ಬೆಂಗಳೂರು: ಮಾಜಿ ಸಿಎಂ ಎಸ್. ಎಂ ಕೃಷ್ಣ (92) ಮಂಗಳವಾರ ನಸುಕಿನ ಜಾವ 2:30ರ ವೇಳೆಗೆ ವಿಧಿವಶರಾಗಿದ್ದಾರೆ.
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಅವರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.
ಶ್ವಾಸಕೋಶದ ಸೋಂಕು ಕಾಣಿಸಿಕೊಂಡ ಹಿನ್ನೆಲೆ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ದರು. ಡಾ. ಸತ್ಯನಾರಾಯಣ ಮೈಸೂರು, ಡಾ. ಸುನೀಲ್ ಕಾರಂತ್ ನೇತೃತ್ವದ ವೈದ್ಯರ ತಂಡ ಚಿಕಿತ್ಸೆ ನೀಡುತ್ತಿದ್ದರು.
ರಾಜಕೀಯ ಜೀವನದತ್ತ ಗಮನ ಹರಿಸಿದರೆ ಎಸ್‌ಎಂ ಕೃಷ್ಣ ಅವರು 1999 ರಿಂದ 2004ರವರೆಗೆ ಕರ್ನಾಟಕದ 16ನೇ ಮುಖ್ಯಮಂತ್ರಿಗಳಾಗಿದ್ದರು. ನಂತರ 2004 ರಿಂದ 2008ರವರೆಗೆ ಮಹಾರಾಷ್ಟ್ರದ ರಾಜ್ಯಪಾಲರಾಗಿ, ಕೇಂದ್ರ ವಿದೇಶಾಂಗ ಸಚಿವರಾಗಿಯೂ ಕಾರ್ಯ ನಿರ್ವಹಿಸಿದ್ದಾರೆ.