ಆರೋಗ್ಯ

ಬೊಳುವಾರು: ಮಾಸಿಕ ಸಭೆ, ಉಚಿತ ಆರೋಗ್ಯ ತಪಾಸಣೆ

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಬೊಳುವಾರು ಭಾರತ್ ಕಟ್ಟಡ ಕಾರ್ಮಿಕ ಸಂಘದ ವತಿಯಿಂದ ಜೂನ್ 1ರಂದು ತಿಂಗಳ ಮಾಸಿಕ ಸಭೆ ಹಾಗೂ ಉಚಿತ ಆರೋಗ್ಯ ತಪಾಸಣಾ ಶಿಬಿರ ಸಂಘದ ಕಚೇರಿಯಲ್ಲಿ ನಡೆಯಿತು.

akshaya college

health camp

ಸಂಚಾರಿ ಆರೋಗ್ಯ ಘಟಕದ ವೈದ್ಯ ಡಾ. ಅಶ್ರಫ್ ಮಾತನಾಡಿ, ಆರೋಗ್ಯ ಸಂಚಾರಿ ಘಟಕದಲ್ಲಿ ಕಾರ್ಮಿಕರಿಗೆ ಮತ್ತು ಅವರ ಕುಟುಂಬಸ್ಥರಿಗೆ ಆರೋಗ್ಯ  ತಪಾಸಣೆಯನ್ನು ಉಚಿತವಾಗಿ ನಡೆಸಲಾಗುವುದು. ಇಲ್ಲಿ ಬಿಪಿ, ಸಕ್ಕರೆ ಕಾಯಿಲೆ, ಲಿವರ್, ಕಿಡ್ನಿ ಟೆಸ್ಟ್ ಸೇರಿದಂತೆ ಇತರ ರೋಗಗಳ ಬಗ್ಗೆಯೂ ತಪಾಸಣೆ ನಡೆಸಲಾಗುವುದು. ವಾಹನದಲ್ಲಿ ಲ್ಯಾಬ್ ಇದ್ದು, ಇಬ್ಬರು ವೈದ್ಯರು ತಪಾಸಣೆ ನಡೆಸುತ್ತಾರೆ. ಅಗತ್ಯ ಔಷಧಗಳನ್ನು ಸ್ಥಳದಲ್ಲೇ ವಿತರಿಸಲಾಗುವುದು ಎಂದರು.

ಶಿಬಿರದಲ್ಲಿ ಕಾರ್ಮಿಕರಿಗೆ ಆರೋಗ್ಯ ತಪಾಸಣೆ ನಡೆಸಲಾಯಿತು. ಸಂಚಾರಿ ಘಟಕದ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಭಾರತ್ ಕಟ್ಟಡ ಕಾರ್ಮಿಕರ ಸಂಘದ ಅಧ್ಯಕ್ಷ ಅಶ್ರಫ್, ಕಾರ್ಯದರ್ಶಿ ಪೌಲ್ ಡಿಸೋಜ, ಪ್ರಧಾನ ಕಾರ್ಯದರ್ಶಿ ಲೋಕೇಶ್, ಸಂಘದ ಸಮಿತಿ ಸದಸ್ಯರು ಮತ್ತು ಕಟ್ಟಡ ಕಾರ್ಮಿಕರು ಭಾಗವಹಿಸಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಜಿಲ್ಲಾಸ್ಪತ್ರೆಯಲ್ಲಿ ಕೈಕೊಟ್ಟ ವಿದ್ಯುತ್!! ಮೊಬೈಲ್ ಬೆಳಕಲ್ಲೇ ಹೆರಿಗೆ ಮಾಡಿಸಿದ ಜಿಮ್ಸ್ ಆಸ್ಪತ್ರೆ ಸಿಬ್ಬಂದಿ.!!

ಆಸ್ಪತ್ರೆಯಲ್ಲಿ ಮಂಗಳವಾರ ಇಡೀ ರಾತ್ರಿ ಏಕಾಏಕಿ ವಿದ್ಯುತ್‌ ಕೈ ಕೊಟ್ಟ ಪರಿಣಾಮ ವೈದ್ಯರು ಮೊಬೈಲ್…