ತಿರುವನಂತಪುರ: ಕೇರಳಕ್ಕೆ ಮತ್ತೆ ನಿಫಾ ಸೋಂಕು ವಕ್ಕರಿಸಿದ್ದು, ಪಾಲಕ್ಕಾಡ್‌ನ 38 ವರ್ಷದ ಮಹಿಳೆಯೊಬ್ಬರಿಗೆ ಸೋಂಕು ದೃಢಪಟ್ಟಿದೆ. ಇದಲ್ಲದೇ ಮತ್ತೊ ಬ್ಬರಲ್ಲಿ ಸೋಂಕಿನ ಲಕ್ಷಣಗಳು ಕಂಡು ಬಂದಿದ್ದು, ಈ ಹಿನ್ನೆಲೆಯಲ್ಲಿ ಕೇರಳದ 3 ಜಿಲ್ಲೆಗಳಲ್ಲಿ ಶುಕ್ರವಾರ ಹೈ ಅಲರ್ಟ್ ಘೋಷಿಸಲಾಗಿದೆ.
ಜತೆಗೆ, ಎಲ್ಲರೂ ಎಚ್ಚರಿಕೆಯಿಂದ ಇರುವಂತೆ ಸಾರ್ವಜನಿಕರಿಗೆ ಸರಕಾರ ಸೂಚಿಸಿದೆ.ಸೋಂಕಿತ ಮಹಿಳೆಯನ್ನು ಮಲ ಪುರಂನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡ ಲಾಗುತ್ತಿದೆ. ಸೋಂಕಿತೆ ಜತೆ ಸಂಪರ್ಕದಲ್ಲಿದ್ದ 58 ಮಂದಿಯನ್ನು ಗುರುತಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಾಲಕ್ಕಾಡ್ ಜಿಲ್ಲೆಯಲ್ಲಿ ಅಂಗಡಿಗಳು ಬೆಳಗ್ಗೆ 8ರಿಂದ ಸಂಜೆ 6ರ ವರೆಗೆ ಮಾತ್ರವೇ ತೆರೆದಿರಬೇಕು, ಸಾರ್ವಜನಿಕ ಕಾರ್ಯಕ್ರಮಗಳಿಗೆ ಅವಕಾಶವಿಲ್ಲ ಎಂದು ಜಿಲ್ಲಾಡಳಿತ ಹೇಳಿದೆ.
(