ಯವಾಗಿ ಗೊಂದಲಕ್ಕೆ ಒಳಗಾಗುತ್ತಾರೆ. ಆಯೋಗದ ಸದಸ್ಯರು ಸಾಮಾನ್ಯವಾಗಿ ಬಳಕೆಯಲ್ಲಿರುವ ನೀಲಿ ಪೆನ್ ಬಳಕೆಗೆ ಸಲಹೆ ನೀಡಿದ ಹಿನ್ನೆಲೆ ಈ ನಿರ್ಧಾರವನ್ನು ತೆಗೆದುಕೊಳಲಾಗಿದೆ ಎಂದು ತಿಳಿದುಬಂದಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಮಹಿಳಾ ಪತ್ರಕರ್ತೆಯರಿಗಾಗಿ ಇನ್ಫೋಸಿಸ್ ‘ಸ್ಪ್ರಿಂಗ್ ಬೋರ್ಡ್’ ತರಬೇತಿ: ಮಾರ್ಚ್ 10ರವರೆಗೆ ಅರ್ಜಿ ಆಹ್ವಾನ

ಬೆಂಗಳೂರು: ಮಹಿಳಾ ಪತ್ರಕರ್ತೆಯರ ವೃತ್ತಿಪರ ಕೌಶಲ್ಯಾಭಿವೃದ್ಧಿಗೆ ಉತ್ತೇಜನ ನೀಡುವ ಉದ್ದೇಶದಿಂದ…