ಆರೋಗ್ಯ

ಕರ್ನಾಟಕಕ್ಕೂ ಕಾಲಿಟ್ಟ HMPV’: ಬೆಂಗಳೂರಿನಲ್ಲಿ 8 ತಿಂಗಳ ಮಗುವಿನಲ್ಲಿ ಸೋಂಕು ದೃಢ.!

GL
ಕೊರೊನಾ ಬಳಿಕ ಎಚ್‌ಎಂಪಿವಿ (HMPV) ವೈರಸ್ ಜನರನ್ನು ಭಯಭೀತರನ್ನಾಗಿ ಮಾಡುತ್ತಿದೆ. ಸದ್ಯ ಬೆಂಗಳೂರಿನಲ್ಲಿ (Bangalore) 8 ತಿಂಗಳ ಮಗುವಿನಲ್ಲಿ ಎಚ್‌ಎಂಪಿವಿ (HMPV) ವೈರಸ್ ದೃಢಪಟ್ಟಿದೆ ಎಂದು ತಿಳಿದು ಬಂದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಕೊರೊನಾ ಬಳಿಕ ಎಚ್‌ಎಂಪಿವಿ (HMPV) ವೈರಸ್ ಜನರನ್ನು ಭಯಭೀತರನ್ನಾಗಿ ಮಾಡುತ್ತಿದೆ. ಸದ್ಯ ಬೆಂಗಳೂರಿನಲ್ಲಿ (Bangalore) 8 ತಿಂಗಳ ಮಗುವಿನಲ್ಲಿ ಎಚ್‌ಎಂಪಿವಿ (HMPV) ವೈರಸ್ ದೃಢಪಟ್ಟಿದೆ ಎಂದು ತಿಳಿದು ಬಂದಿದೆ.

chennai-shopping
maithri

ಜ್ವರ ಬಂದ ಕಾರಣ ನಗರದ ಖಾಸಗಿ ಆಸ್ಪತ್ರೆಯಲ್ಲಿ ಮಗುವನ್ನು ದಾಖಲಿಸಲಾಗಿತ್ತು. ಈ ವೇಳೆ ರಕ್ತ ಪರೀಕ್ಷೆ ಮಾಡಿಸಿದಾಗ HMPV ವೈರಸ್ ಇರುವುದು ಪತ್ತೆಯಾಗಿದೆ (Virus detected). ಆದರೆ, ಈ ಬಗ್ಗೆ ಭಯ ಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಹರ್ಷಗುಪ್ತ ತಿಳಿಸಿದ್ದಾರೆ.

ಸೋಂಕು ಪತ್ತೆಯಾಗಿರುವ ಮಗುವಿಗೆ ಮತ್ತು ಕುಟುಂಬಸ್ಥರಿಗೆ ಟ್ರಾವೆಲ್ ಹಿಸ್ಟರಿ ಇಲ್ಲ (Child and family members have no travel history). ಈ ಹಿನ್ನೆಲೆಯ ಬಗ್ಗೆ ಆರೋಗ್ಯ ಇಲಾಖೆ ಕೂಡ ಪರಿಶೀಲನೆ ನಡೆಸುತ್ತಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

HMPV ವೈರಸ್ ಎಂದರೇನು.?

ಚೀನಿಯರನ್ನು ಆತಂಕಕ್ಕೆ ದೂಡಿದೆ ಎನ್ನಲಾಗಿರುವ ಹೂಮನ್ ಮೆಟಾಪ್ಯೂಮೋ ವೈರಸ್ (Human Meta Pneumo Virus) ಹೊಸದೇನಲ್ಲ. 2001 ರಲ್ಲಿ ಇದನ್ನು ಮೊದಲು ಕಂಡುಹಿಡಿಯಲಾಯಿತು ಎಂದು ಯುಎಸ್ ಸೆಂಟರ್ಸ್‌ ಫಾರ್ ಡಿಸೀಸ್ ಕಂಟ್ರೋಲ್ ಅಂಡ್‌ ಪ್ರಿವೆನ್ನನ್ ಹೇಳಿದೆ ಎಂದು ವರದಿಯಾಗಿದೆ.

ಈ ವೈರಸ್‌ನ ಲಕ್ಷಣಗಳು :

ಜ್ವರ ಕೆಮ್ಮು ಮೂಗು ಕಟ್ಟುವುದು ಶ್ವಾಸಕೋಶದ ಸೋಂಕು ಉಸಿರಾಟದ ತೊಂದರೆ ನ್ಯುಮೋನಿಯಾ

ವೈರಲ್ ಜ್ವರದ ಲಕ್ಷಣಗಳು ಸಾಮಾನ್ಯವಾಗಿ ಚಳಿಗಾಲದಲ್ಲಿ ಕಂಡುಬರುತ್ತವೆ (Symptoms of viral fever usually appear in winter). ಸೋಂಕಿನ 3- 6 ದಿನಗಳ ಬಳಿಕ ರೋಗ ಲಕ್ಷಣಗಳು ಕಾಣಿಸಿಕೊಳ್ಳಲು ಪ್ರಾರಂಭಿಸುತ್ತವೆ. 5 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳ ಮೇಲೆ ಇದು ಹೆಚ್ಚು ಪರಿಣಾಮ ಬೀರುತ್ತದೆ ಎಂದು ತಿಳಿದು ಬಂದಿದೆ.

ಒಟ್ಟಿನಲ್ಲಿ ಕೊರೊನಾ ಸೋಂಕಿನ ಲಕ್ಷಣಗಳು ಇಲ್ಲಿ ಗೋಚರಿಸುತ್ತಿವೆ. ಈ ವೈರಸ್ ಬಗ್ಗೆ ಚೀನಾ ಸರ್ಕಾರ ಅಥವಾ ವಿಶ್ವ ಆರೋಗ್ಯ ಸಂಸ್ಥೆ (Chinese government or the World Health Organization) ជះ ថ ಹೇಳಿಕೆಯನ್ನು ನೀಡಿಲ್ಲ.

ಇನ್ನೂ HMPV ವೈರಸ್ ಹರಡುವಿಕೆ ತಡೆಗೆ ಯಾವುದೇ ಲಸಿಕೆ ಇಲ್ಲ. ಈ ವೈರಸ್ ಬಗ್ಗೆ ನಮ್ಮ ದೇಶದಲ್ಲಿ ಸದ್ಯ ಯಾವುದೇ ರೀತಿಯಲ್ಲಿ ಆತಂಕ ಪಡುವ ಅಗತ್ಯ ಇಲ್ಲ ಎಂದು ಕೇಂದ್ರ ಆರೋಗ್ಯ (Union Ministry of Health) ಕೂಡ ಹೇಳಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts