ರಾಜ್ಯದಲ್ಲಿ ಮತ್ತೆ ಕೊರೊನಾ ಆತಂಕ ಹೆಚ್ಚಾಗುತ್ತಿದ್ದು, ಕಳೆದ 24ಗಂಟೆಯಲ್ಲಿ 57ಮಂದಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 894ಕ್ಕೆ ಏರಿಕೆಯಾಗಿದೆ.
ಇನ್ನೂ ರಾಜ್ಯದಲ್ಲಿ ನಿನ್ನೆ ಕೊರೊನಾದಿಂದ ಇಬ್ಬರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ಇಂದು ಒಟ್ಟು 542ಜನರನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದ್ದು, ಆ ಪೈಕಿ 57ಜನರಿಗೆ ಪಾಸಿಟಿವ್ ದೃಢಪಟ್ಟಿದೆ. 356ಮಂದಿ ಮನೆ ಆರೈಕೆಯಲ್ಲಿದ್ದಾರೆ. 13ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ ಎಂದು ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ ತಿಳಿಸಿದೆ.