ಕರ್ನಾಟಕದ ಹಲವೆಡೆ ಭಾರಿ ಮಳೆಯಾಗುತ್ತಿದೆ. ಇದೇ ರೀತಿ ಆಗಸ್ಟ್ 6ರವರೆಗೂ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ ಜಿಲ್ಲೆಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ಉಡುಪಿ, ಉತ್ತರ ಕನ್ನಡ, ಕೊಡಗು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್, ಶಿವಮೊಗ್ಗ, ಚಿಕ್ಕಮಗಳೂರು, ಬೆಳಗಾವಿ ಜಿಲ್ಲೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ರಾಜ್ಯದಲ್ಲಿ ದಕ್ಷಿಣ ಕನ್ನಡದಲ್ಲಿ ಮಾತ್ರ ರೆಡ್ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿರಲಿದ್ದು, ಸಾಧಾರಣ ಮಳೆಯಾಗಲಿದೆ. ಎಚ್ಎಎಲ್ನಲ್ಲಿ 27.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 26.3ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 27.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 29.2ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಹೊನ್ನಾವರದಲ್ಲಿ 30.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 31.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 27.8ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 26.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಬೀದರ್ನಲ್ಲಿ 30.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 31.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.