Wednesday, December 18
Share News

ಮಂಗಳೂರು: ಕರ್ನಾಟಕ ರಾಜ್ಯೋತ್ಸವ, ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪುರಸ್ಕೃತೆ ತೆಂಕು ತಿಟ್ಟು ಯಕ್ಷಗಾನ ರಂಗದ ಪ್ರಥಮ ವೃತ್ತಿಪರ ಯಕ್ಷಗಾನ ಭಾಗವತರಾದ ಲೀಲಾವತಿ ಬೈಪಡಿತ್ತಾಯ(77) ಶನಿವಾರ(ಡಿ14) ಇಹಲೋಕ ತ್ಯಜಿಸಿದ್ದಾರೆ.

ಕಾಸರಗೋಡಿನ ಮಧೂರಿನಲ್ಲಿ 1947 ನೇ ಮೇ 23 ರಂದು ಜನಿಸಿದ ಲೀಲಾವತಿ ಅವರು ಹಿರಿಯ ಹಿಮ್ಮೇಳವಾದಕ ಹರಿನಾರಾಯಣ ಬೈಪಡಿತ್ತಾಯರ ಪತ್ನಿ. ಚಿಕ್ಕ ವಯಸ್ಸಿನಲ್ಲಿಯೇ ತಂದೆಯನ್ನು ಕಳೆದುಕೊಂಡ ಕಾರಣಕ್ಕಾಗಿ ತಾಯಿ ತವರೂರು ಮಧೂರಿನ ಪಡುಕಕ್ಕೆಪ್ಪಾಡಿ ಎಂಬಲ್ಲಿ ಸೋದರಮಾವನ ಆಶ್ರಯದಲ್ಲಿ ಬೆಳೆದರು. ಸೋದರಮಾವ ರಾಮಕೃಷ್ಣ ಭಟ್ ಮಧೂರು ದೇವಾಲಯದಲ್ಲಿ ದೇವನೃತ್ಯ ಕಲಾವಿದರಾಗಿದ್ದರು.

ಬೆಳ್ತಂಗಡಿಯಲ್ಲಿ ಅರುವ ನಾರಾಯಣ ಶೆಟ್ಟಿ ಅವರ ಆಳದಂಗಡಿ ಮೇಳದಲ್ಲಿ ಪತಿ ಹರಿನಾರಾಯಣ ಬೈಪಾಡಿತ್ತಾಯ ಅವರರೊಂದಿಗೆ ಭಾಗವತಿಕೆ ಮಾಡಿ ಹಲವು ಯಕ್ಷಗಾನ ಕಲಾವಿದರನ್ನು ಕುಣಿಸಿ ಆ ಕಾಲದಲ್ಲಿ ಖ್ಯಾತಿ ಪಡೆದಿದ್ದರು. ಲೀಲಾವತಿ ಅಮ್ಮನವರ ಪದ್ಯ ಇದೆ ಎಂದು ಅನೇಕರು ಯಕ್ಷಗಾನಗಳಿಗೆ ಬರುತ್ತಿದ್ದರು.ಯಕ್ಷಗಾನ ರಂಗದ ಪ್ರಥಮ ವೃತ್ತಿಪರ ಯಕ್ಷಗಾನ ಭಾಗವತೆ ಎಂಬ ಖ್ಯಾತಿ ಅವರದ್ದಾಗಿತ್ತು.ಕುಂಬಳೆ, ಬಪ್ಪನಾಡು, ಸುಬ್ರಹ್ಮಣ್ಯ, ಧರ್ಮಸ್ಥಳ, ತಲಕಳ ಮೇಳಗಳಲ್ಲಿಯೂ ಭಾಗವತಿಕೆ ಮಾಡಿದ್ದರು.


Share News

Comments are closed.

Exit mobile version