ಕರ್ನಾಟಕ ಸರ್ಕಾರವು ಪ್ಲಾಸ್ಟಿಕ್ ಬಳಕೆಯನ್ನು ಕಡಿಮೆ ಮಾಡಲು ಹಾಗೂ ಮುಂದಿನ ದಿನಗಳಲ್ಲಿ ಸಂಪೂರ್ಣವಾಗಿ ನಿಷೇಧಿಸಲು ಮಹತ್ವದ ಕ್ರಮವೊಂದನ್ನು ಕೈಗೊಂಡಿದ್ದು ಇನ್ನು ಮುಂದೆ ರಾಜ್ಯದ ಯಾವ ಹೋಟೆಲ್ ಗಳಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ಮಾಡುವಂತಿಲ್ಲ ಎಂದು ಆದೇಶ ಹೊರಡಿಸಿದೆ.
ಹೋಟೆಲ್‌ಗಳಲ್ಲಿ ಜನಸಾಮಾನ್ಯರು ಇಡ್ಲಿ, ದೋಸೆ, ವಡೆ ಎಂದು ಉಪಹಾರ ಮಾಡುವುದನ್ನು ನೋಡಿರುತ್ತೇವೆ. ಆದರೆ ಇದೀಗ ಬೆಂಗಳೂರಿನಲ್ಲಿ ಇಡ್ಲಿ ತಿನ್ನುವ ಮುನ್ನ ಎಚ್ಚರ ವಹಿಸಿ. ಏಕೆಂದರೆ ಇಡ್ಲಿ ತಯಾರಿಕೆಗೆ ಬಳಸುವ ಪ್ಲಾಸ್ಟಿಕ್‌ನಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆಯಾಗಿದೆ ಎಂದು ಆಹಾರ ಇಲಾಖೆಯ ವರದಿಯೇ ಬಹಿರಂಗಪಡಿಸಿದೆ. ಹೀಗಾಗಿ ಇನ್ಮೂಂದೆ ಕರ್ನಾಟಕದ ಎಲ್ಲಾ ಹೋಟೆಲ್, ರಸ್ತೆ ಬದಿ ಹೋಟೆಲ್, ರೆಸ್ಟೋರೆಂಟ್ ತಳ್ಳುಗಾಡಿಗಳಲ್ಲಿ ಪ್ಲಾಸ್ಟಿಕ್ ಕವರ್ ಬಳಸುವಂತಿಲ್ಲ. ಆಹಾರ ತಯಾರಿಕೆ, ವಿತರಣೆ ವೇಳೆ ಪ್ಲಾಸ್ಟಿಕ್ ಬಳಸಬಾರದು ಎಂದು ಕರ್ನಾಟಕ ರಾಜ್ಯ ಸರ್ಕಾರದ ಆರೋಗ್ಯ ಸಚಿವ ಗುಂಡೂರಾವ್ ಹೇಳಿದ್ದಾರೆ.
ಇನ್ನು ಈ ಬಗ್ಗೆ ಪ್ರತಿಕಾಗೋಷ್ಠಿಯಲ್ಲಿ ಮಾತನಾಡಿದ ಆರೋಗ್ಯ ಸಚಿವ ದಿನೇಶ್ ಗುಂಡುರಾವ್, ಆರೋಗ್ಯ ಇಲಾಖೆ ಸಂಗ್ರಹಿಸಿದ 251 ತಿಂಡಿ ಹೋಟೆಲ್, ಅಂಗಡಿಗಳಿಂದ ಮಾದರಿಗಳನ್ನು ಪಡೆಯಲಾಗಿತ್ತು. ಇದರಲ್ಲಿ 51 ಕಡೆ ಸಂಗ್ರಹಿಸಿದ್ದ ಮಾದರಿಯಲ್ಲಿ ಅಸುರಕ್ಷಿತ ಆಹಾರವಿದೆ ಎಂದು ಪ್ರಯೋಗಾಲಯದ ಪರೀಕ್ಷೆಯಲ್ಲಿ ದೃಢಪಟ್ಟಿದೆ ಎಂದುವರದಿ ತಿಳಿಸಿದೆ. ಈ ಪ್ರಯೋಗಗಳಲ್ಲಿ ಇಡ್ಲಿ ಅಲ್ಲಿ ಕಾರ್ಸಿನೋಜೆನಿಕ್ ಅಂಶ ಪತ್ತೆಯಾಗಿದೆ. ಪ್ಲಾಸ್ಟಿಕ್‌ನಿಂದಾಗಿ ಇಡ್ಲಿಯಲ್ಲಿ
ಕಾರ್ಸಿನೋಜೆನಿಕ್ ಅಂಶ ಪತ್ತೆಯಾಗಿದೆ. ಹೀಗಾಗಿ ಜನರ ಆರೋಗ್ಯದ ದೃಷ್ಟಿಯಿಂದ ಇನ್ಮುಂದೆ ರಾಜ್ಯ ಎಲ್ಲಾ ಹೋಟೆಲ್, ರೆಸ್ಟೋರೆಂಟ್, ರಸ್ತೆಬದಿಅಂಗಡಿಗಳಲ್ಲಿ ಸಂಪೂರ್ಣವಾಗಿ ಪ್ಲಾಸ್ಟಿಕ್ ನಿಷೇಧ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.